ಬೆಂಗಳೂರು: ಅಭಿವೃದ್ಧಿ ಕೆಲಸ ನಿಲ್ಲಿಸಿದ ಸರ್ಕಾರ ಕಸಕ್ಕೂ ತೆರಿಗೆ ಹಾಕಲು ಮುಂದಾಗಿದೆ. ‘ಕರ್ನಾಟಕ ಮಾದರಿ’ ಯಾವುದು ತಿಳಿಯಲು ಆರ್ಥಿಕ ಇಲಾಖೆಯ ಒಂದು ವರ್ಷದ ಪ್ರಗತಿ ಕಾರ್ಡ್ ಬಿಡುಗಡೆ ಮಾಡಲಿ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್.ಅಶೋಕ್ ಆಗ್ರಹಿಸಿದರು.
ಸುದ್ದಿಗಾರರೊಂದಿಗೆ ಗುರುವಾರ ಮಾತನಾಡಿದ ಅವರು, ಬೆಳೆ ನಷ್ಟ ಪರಿಹಾರ ಧನ ರೈತರ ಬ್ಯಾಂಕ್ ಖಾತೆಗೆ ಜಮೆಯಾಗಿಲ್ಲ. ಕಾಂಗ್ರೆಸ್ ಪಕ್ಷದ ಶಾಸಕರೇ ಪತ್ರ ಬರೆದು, ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಶಾಲೆ, ಪಿಯು ಕಾಲೇಜುಗಳಿಗೆ ಪಠ್ಯಪುಸ್ತಕಗಳು ತಲುಪಿಲ್ಲ. ಶಾಲೆ-ಕಾಲೇಜು ಆರಂಭಕ್ಕೆ ಪೂರ್ವದಲ್ಲಿ ಪಠ್ಯಪುಸ್ತಕಗಳು ವಿತರಣೆಯಾಗುತ್ತಿದ್ದವು. ಖಜಾನೆ ಖಾಲಿಯಾಗಿರುವ ಕಾರಣ ಬೇಡಿಕೆಗೆ ತಕ್ಕಂತೆ ಪಠ್ಯಪುಸ್ತಕಗಳನ್ನು ಮುದ್ರಿಸಿದಂತಿಲ್ಲವೆಂದು ಆರ್.ಅಶೋಕ್ ಶಂಕಿಸಿದರು.
ಹಾಲು ಉತ್ಪಾದಕರ ಸಹಕಾರ ಸಂಘಗಳಿಗೆ ಹಾಲು ಪೂರೈಸುತ್ತಿರುವ ರೈತರು, ರೈತ ಮಹಿಳೆಯರಿಗೆ ಪ್ರೋತ್ಸಾಹಧನ ಬಾಕಿ ಪಾವತಿಗೆ ಒತ್ತಾಯಿಸಿದರೂ ಸ್ಪಂದಿಸುತ್ತಿಲ್ಲ. ರಾಜ್ಯದ ಆರ್ಥಿಕ ಪರಿಸ್ಥಿತಿಯ ಕುರಿತು ಸರ್ಕಾರ ಶೀಘ್ರವೇ ಶ್ವೇತಪತ್ರ ಹೊರಡಿಸಬೇಕು ಎಂದು ಒತ್ತಾಯಿಸಿದರು.
ಬರ ಪರಿಹಾರಕ್ಕೆಂದು ಕೇಂದ್ರ ಸರ್ಕಾರ ಎನ್‌ಡಿಆರ್‌ಎ್ನಡಿ 3,454 ಕೋಟಿ ರೂ. ಬಿಡುಗಡೆ ಮಾಡಿದೆ. ಈ ನೆರವನ್ನೂ ರೈತರ ಕೈಗೆ ಸರಿಯಾಗಿ ತಲುಪಿಸುವಲ್ಲಿ ಸಿದ್ದರಾಮಯ್ಯನವರ ಸರ್ಕಾರ ವಿಲವಾಗಿದೆ ಎಂದು ಆರ್.ಅಶೋಕ್ ಟೀಕಿಸಿದರು.
ಹಿಂದುಗಳಿಗೆ ಮಾನಸಿಕ ಹಿಂಸೆ, ಹಲ್ಲೆಗಳಾಗುತ್ತಿವೆ. ಅಮಾಯಕರು ತಲ್ಲಣಿಸಿದ್ದು, ಹಲ್ಲೆಯಾದವರ ಮೇಲೆ ಮೊಕದ್ದಮೆ ಹೂಡಲಾಗುತ್ತಿದೆ. ಭಾರತ್ ಮಾತಾ ಕೀ ಜೈ ಎಂದವರನ್ನು ಬೆನ್ನಟ್ಟಿ ಹಲ್ಲೆ ಮಾಡುತ್ತಿದ್ದು, ಕಾಂಗ್ರೆಸ್ ಸರ್ಕಾರ ತಾಲಿಬಾನ್ ಸರ್ಕಾರವಾಗಿ ಬದಲಾಗಿದೆ ಎಂದು ಆಪಾದಿಸಿದರು.
ನಟ ದರ್ಶನ್ ಮೇಲೆ ಕೊಲೆ ಆರೋಪ ಪ್ರಕರಣ ನಿಷ್ಪಕ್ಷಪಾತ ತನಿಖೆಯಾಗಲಿದೆ. ಪೊಲೀಸರಿಗೆ ಸರ್ಕಾರ ಮುಕ್ತ ಅವಕಾಶ ನೀಡಲಿ. ಚನ್ನಗಿರಿ ಠಾಣೆ ಮೇಲೆ ದಾಳಿ, ಪೊಲೀಸ್ ಅಧಿಕಾರಿ ಮೇಲೆ ಹಲ್ಲೆ ಪ್ರಕರಣಗಳಲ್ಲಿ ಸರ್ಕಾರ ನಡೆದುಕೊಂಡ ರೀತಿ ಜನರಿಗೆ ಗೊತ್ತಿದೆ ಎಂದು ಕುಟುಕಿದರು.
ನಟ ದರ್ಶನ್ ಪೊಲೀಸರಿಗೆ ದೂರು ನೀಡಿ ರೇಣುಕಾಸ್ವಾಮಿಗೆ ತಿಳಿ ಹೇಳಿಸಬಹುದಿತ್ತು. ಅದು ಬಿಟ್ಟು ಕಾನೂನು ಕೈಗೆ ತೆಗೆದುಕೊಂಡು ಕೊಂದಿದ್ದರೆ ಅದು ದೊಡ್ಡ ತಪ್ಪು. ಕಾನೂನಿಗಿಂತ ಯಾರೂ ದೊಡ್ಡವರಲ್ಲ. ಈ ಘಟನೆಯನ್ನು ಖಂಡಿಸುವೆ ಎಂದು ಆರ್.ಅಶೋಕ್ ಹೇಳಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × three =
Remember me
