ಬೆಂಗಳೂರು:ಕೇಂದ್ರ ಸರ್ಕಾರ 9ರಿಂದ 12ನೇ ತರಗತಿ ವಿದ್ಯಾರ್ಥಿಗಳು ಶಾಲೆಗೆ ಹೋಗಿ ಮಾರ್ಗದರ್ಶನ ಪಡೆಯಲು ಅನುಮತಿ ನೀಡಿರುವುದರಿಂದ ಸುರಕ್ಷತಾ ಕ್ರಮಗಳ ಮೂಲಕ ವಿದ್ಯಾರ್ಥಿಗಳಿಗೆ ಪ್ರವೇಶ ಕಲ್ಪಿಸಲು ಸಿದ್ಧತೆ ನಡೆಸುತ್ತಿವೆ. ಶಾಲಾ-ಕಾಲೇಜು ಆರಂಭಕ್ಕೆ ಕೇಂದ್ರ ಸರ್ಕಾರ ಅನ್​ಲಾಕ್ 4.0ನಲ್ಲಿ ಅನುಮತಿ ನೀಡಿಲ್ಲ. ಆದರೆ, ಸೆ.21ರಿಂದ 9ರಿಂದ 12ನೇ ತರಗತಿ ವಿದ್ಯಾರ್ಥಿಗಳು ಕಂಟೇನ್ಮೆಂಟ್ ಪ್ರದೇಶದ ಹೊರಗೆ ಆನ್​ಲೈನ್ ತರಗತಿ ಸಮಯದಲ್ಲಿ ಶಾಲೆಗಳಿಗೆ ಭೇಟಿ ನೀಡಿ ಶಿಕ್ಷಕರಿಂದ ಮಾರ್ಗ ದರ್ಶನ ಪಡೆಯಲು ಅನುಮತಿ ನೀಡಿದೆ.
ಈ ಪ್ರವೇಶದ ವೇಳೆ ವಿದ್ಯಾರ್ಥಿಗಳಿಗೆ ಯಾವ ರೀತಿ ಬೋಧನೆ ಮಾಡಬೇಕು. ಅನುಸರಿಸಬೇಕಾದ ಸುರಕ್ಷತಾ ಕ್ರಮಗಳ ಬಗ್ಗೆ ಶಿಕ್ಷಣ ಇಲಾಖೆ ಮಾರ್ಗಸೂಚಿ ರಚಿಸುತ್ತಿದೆ. ಸದ್ಯ ಶಿಕ್ಷಣ ಇಲಾಖೆಯು ‘ವಿದ್ಯಾಗಮ’ ಯೋಜನೆ ಅಡಿ ವಿದ್ಯಾರ್ಥಿಗಳಿರುವ ಪ್ರದೇಶಗಳಿಗೇ ಶಿಕ್ಷಕರು ಹೋಗಿ ಬೋಧನೆ ಮಾಡುತ್ತಿದ್ದಾರೆ. ಇದೇ ಮಾದರಿಯಲ್ಲಿ ಶಾಲೆಗಳಿಗೆ ವಿದ್ಯಾರ್ಥಿಗಳು ಬಂದಾಗ ಎಷ್ಟು ಶಿಕ್ಷಕರಿರಬೇಕು? ಯಾವ ಸಮಯದಲ್ಲಿ ಪ್ರವೇಶ ಕಲ್ಪಿಸಬೇಕೆಂದು ಮಾರ್ಗಸೂಚಿ ರೂಪಿಸಲು ಮುಂದಾಗಿದೆ. ಮತ್ತೊಂದೆಡೆ ಶಿಕ್ಷಣ ಇಲಾಖೆ ಕೇಂದ್ರ ಸರ್ಕಾರದಿಂದ ಪ್ರಮಾಣಿತ ಕಾರ್ಯಾಚರಣಾ ವಿಧಾನ(ಎಸ್​ಒಪಿ)ದ ಬಿಡುಗಡೆಗಾಗಿ ಕಾಯತ್ತಿದೆ.
ಪಠ್ಯಪುಸ್ತಕ ಸಿದ್ಧವಾಗಿದೆ:ಕರ್ನಾಟಕ ಪಠ್ಯಪುಸ್ತಕ ಸಂಘ ಕಳೆದ ಬಾರಿ 120 ದಿನಗಳಿಗೆ ಲೆಕ್ಕಹಾಕಿ ಪಠ್ಯಗಳನ್ನು ಕಡಿತ ಮಾಡಿ ಇಲಾಖೆ ನೀಡಿತ್ತು. ಇದರಲ್ಲಿ ಟಿಪ್ಪು ಸುಲ್ತಾನ್ ಪಠ್ಯ ತೆಗೆದಿದ್ದರಿಂದ ಭಾರಿ ಚರ್ಚೆಗೆ ಗ್ರಾಸವಾಗಿತ್ತು. ಹಾಗಾಗಿ ಪಠ್ಯಪುಸ್ತಕ ಕಡಿತ ಮಾಡಿರುವುದನ್ನು ತಾತ್ಕಾಲಿಕವಾಗಿ ಸ್ಥಗಿತ ಮಾಡಲಾಗಿತ್ತು. ಇದೀಗ ಮತ್ತೆ ಹೊಸದಾಗಿ ಪಠ್ಯಕ್ರಮ ಕಡಿತ ಮಾಡಿ ಸಂಘವು ಶಿಕ್ಷಣ ಇಲಾಖೆಗೆ ಕಳುಹಿಸಿದೆ ಎನ್ನಲಾಗಿದೆ. ಶಾಲೆಗಳನ್ನು ಆರಂಭಿಸಲು ನಾವು ಸಿದ್ಧರಿದ್ದು, ರಾಜ್ಯ ಸರ್ಕಾರ ಮೊದಲು 2020-21ನೇ ಸಾಲಿನ ವೇಳಾಪಟ್ಟಿ, ಪಠ್ಯಕ್ರಮ ಅಂತಿಮಗೊಳಿಸಬೇಕು. ಶಿಕ್ಷಣ ಇಲಾಖೆ ಇನ್ನೂ ಪಠ್ಯಕ್ರಮ ಮತ್ತು ವೇಳಾಪಟ್ಟಿ ರೂಪಿಸಿಲ್ಲ ಎಂದು ಖಾಸಗಿ ಶಾಲೆಗಳ ಆಡಳಿತ ಮಂಡಳಿಗಳ ಒಕ್ಕೂಟ (ಕ್ಯಾಮ್್ಸ) ಪ್ರಧಾನ ಕಾರ್ಯದರ್ಶಿ ಡಿ. ಶಶಿಕುಮಾರ್ ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fourteen + twenty =
Remember me
