ಮಂಡ್ಯ:ಕರೊನಾ ಸೋಂಕಿನ ಭೀತಿ ಹಿನ್ನೆಲೆಯಲ್ಲಿ ಕಳೆದ ವರ್ಷ ರದ್ದಾಗಿದ್ದ ಮೇಲುಕೋಟೆಯ ವಿಶ್ವ ವಿಖ್ಯಾತ ವಜ್ರಖಚಿತ ವೈರಮುಡಿ ಬ್ರಹ್ಮೋತ್ಸವ ಈ ಬಾರಿ ಸರಳವಾಗಿ ನಡೆಯಲಿದೆ.
ಪಾಂಡವಪುರ ತಾಲೂಕಿನ ಐತಿಹಾಸಿಕ ಧಾರ್ಮಿಕ ಕ್ಷೇತ್ರ ಮೇಲುಕೋಟೆ. ಈ ಕ್ಷೇತ್ರದ ಆರಾಧ್ಯ ದೈವ ಶ್ರೀ ಚಲುವನಾರಾಯಣಸ್ವಾಮಿಗೆ ಪ್ರತಿ ವರ್ಷ ಮಾರ್ಚ್​ ಅಥವಾ ಏಪ್ರಿಲ್​ ತಿಂಗಳಲ್ಲಿ ವಿಜೃಂಭಣೆಯಿಂದ ವೈರಮುಡಿ ಬ್ರಹ್ಮೋತ್ಸವ ನಡೆಯುತ್ತದೆ. ಈ ಉತ್ಸವಕ್ಕೆ ನಾಡಿನಾದ್ಯಂತ ಮಾತ್ರವಲ್ಲ, ತಮಿಳುನಾಡು ಸೇರಿ ವಿವಿಧ ರಾಜ್ಯಗಳಿಂದ ಲಕ್ಷಾಂತರ ಭಕ್ತರು ಆಗಮಿಸುತ್ತಾರೆ. ಮಹಾರಾಷ್ಟ್ರ ಹಾಗೂ ಕೇರಳದಲ್ಲಿ ಕರೊನಾ ಎರಡನೇ ಅಲೆ ಅಬ್ಬರ ಜೋರಾಗಿರುವ ಹಿನ್ನೆಲೆಯಲ್ಲಿ ಮೇಲುಕೋಟೆಯಲ್ಲಿ ವೈರಮುಡಿ ಬ್ರಹ್ಮೋತ್ಸದ ಮೇಲೂ ಕರೊನಾ ಛಾಯೆ ಆವರಿಸಿದೆ. ಈ ಸಂಬಂಧ ಇಂದು ಮಂಡ್ಯ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ನಡೆದಿದ್ದು, ಕರೊನಾ ಸೋಂಕು ಹರಡುವಿಕೆ ನಿಯಂತ್ರಿಸುವ ನಿಟ್ಟಿನಲ್ಲಿ ವೈರಮುಡಿ ಉತ್ಸವವನ್ನು ಸರಳವಾಗಿ ಆಚರಿಸಲು ತೀರ್ಮಾನಿಸಲಾಗಿದೆ. ಅದಕ್ಕೆ ಸಂಬಂಧಿಸಿದಂತೆ ರೂಪು-ರೇಷೆಯ ಬಗ್ಗೆ ಚರ್ಚಿಸಲಾಗಿದೆ.
ಶ್ರೀ ಚೆಲುವನಾರಾಯಣಸ್ವಾಮಿ ಸನ್ನಿಧಿಯಲ್ಲಿ ಮಾ.19ರಿಂದ 31ರವರೆಗೆ ಬ್ರಹ್ಮೋತ್ಸವ ನಡೆಯಲಿದೆ. ಮಾ.19ಕ್ಕೆ ಅಂಕುರಾರ್ಪಣದ ಮೂಲಕ ಬ್ರಹ್ಮೋತ್ಸವಕ್ಕೆ ಚಾಲನೆ ಸಿಗಲಿದೆ. 20ರಂದು ಕಲ್ಯಾಣೋತ್ಸವ, 21ರಂದು ಧ್ವಜಾರೋಹಣ, 22ರಂದು ರಾಮಾನುಜಾಚಾರ್ಯರಿಗೆ ಅಭಿಷೇಕ, ಶೇಷವಾಹನ, 23ರಂದು ನಾಗವಲ್ಲಿ ಮಹೋತ್ಸವ, 24ರಂದು ವೈರಮುಡಿ ಕಿರೀಟಧಾರಣಾ ಮಹೋತ್ಸವ, 25ಕ್ಕೆ ಪ್ರಹ್ಲಾದ ಪರಿಹಾರ, 26ರಂದು ಗಜೇಂದ್ರ ಮೋಕ್ಷ, 27ರಂದು ಶ್ರೀ ಮನ್ಮಹಾ ರಥೋತ್ಸವ, 28ಕ್ಕೆ ತೆಪ್ಪೋತ್ಸವ, 29ರಂದು ನಾರಾಯಣಸ್ವಾಮಿ ಜಯಂತಿ ಸೇರಿ ವಿವಿಧ ಧಾರ್ಮಿಕ ಕೈಂಕರ್ಯ ನೆರವೇರಲಿದೆ. 30ರಂದು ನಾರಾಯಣಸ್ವಾಮಿಗೆ ಮಹಾಭಿಷೇಕ ಹಾಗೂ 31ರಂದು ಮಹಾಭಿಷೇಕ ಕಾರ್ಯಕ್ರಮ ನಿಗದಿಯಾಗಿದೆ. ಭಕ್ತರು ಕರೊನಾ ನಿಯಮವನ್ನು ಕಡ್ಡಾಯವಾಗಿ ಪಾಲಿಸಬೇಕಿದೆ.
ಇಂದು ನಡೆದ ಪೂರ್ವಭಾವಿ ಸಭೆಯಲ್ಲಿ ಜಿಲ್ಲಾಧಿಕಾರಿ ಎಸ್.ಅಶ್ವಥಿ, ಎಸ್ಪಿ ಡಾ.ಅಶ್ವಿನಿ, ಡಿಎಚ್ಒ ಡಾ.ಎಚ್.ಪಿ.ಮಂಚೇಗೌಡ, ಪಾಂಡವಪುರ ಎಸಿ ಶಿವಾನಂದಮೂರ್ತಿ ಇತರರು ಇದ್ದರು.
ಹಸುವಿನ ಕೆಚ್ಚಲು ಕೊಯ್ದು ವಿಕೃತಿ ಮೆರೆದ ದುಷ್ಕರ್ಮಿಗಳು! ಕರುಗೆ ಹಾಲುಣಿಸಲಾಗದೆ ನರಳುತ್ತಿದೆ ಮೂಕಜೀವಿ

ನೇಣುಬಿಗಿದ ಸ್ಥಿತಿಯಲ್ಲಿ ತಾಯಿ-ಮಗನ ಶವ ಪತ್ತೆ! ಶಿವರಾತ್ರಿ ಸಡಗರಕ್ಕೆ ಕೊಳ್ಳಿ ಇಟ್ಟ ಸಾವು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:thirteen + twenty =
Remember me
