ಕಲಬುರಗಿ:ಮಾತೃಭಾಷೆಯಲ್ಲೇ ಪ್ರಾಥಮಿಕ ಶಿಕ್ಷಣ ಕಡ್ಡಾಯಗೊಳಿಸಲು ಸಂವಿಧಾನ ತಿದ್ದುಪಡಿಗೆ ಕೇಂದ್ರ ಸರ್ಕಾರದ ಮೇಲೆ ಸಿಎಂ ಬಿ.ಎಸ್. ಯಡಿಯೂರಪ್ಪ ಒತ್ತಡ ಹೇರಲಿದ್ದಾರೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಟಿ.ಎಸ್. ನಾಗಾಭರಣ ಹೇಳಿದರು.
ಯಡಿಯೂರಪ್ಪ ಸೇರಿ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳನ್ನು ಒಂದು ಗೂಡಿಸಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡುವ ಮೂಲಕ ಸಂವಿಧಾನ ತಿದ್ದುಪಡಿಗೆ ಪ್ರಯತ್ನ ಆರಂಭಿಸಲಾಗಿದೆ ಎಂದು ಸುದ್ದಿಗಾರರಿಗೆ ತಿಳಿಸಿದರು.
ಕಲಿಕಾ ಮಾಧ್ಯಮ ಪಾಲಕರ ಆಯ್ಕೆಗೆ ಬಿಟ್ಟಿದ್ದು ಎಂಬ ಸುಪ್ರಿಂ ಕೋರ್ಟ್ ತೀರ್ಪು ನೀಡಿದ್ದು, ಪಾಲಕರೂ ಸಹ ಇಂಗ್ಲಿಷ್ ಕಡೆಗೆ ಒಲವು ತೋರುತ್ತಿದ್ದಾರೆ. ಸುಪ್ರೀಂಕೋರ್ಟ್ ತೀರ್ಪು ಮರು ಪರಿಶೀಲನಾ ಅರ್ಜಿ ಸಲ್ಲಿಸಲು ಅವಕಾಶ ಇಲ್ಲದ್ದರಿಂದ ಸಂವಿಧಾನ ತಿದ್ದುಪಡಿ ಅನಿವಾರ್ಯ. ಈ ವಿಷಯದಲ್ಲಿ ಇತರ ರಾಜ್ಯಗಳ ಸಿಎಂಗಳ ಜತೆ ಯಡಿಯೂರಪ್ಪ ರ್ಚಚಿಸಲು ಮುಂದಾಗಿದ್ದು, ಶೀಘ್ರವೇ ಉತ್ತಮ ನಿರ್ಧಾರ ಹೊರಬರಲಿದೆ ಎಂದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fourteen + ten =
Remember me
