ದಕ್ಷಿಣ ಕನ್ನಡ:ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತೀವ್ರ ಮಳೆಯಾಗುತ್ತಿರುವುದರಿಂದ ಜಿಲ್ಲಾಡಳಿತ ಸಂಪೂಣ೯ ಸನ್ನದ್ಧವಾಗಿರಲು ಆರೋಗ್ಯ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಸೂಚಿಸಿದ್ದಾರೆ.
ಇದನ್ನೂ ಓದಿ:ಮಣಿಪುರದಲ್ಲಿ ಭೂ ಕುಸಿತ: ಇಬ್ಬರ ಸಾವು
ಅವರು ಮಂಗಳವಾರ ಜಿಲ್ಲಾಧಿಕಾರಿ ಹಾಗೂ ಇತರೆ ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫೆರೆನ್ಸ್ ಮೂಲಕ ಸಭೆ ನಡೆಸಿ, ಜಿಲ್ಲೆಯ ಮಳೆ ಹಾನಿ ಪರಿಸ್ಥಿತಿಯನ್ನು ಪರಾಮಶೆ೯ ನಡೆಸಿದರು. ತುತು೯ ಸಂದಭ೯ದಲ್ಲಿ ಕಾಯಾ೯ಚರಣೆಗೆ ತುತು೯ ಸ್ಪಂದನಾ ಪಡೆ ಸದಾ ಸನ್ನದ್ಧವಾಗಿರಬೇಕು. ಮುಳುಗಡೆ ಪ್ರದೇಶದ ನಿವಾಸಿಗಳನ್ನು ಆದ್ಯತೆಯಲ್ಲಿ ಸ್ಥಳಾಂತರಿಸಬೇಕು ಎಂದು ತಿಳಿಸಿದರು.
ಮಳೆ ಹಾಗೂ ಪ್ರವಾಹ, ಭೂಕುಸಿತ ಪರಿಸ್ಥಿತಿಯನ್ನು ನಿರ್ವಹಿಸುವ ಕುರಿತಂತೆ ಇಂದು ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿಗಳು & ಇತರ ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಸ್ಫರೆನ್ಸ್ ಮೂಲಕ ಸಭೆ ನಡೆಸಿ ಸಲಹೆ ಸೂಚನೆ ನೀಡಿದೆ.
▶️ ಭೂಕುಸಿತ ಉಂಟಾಗಿ ರಸ್ತೆ ಸಂಚಾರಕ್ಕೆ ಅಡಚಣೆಯಾಗಿರುವ ಪ್ರದೇಶಗಳಲ್ಲಿ ಶೀಘ್ರವಾಗಿ ತೆರವು ಕಾರ್ಯಾಚರಣೆ ನಡೆಸಬೇಕು
▶️…pic.twitter.com/qv6ZQ7VMYA
— Dinesh Gundu Rao/ದಿನೇಶ್ ಗುಂಡೂರಾವ್ (@dineshgrao)July 30, 2024

ನದಿ ಪಾತ್ರ ಹಾಗೂ ಕಡಲಕೊರತೆ ಪ್ರದೇಶಗಳಲ್ಲಿ ಪರಿಹಾರ ಕಾಯಾ೯ಚರಣೆಗೆ ಸುಸಜ್ಜಿತ ತಂಡ ಇಡಬೇಕು. ಭೂಕುಸಿತದಿಂದ ರಸ್ತೆ ಸಂಚಾರಕ್ಕೆ ಅಡಚಣೆ ಉಂಟಾದರೆ, ಶೀಘ್ರವಾಗಿ ತೆರವುಗೊಳಿಸಬೇಕು. ವಿದ್ಯುತ್ ಕಂಬಗಳು ಬಿದ್ದ ಪ್ರಕರಣಗಳಲ್ಲಿ ಕೂಡಲೇ ಕ್ರಮ ಕೈಗೊಂಡು ವಿದ್ಯುತ್ ಪುನರ್ ಸ್ಥಾಪಿಸಬೇಕು ಎಂದು ದಿನೇಶ್ ಗುಂಡೂರಾವ್ ಹೇಳಿದರು.
ಸಾವ೯ಜನಿಕ, ಜನ ಜಾನುವಾರು ಜೀವ ರಕ್ಷಣೆಗೆ ಆದ್ಯತೆ ನೀಡಬೇಕು. ಎಲ್ಲ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿದ್ದುಕೊಂಡು ಮಳೆ ಪರಿಸ್ಥಿತಿ ಮೇಲೆ ನಿಗಾ ಇಡಬೇಕು. ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ಪರಿಸ್ಥಿತಿ ಬಗ್ಗೆ ನೆರೆಯ ಜಿಲ್ಲೆಗಳೊಂದಿಗೆ ಸಂಪಕ೯ದಲ್ಲಿದ್ದು, ಸಮನ್ವಯತೆಯಿಂದ ಕಾಯಾ೯ಚರಿಸುವಂತೆ ತಿಳಿಸಿದರು. ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಅವರು ಜಿಲ್ಲೆಯಲ್ಲಿ ಮಳೆ ಪರಸ್ಥಿತಿ ಬಗ್ಗೆ ಸಚಿವರಿಗೆ ವಿವರ ನೀಡಿದರು.
ಕರ್ನಾಟಕದಲ್ಲೂ ಪ್ರವಾಹ, ಭೂಕುಸಿತ: ಕಟ್ಟೆಚ್ಚರ ವಹಿಸುವಂತೆ ಸಿಎಂ ಸಿದ್ದರಾಮಯ್ಯ ಖಡಕ್​ ಸೂಚನೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seventeen − thirteen =
Remember me
