ಚಿತ್ರದುರ್ಗ:ನರೇಂದ್ರ ಮೋದಿ ಅವರನ್ನು ಮೂರನೇ ಸಲ ಪ್ರಧಾನಿ ಆಗಿಸುವ ನಿಟ್ಟಿನಲ್ಲಿ ಸಾಮಾಜಿಕ ಚಿಂತಕ ಚಕ್ರವರ್ತಿ ಸೂಲಿಬೆಲೆ ನೇತೃತ್ವದ ಯುವ ಬ್ರಿಗೇಡ್ ಸಜ್ಜಾಗಿದೆ. ಈ ನಿಟ್ಟಿನಲ್ಲಿ ನಮೋ ಬ್ರಿಗೇಡ್ 2.0ಗೆ ಚಾಲನೆ ನೀಡುವ ಹಿನ್ನೆಲೆಯಲ್ಲಿ ಯುವ ಬ್ರಿಗೇಡ್ ಕಾರ್ಯಕರ್ತರ ಪೂರ್ವಭಾವಿ ಸಭೆಗಳು ನಡೆಯುತ್ತಿವೆ.
ಇಂದು ಕೋಟೆನಾಡು ಚಿತ್ರದುರ್ಗದಲ್ಲಿ ಚಕ್ರವರ್ತಿ ಸೂಲಿಬೆಲೆ ಭೇಟಿ ನೀಡಿದ್ದು, ಇಲ್ಲಿನ ಮೆದೆಹಳ್ಳಿ ರಸ್ತೆಯ ರೋಟರಿ ಭವನದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಪಾಲ್ಗೊಂಡರು. ಈ ಸಭೆಯಲ್ಲಿ ಯುವ ಬ್ರಿಗೇಡ್ ಕಾರ್ಯಕರ್ತರು ಮತ್ತು ಮೋದಿ ಅಭಿಮಾನಿಗಳು ಪಾಲ್ಗೊಂಡರು.
ಇದನ್ನೂ ಓದಿ:ನಾಚಿಕೆ-ಅವಮಾನ ಸಹಿಸಿಕೊಂಡು ಬಯಲಲ್ಲೇ ದೇಹದ ಒತ್ತಡ ನಿವಾರಿಸಿಕೊಂಡೆ: ಟಾಯ್ಲೆಟ್ ಇರದೆ ಪಟ್ಟ ಕಷ್ಟದ ಬಗ್ಗೆ ರಾಷ್ಟ್ರಪತಿಗೇ ಪತ್ರ ಬರೆದ ಮಹಿಳೆ
ಮೂರನೇ ಬಾರಿಗೆ ನರೇಂದ್ರ ಮೋದಿಯನ್ನು ಪ್ರಧಾನಿ ಮಾಡುವಂತೆ ಈ ಸಭೆಯಲ್ಲಿ ಸಂಕಲ್ಪ ತೊಡಲಾಯಿತು. ಉತ್ತರ ಭಾರತದಲ್ಲಿ ಪ್ರಧಾನಿ ಆಗಬಹುದಾದವರು ಬಹಳಷ್ಟು ಮಂದಿ ಇದ್ದರೂ ಅವರನ್ನು ನಾಯಕ ಎಂದು ಇಡೀ ದೇಶದ ಎಲ್ಲರಿಗೂ ಒಪ್ಪಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಆದರೆ ಬಹಳಷ್ಟು ವರ್ಷಗಳ ಬಳಿಕ ಇಡೀ ದೇಶದಲ್ಲಿ ಜನರನ್ನು ಒಂದುಗೂಡಿಸಲು ಸಾಧ್ಯವಾಗಿದ್ದು ನರೇಂದ್ರ ಮೋದಿಗೆ ಮಾತ್ರ ಎಂದು ಸೂಲಿಬೆಲೆ ಹೇಳಿದರು.
ಒಂದೇ ಹಗ್ಗದಲ್ಲಿ ಕೊನೆಯಾಯ್ತು ಯೋಧನ ಪತ್ನಿ-ಪುತ್ರಿಯ ಬದುಕು: ಮಗಳೊಂದಿಗೆ ನೇಣು ಬಿಗಿದುಕೊಂಡ ತಾಯಿ!
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four + twenty =
Remember me
