ರಾಜ್ಯದಲ್ಲಿ ನಡೆಯುತ್ತಿರುವ ಎರಡನೇ ಹಂತದ ಚುನಾವಣೆಗೆ ನಾಳೆ ಮತದಾನ ನಡೆಯಲಿದ್ದು, 14 ಲೋಕಸಭಾ ಕ್ಷೇತ್ರಗಳಲ್ಲೂ ಚುನಾವಣಾ ಆಯೋಗ ಸಕಲ ಸಿದ್ಧತೆ ಮಾಡಿಕೊಂಡಿದೆ. ಮಾಜಿ ಸಿಎಂಗಳಾದ ಬಸವರಾಜ ಬೊಮ್ಮಾಯಿ, ಜಗದೀಶ್ ಶೆಟ್ಟರ್, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸೇರಿ 227 ಅಭ್ಯರ್ಥಿಗಳ ರಾಜಕೀಯ ಭವಿಷ್ಯ ನಿರ್ಧರಿಸುವ ಚುನಾವಣೆಯ ಬಹಿರಂಗ ಪ್ರಚಾರಕ್ಕೆ ತೆರೆ ಬಿದ್ದಿದೆ.
ಮೇ 7ರಂದು ಮತದಾನ ನಡೆಯಲಿದ್ದು, ಇನ್ನೇನಿದ್ದರೂ ಅಭ್ಯರ್ಥಿಗಳು ಮನೆ ಮನೆಗೆ ತೆರಳಿ ಪ್ರಚಾರ ಮಾಡಬೇಕಿದೆ. ಸೋಮವಾರ ಬೆಳಗ್ಗೆ ಮಸ್ಟರಿಂಗ್ ಪ್ರಕ್ರಿಯೆ ನಡೆಯಲಿದೆ. ಚುನಾವಣಾ ಸಿಬ್ಬಂದಿ ಗುರುತಿಸಲ್ಪಟ್ಟ ಸ್ಥಳಗಳಿಂದ ಮತದಾನಕ್ಕೆ ಪೂರಕ ಸಾಮಗ್ರಿಗಳನ್ನು ನಿರ್ದಿಷ್ಟಪಡಿಸಿದ ಮತಗಟ್ಟೆಗಳಿಗೆ ಕೊಂಡೊಯ್ಯಲಿದ್ದಾರೆ.
ಮತಗಟ್ಟೆಗಳಲ್ಲಿ ಮತದಾರರಿಗೆ ಚುನಾವಣಾ ಆಯೋಗ ಮೂಲಸೌಕರ್ಯ ಕಲ್ಪಿಸಿದೆ. ಬಿಸಿಲಿನ ಬೇಗೆಯಿಂದ ಮತದಾನ ಕಡಿಮೆಯಾಗದಂತೆ ಎಲ್ಲ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ. ಮತಗಟ್ಟೆಗಳಲ್ಲಿ ಜ್ಯೂಸ್, ಕುಡಿಯಲು ನೀರು, ಕುಳಿತುಕೊಳ್ಳಲು ಕುರ್ಚಿ, ನೆರಳಿಗೆ ಶಾಮಿಯಾನ ಮತ್ತಿತರ ಸವಲತ್ತುಗಳನ್ನು ಕಲ್ಪಿಸಿದೆ.
ಮದ್ಯ ಮಾರಾಟಕ್ಕೆ ನಿಷೇಧ: ಮತದಾನದ ಅವಧಿ ಮುಗಿಯುವವರೆಗೆ ಮದ್ಯ ಮಾರಾಟಕ್ಕೆ ಅನುಮತಿ ಇಲ್ಲ. ಬೇರೆ ರಾಜ್ಯಗಳಿಂದಲೂ ಮದ್ಯ ತರುವಂತಿಲ್ಲ. ಕರ್ನಾಟಕ ಗಡಿಯಿಂದ 5 ಕಿ.ಮೀ ವ್ಯಾಪ್ತಿಯಲ್ಲಿರುವ ಇತರ ರಾಜ್ಯಗಳ ಮದ್ಯದಂಗಡಿಗಳನ್ನು ಮುಚ್ಚಲು ಸೂಚಿಸಲಾಗಿದೆ.
