ಬೆಂಗಳೂರು:ಎಸ್ಸೆಸ್ಸೆಲ್ಸಿ ಪೂರ್ವ ಸಿದ್ಧತಾ ಪರೀಕ್ಷೆಯ ಗಣಿತ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ ಸಂಬಂಧ ಅಪ್ರಾಪ್ತ 14 ವಿದ್ಯಾರ್ಥಿಗಳನ್ನು ಉತ್ತರ ವಿಭಾಗದ ಸಿಇಎನ್ ಪೊಲೀಸರು ವಿಚಾರಣೆ ನಡೆಸಿದ್ದು, ಪ್ರಮುಖ ಆರೋಪಿಗಾಗಿ ಕಾರ್ಯಾಚರಣೆ ಮುಂದುವರಿದಿದೆ.
ಇವರು ಕೋಲಾರ ಮತ್ತು ಬಂಗಾರಪೇಟೆಯ 3 ಶಾಲೆಗಳ ವಿದ್ಯಾರ್ಥಿಗಳಾಗಿದ್ದು, ಈ ಬಗ್ಗೆ ಪಾಲಕರು ಮತ್ತು ಶಿಕ್ಷಕರಿಗೆ ಮಾಹಿತಿ ನೀಡಲಾಗಿದೆ ಎಂದು ಉತ್ತರ ವಿಭಾಗ ಡಿಸಿಪಿ ಶಶಿಕುಮಾರ್ ತಿಳಿಸಿದ್ದಾರೆ. ಹಲೋ ಆಪ್​ನಲ್ಲಿ ಅಪ್​ಲೋಡ್ ಆಗಿದ್ದ ಗಣಿತ ಪ್ರಶ್ನೆಪತ್ರಿಕೆಯನ್ನು ಡೌನ್​ಲೋಡ್ ಮಾಡಿಕೊಂಡ ವಿದ್ಯಾರ್ಥಿಗಳು ಮುಖ್ಯಪರೀಕ್ಷೆ ಸಿದ್ಧತೆ ನಡೆಸಲು ವಾಟ್ಸ್​ಆಪ್ ಗ್ರೂಪ್​ನಲ್ಲಿ ಹಂಚಿಕೊಂಡಿದ್ದರು.
ಈ ಬಗ್ಗೆ ಫೆ.15ರಂದು ಕರ್ನಾಟಕ ಪ್ರೌಢಶಿಕ್ಷಣ ಮಂಡಳಿ ಅಧಿಕಾರಿಗಳು ಉತ್ತರ ವಿಭಾಗದ ಸಿಇಎನ್ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ವಿಶೇಷ ತಂಡ ಹಲೋ ಆಪ್ ಸುಳಿವಿನ ಮೇರೆಗೆ 14 ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಆದರೆ, ಈ ವಿದ್ಯಾರ್ಥಿಗಳಿಗೆ ಹಲೋ ಆಪ್ ಬಗ್ಗೆ ತಿಳಿಸಿದ ಪ್ರಮುಖ ವ್ಯಕ್ತಿ ಯಾರೆಂಬುದು ಗೊತ್ತಾಗಿಲ್ಲ. ವಿದ್ಯಾರ್ಥಿಗಳ ಮೊಬೈಲ್​ಗಳನ್ನು ಸಿಐಡಿ ಸೈಬರ್ ಲ್ಯಾಬ್​ಗೆ ರವಾನಿಸಲಾಗಿದೆ.
ಮೊದಲು ಪ್ರಶ್ನೆ ಪತ್ರಿಕೆ ಅಪ್​ಲೋಡ್ ಮಾಡಿದವನ ಬಗ್ಗೆ ಹಲೋ ಆಪ್ ಅಭಿವೃದ್ಧಿ ಪಡಿಸಿದ ಕಂಪನಿ ಬಳಿ ಮಾಹಿತಿ ಕೇಳಲಾಗಿದೆ. ಪ್ರಶ್ನೆಪತ್ರಿಕೆ ಸೋರಿಕೆ ಸುದ್ದಿ ಹರಡುತ್ತಿದಂತೆ ಆಪ್ ಡಿಲೀಟ್ ಮಾಡಲಾಗಿದೆ. ರಾಕೇಶ್ 8105 ಐಡಿ ಯಿಂದ ಅಪ್​ಲೋಡ್ ಆಗಿರುವ ಸುಳಿವು ಸಿಕ್ಕಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fifteen − fifteen =
Remember me
