ಬೆಂಗಳೂರು:4ನೇ ಗ್ಯಾರಂಟಿ ಭಾಗ್ಯಲಕ್ಷ್ಮಿ ಯೋಜನೆಯನ್ನು ಜಾರಿಗೆ ತರಲು ಯೋಜಿಸಿರುವ ಸರ್ಕಾರ, ಈ ನಿಟ್ಟಿನಲ್ಲಿ ಯುದ್ದೋಪಾದಿಯಲ್ಲಿ ಸಿದ್ಧತೆಯನ್ನು ನಡೆಸುತ್ತಿದೆ. ಆ.27ರಂದು ರಾಜ್ಯದ 11 ಸಾವಿರ ಕಡೆ ಚಾಲನೆ ನೀಡಲು ಉದ್ದೇಶಿಸಲಾಗಿದೆ.
ವಿಕಾಸಸೌಧದಲ್ಲಿ ಗುರುವಾರ ಎಲ್ಲಾ ಜಿಲ್ಲಾಡಳಿತ ಜೊತೆಗೆ ವಿಡಿಯೊ ಸಂವಾದ ನಡೆಸಿದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು, ಯೋಜನೆಯ ಗ್ಯಾರಂಟಿ ಕಾರ್ಡ್ ಮತ್ತು ಸರ್ಕಾರದ ಪತ್ರವನ್ನು ಅರ್ಹ ಲಾನುಭವಿಗಳ ಮನೆಗೆ ನೀಡಬೇಕು ಎಂದು ಸೂಚಿಸಿದರು.
ಇದು ನಮ್ಮ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದೆ. ಇಡೀ ದೇಶದಲ್ಲಿ 35 ಸಾವಿರ ಕೋಟಿ ರೂಗಳನ್ನು ಒಂದು ಯೋಜನೆಗೆ ವೆಚ್ಚ ಮಾಡುತ್ತಿರುವುದು ಕರ್ನಾಟಕ ಸರ್ಕಾರ ಮಾತ್ರ. ಆದ್ದರಿಂದ ಈ ಯೋಜನೆಯನ್ನು ಪ್ರತಿ ಮನೆಯ ಯಜಮಾನಿಗೆ ತಲುಪಿಸಲು ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ನಿರ್ದೇಶನ ನೀಡಿದರು.
ಸರ್ಕಾರ ಈಗಾಗಲೇ ರೂಪಿಸಿರುವ ಮಾರ್ಗಸೂಚಿಯ ಪ್ರಕಾರ ಯೋಜನೆಯ ಅನುಷ್ಠಾನಕ್ಕೆ ಎಲ್ಲಾ ಸಿದ್ಧತೆಗಳನ್ನು ಜಿಲ್ಲಾಡಳಿತ ಮಾಡಿಕೊಳ್ಳಬೇಕು. ಗ್ರಾಪಂ ಸಿಬ್ಬಂದಿ ಮತ್ತು ಅಂಗನವಾಡಿ ಕಾರ್ಯಕರ್ತೆಯರನ್ನು ಯೋಜನೆಯಲ್ಲಿ ಬಳಸಿಕೊಳ್ಳಲು ಜಿಲ್ಲಾಡಳಿತ ಮುಂದಾಗಬೇಕು. ಪಂಚಾಯಿತಿಗೊಬ್ಬ ನೋಡಲ್ ಅಧಿಕಾರಿಯನ್ನು ನೇಮಕ ಮಾಡಿ ಪ್ರಗತಿ ಪರಿಶೀಲನೆ ಮಾಡಬೇಕು ಎಂದು ಡಿಕೆಶಿ ಸೂಚಿಸಿದರು.
1.05 ಕೋಟಿ ಯಜಮಾನಿಯರುನೋಂದಣಿ ಪ್ರಕ್ರಿಯೆ ನಿರಂತರಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ಸಂಪುಟದಲ್ಲಿ ವ್ಯಕ್ತವಾದ ಸಲಹೆ ಮೇರೆಗೆ ಉದ್ಘಾಟನೆ ದಿನವನ್ನು ಬದಲಿಸಲಾಗಿದ್ದು, ಬೆಳಗಾವಿಯಲ್ಲಿ ಯೋಜನೆಗೆ ಆ.27ರಂದು ಚಾಲನೆ ನೀಡಲಾಗುವುದು ಎಂದು ಹೇಳಿದರು.