ಸಾರ್ವತ್ರಿಕ ರಜೆ:ನೆರೆಯ ರಾಜ್ಯಗಳ ರಾಜ್ಯ ಸರ್ಕಾರಗಳಿಗೆ ಮತದಾನ ಮಾಡಲು ಅವಕಾಶ ನೀಡಲು ಎಲ್ಲ ಉದ್ಯೋಗಿಗಳು ಮತ್ತು ಕಾರ್ವಿುಕರಿಗೆ ಮೇ 7ರಂದು ವೇತನ ಸಹಿತ ರಜೆ ನೀಡುವಂತೆ ಕೋರಲಾಗಿದೆ. ಈ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಬರುವ ಎಲ್ಲ ಸರ್ಕಾರಿ ಕಚೇರಿಗಳು, ಶಿಕ್ಷಣ ಸಂಸ್ಥೆಗಳು ಮತ್ತು ಸಾರ್ವಜನಿಕ ವಲಯದ ಸಂಸ್ಥೆಗಳಿಗೆ ಮತದಾನದ ದಿನ ರಾಜ್ಯ ಸರ್ಕಾರ ಸಾರ್ವತ್ರಿಕ ರಜೆ ಘೊಷಿಸಿದೆ.
2.59 ಕೋಟಿ ಮತದಾರರಿಗೆ ಹಕ್ಕು
ಒಟ್ಟು 2,59,52,958 ಮತದಾರರು ಮತದಾನ ಮಾಡುವ ಹಕ್ಕು ಪಡೆದಿದ್ದಾರೆ. ಒಟ್ಟು 28,269 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ರಾಷ್ಟ್ರಿಯ ಪಕ್ಷಗಳಾದ ಕಾಂಗ್ರೆಸ್, ಬಿಜೆಪಿ ಎಲ್ಲ 14 ಕ್ಷೇತ್ರ್ರಳಲ್ಲೂ ಸ್ಪರ್ಧಿಸಿವೆ. ಬಿಎಸ್​ಪಿ 9, ನೋಂದಾಯಿತ ಮಾನ್ಯತೆ ಪಡೆದ ರಾಜಕೀಯ ಪಕ್ಷಗಳಿಂದ 73 ಹಾಗೂ 117 ಸ್ವತಂತ್ರ ಅಭ್ಯರ್ಥಿಗಳು ಚುನಾವಣಾ ಕಣದಲ್ಲಿದ್ದಾರೆ. ಈ ಪೈಕಿ 206 ಪುರುಷರು, 21 ಮಹಿಳಾ ಅಭ್ಯರ್ಥಿಗಳಿದ್ದಾರೆ.
ವಿದೇಶಿಗರಿಂದ ಪರಿವೀಕ್ಷಣೆ
ಚುನಾವಣಾ ಪ್ರಕ್ರಿಯೆ ವೀಕ್ಷಿಸಲು ಐದು ದೇಶಗಳ ಅಂತಾರಾಷ್ಟ್ರೀಯ ಚುನಾವಣಾ ಆಯುಕ್ತರು ಬೆಳಗಾವಿಗೆ ಆಗಮಿಸಿದ್ದು, ಸೋಮವಾರ ಮತ್ತು ಮಂಗಳವಾರ ಚುನಾವಣಾ ಸಿದ್ಧತೆ, ಮತದಾನದ ಪಾರದರ್ಶಕತೆಯನ್ನು ಪರಿವೀಕ್ಷಣೆ ಮಾಡಲಿದ್ದಾರೆ.
5 ರೂ. ಪಾರ್ಲೆ-ಜಿ ಬಿಸ್ಕತ್​ ಬೆಲೆ ದುಬೈ, ಪಾಕಿಸ್ತಾನ ರಾಷ್ಟ್ರಗಳಲ್ಲಿ ಎಷ್ಟಿದೆ ಗೊತ್ತಾ? ಕೇಳಿದ್ರೆ ದಂಗಾಗ್ತೀರಾ!

ಈತ ಕ್ರೀಸ್​ಗೆ ಬಂದ್ರೆ ಬೌಲರ್​ಗಳೇ ಬೆವರುತ್ತಾರೆ! ಅಜಯ್​ ಜಡೇಜಾ ಹೆಸರಿಸಿದ ಸ್ಟಾರ್​ ಬ್ಯಾಟ್ಸ್​ಮನ್ ಇವರೇ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:one + one =
Remember me
