ರಾಯಚೂರು:ತುಂಗಭದ್ರಾ ನದಿ ತೀರಲ್ಲಿ ನ.20 ರಿಂದ ಡಿ.1ರವರೆಗೆ ನಡೆಯಲಿರುವ ತುಂಗಭದ್ರಾ ಪುಷ್ಕರಕ್ಕೆ ಆಗಮಿಸುವ ಭಕ್ತರಿಗೆ ಅಗತ್ಯ ಸೌಕರ್ಯಗಳನ್ನು ಒದಗಿಸಲು ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಮಂತ್ರಾಲಯ ಶ್ರೀ ರಾಘವೇಂದ್ರಸ್ವಾಮಿ ಮಠದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥರು ತಿಳಿಸಿದರು.
ಮಂತ್ರಾಲಯದ ಶ್ರೀಮಠದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ತುಂಗಭದ್ರಾ ನದಿಗೆ 12 ವರ್ಷಗಳಿಗೊಮ್ಮೆ ಬರುವ ಪುಷ್ಕರ ಆಚರಣೆಗೆ ಸಿದ್ಧತೆಗಳು ಪೂರ್ಣಗೊಂಡಿದ್ದು, ಆಂಧ್ರ ಮತ್ತು ಕರ್ನಾಟಕದ ಮುಖ್ಯಮಂತ್ರಿಗಳಿಗೆ ಪುಷ್ಕರದಲ್ಲಿ ಪಾಲ್ಗೊಳ್ಳುವಂತೆ ಆಹ್ವಾನ ನೀಡಲಾಗಿದೆ. ಮಂತ್ರಾಲಯದ ತುಂಗಭದ್ರಾ ನದಿ ತೀರದಲ್ಲಿ ಐದು ಕಡೆ ಸ್ನಾನಘಟ್ಟಗಳನ್ನು ನಿರ್ಮಾಣ ಮಾಡಲಾಗುತ್ತಿದೆ. ಕರೊನಾ ಹಿನ್ನೆಲೆಯಲ್ಲಿ ಮುಂಜಾಗ್ರತೆ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಪೊಲೀಸ್ ಹಾಗೂ ಆರೋಗ್ಯ ಇಲಾಖೆ ಸಿಬ್ಬಂದಿ ಸಹಕಾರದೊಂದಿಗೆ ಸೋಂಕು ಹರಡದಂತೆ ಅಗತ್ಯ ಕ್ರಮಕೈಗೊಳ್ಳಲಾಗುತ್ತಿದೆ ಎಂದರು.
ನ.20ರ ಬೆಳಗ್ಗೆ 6ಕ್ಕೆ ಶ್ರೀಮಠದಿಂದ ತುಂಗಭದ್ರಾ ನದಿ ತೀರದಲ್ಲಿ ಉತ್ಸವರಾಯರ ಮೂರ್ತಿಯೊಂದಿಗೆ ತೆರಳಿ ಪೂಜೆ ಸಲ್ಲಿಸಲಾಗುತ್ತಿದೆ. ನಂತರದಲ್ಲಿ ನದಿಯಲ್ಲಿ ಪುಣ್ಯ ಸ್ನಾನಕ್ಕೆ ಭಕ್ತರಿಗೆ ಅವಕಾಶ ನೀಡಲಾಗುತ್ತಿದೆ. ನದಿ ತೀರಕ್ಕೆ ಆಗಮಿಸುವವರಿಗೆ ಕೋವಿಡ್ ಮಾರ್ಗಸೂಚಿ ಅನುಸರಿಸುವಂತೆ ಸೂಚನೆ ನೀಡಲಾಗುತ್ತಿದೆ. ಶ್ರೀಮಠಕ್ಕೆ ಆರ್ಥಿಕ ನಷ್ಟ ಉಂಟಾಗಿದ್ದರೂ ನೆರವು ನೀಡುವಂತೆ ಯಾವುದೇ ಸರ್ಕಾರಕ್ಕೂ ಮನವಿ ಮಾಡುವುದಿಲ್ಲ. ರಾಯರ ಮಠ ಭಕ್ತರ ಆಸ್ತಿಯಿದ್ದಂತೆ, ಭಕ್ತರು ಶ್ರೀಮಠಕ್ಕೆ ಉದಾರತೆ ತೋರುವ ಮೂಲಕ ಆರ್ಥಿಕ ಚೇತರಿಕೆಗೆ ಕಾರಣರಾಗಲಿದ್ದಾರೆ ಎನ್ನುವ ವಿಶ್ವಾಸವಿದೆ ಎಂದು ಶ್ರೀ ಸುಬುಧೇಂದ್ರ ತೀರ್ಥರು ತಿಳಿಸಿದರು.
ಈ ಸಂದರ್ಭ ಶ್ರೀಮಠದ ವ್ಯವಸ್ಥಾಪಕ ವೆಂಕಟೇಶ ಜೋಷಿ, ಅಧಿಕಾರಿಗಳಾದ ಮಾಧವಶೆಟ್ಟಿ, ಶ್ರೀಪತಿ ಉಪಸ್ಥಿತರಿದ್ದರು.
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
Sign in to your account
Please enter an answer in digits:seven + nineteen =
Remember me