ರಾಜ್ಯದ 1.05 ಕೋಟಿ ಯಜಮಾನಿಯರಿಗೆ ಈ ಯೋಜನೆ ತಲುಪಲಿದೆ. ನೋಂದಣಿ ಪ್ರಕ್ರಿಯೆ ನಿರಂತರವಾಗಿರಲಿದೆ. ಗೃಹಲಕ್ಷ್ಮಿ ಯೋಜನೆಯ ಲಾನುಭವಿಗಳಿಗೆ ಐಡಿ ಕಾರ್ಡ್ ಮತ್ತು ಸರ್ಕಾರದ ಆದೇಶದ ಪ್ರತಿಯನ್ನು ತಲುಪಿಸಲಾಗುವುದು ಎಂದು ಹೇಳಿದರು.
ದೇಶದಲ್ಲಿಯೇ ಇದು ವಿನೂತನ ಯೋಜನೆಯಾಗಿದ್ದು, ಈ ಯೋಜನೆಯನ್ನು ತಮ್ಮ ಮನೆಗೆ ಬರ ಮಾಡಿಕೊಳ್ಳಲು ಅಂದು ಮನೆಯ ಮುಂದೆ ರಂಗೋಲಿ ಹಾಕಿ ಬರ ಮಾಡಿಕೊಳ್ಳಲು ಈಗಾಗಲೇ ಮಹಿಳೆಯರು ಸಿದ್ಧರಾಗಿದ್ದಾರೆ ಎಂದರು.
ಭಾನುವಾರ ಕಾರ್ಯಕ್ರಮ ನಿಗಧಿ ಆಗಿರುವುದರಿಂದ ಶಾಲೆಗಳು, ಅಂಗನವಾಡಿ, ಗ್ರಾಮ ಪಂಚಾಯಿತಿ, ಸಮುದಾಯ ಭವನ ಮತ್ತಿತರ ಕಡೆಯಲ್ಲಿ ಸಮಾರಂಭ ನಡೆಸಲು ತಿಳಿಸಲಾಗಿದೆ. ಆಯಾ ಕ್ಷೇತ್ರದ ಶಾಸಕರು ಅವರಿಗೆ ಅನುಕೂಲವಾದ ಕಡೆಯಲ್ಲಿ ಉದ್ಘಾಟನೆಯಲ್ಲಿ ಭಾಗವಹಿಸಬಹುದಾಗಿದೆ. ಪಕ್ಷಾತೀತವಾಗಿ ಕಾರ್ಯಕ್ರಮ ನಡೆಯಲಿದೆ ಎಂದರು.
ಸೋನಿಯಾ, ಖರ್ಗೆ, ರಾಹುಲ್ ಭಾಗಿಬೆಳಗಾವಿಯಲ್ಲಿ ನಡೆಯಲಿರುವ ಗೃಹಲಕ್ಷ್ಮಿ ಯೋಜನೆಯ ಉದ್ಘಾಟನಾ ಕಾರ್ಯಕ್ರಮಕ್ಕೆ ಕಾಂಗ್ರೆಸ್ ಪಕ್ಷದ ಅಧಿನಾಯಕಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ರಾಷ್ಟ್ರೀಯ ನಾಯಕರನ್ನು ಆಹ್ವಾನಿಸಲಾಗುವುದು ಎಂದು ಹೇಳಿದರು.ಸಭೆಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ಕಂದಾಯ ಸಚಿವ ಕೃಷ್ಣಭೈರೇಗೌಡ, ಸಮಾಜ ಕಲ್ಯಾಣ ಸಚಿವ ಪ್ರಿಯಾಂಕ ಖರ್ಗೆ, ರಹೀಂಖಾನ್ ಹಾಜರಿದ್ದರು.
*ಬೆಳಗಾವಿಯಲ್ಲೇ ಗೃಹಲಕ್ಷ್ಮಿ ಯೋಜನೆಗೆ ಚಾಲನೆ ಸಿಗಬೇಕು ಎಂಬುದು ನನ್ನ ಕನಸು. ಈ ಕುರಿತು ಸಿಎಂ, ಡಿಸಿಎಂ ಬಳಿ ಮನವಿ ಸಲ್ಲಿಸಿದೆ. ನನ್ನ ಮನವಿಗೆ ಸ್ಪಂದಿಸಿದ ನಾಯಕರು ಬೆಳಗಾವಿಯಲ್ಲಿ ಬೃಹತ್ ಕಾರ್ಯಕ್ರಮ ಆಯೋಜಿಸಲು ಸಹಕರಿಸಿದ್ದಾರೆ. ಇದೊಂದು ಐತಿಹಾಸಿಕ ಕಾರ್ಯಕ್ರಮವಾಗಲಿದೆ.-ಶ್ರೀಮತಿ ಲಕ್ಷ್ಮಿ ಹೆಬ್ಬಾಳ್ಕರ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:thirteen − 12 =
Remember me
