ಮುಂಬೈ:ಮರಾಠಿ ನೆಲದಲ್ಲಿ ಕನ್ನಡ ಪತ್ರಿಕೆಗಳನ್ನು ನಡೆಸುವ ಮೂಲಕ ಕನ್ನಡ ಭಾಷೆ ಉಳಿಸಿ ಬೆಳೆಸಲು ತಮ್ಮದೇ ಆದ ಕೊಡುಗೆ ನೀಡುತ್ತಿರುವ ಕನ್ನಡಿಗರ ಸೇವೆ ಶ್ಲಾಘನೀಯ ಎಂದು ಕರ್ನಾಟಕ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ತಿಳಿಸಿದರು.
ಕನ್ನಡಿಗ ಪತ್ರಕರ್ತರ ಸಂಘ ಮಹಾರಾಷ್ಟ್ರ ಹಮ್ಮಿಕೊಂಡಿದ್ದ ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ಕೆ.ಟಿ.ವೇಣುಗೋಪಾಲ್ ಹೆಸರಿನ ಮಾಧ್ಯಮ ಪ್ರಶಸ್ತಿ ವಿತರಣೆ ಮಾಡಿ ಮಾತನಾಡಿದರು.
ಮಹಾರಾಷ್ಟ್ರದಲ್ಲಿ ಕನ್ನಡ ಪತ್ರಿಕೆಗಳನ್ನು ಹುಟ್ಟುಹಾಕುವುದು ಯಶಸ್ವಿಯಾಗಿ ನಡೆಸುವುದು ಬಹಳ ಸವಾಲಿನದ್ದು. ಈ ಸವಾಲನ್ನು ಕನ್ನಡ ಪತ್ರಕರ್ತರ ಸಂಘ ಮಹಾರಾಷ್ಟ್ರ(ಕಪಸಮ) ಯಶಸ್ವಿಯಾಗಿ ನಿಭಾಯಿಸಿದೆ ಎಂದರು.
ಆಧುನಿಕ ತಂತ್ರಜ್ಞಾನ ಮಾಹಿತಿ ಜಗತ್ತು ಮತ್ತು ಪತ್ರಿಕಾ ವೃತ್ತಿಗೆ ವ್ಯಾಪಕ ಅವಕಾಶಗಳನ್ನು ತೆರೆದಿಟ್ಟಿದೆ. ಆದರೆ ಪತ್ರಕರ್ತರ ಬದುಕು ಮಾತ್ರ ಸಮಸ್ಯೆಗಳಲ್ಲೇ ಮುಳುಗಿದೆ. ಸಮಸ್ಯೆಗೆ ಸ್ಪಂಧಿಸುವ ನಿಟ್ಟಿನಲ್ಲಿ ಸರ್ಕಾರ ಪ್ರಯತ್ನ ಮಾಡುತ್ತಿದೆ ಎಂದರು. ಮುಂಬೈ ಕನ್ನಡಿಗ ಪತ್ರಕರ್ತರ ಭವನಕ್ಕೆ ರಾಜ್ಯ ಸರ್ಕಾರದಿಂದ ನೆರವು ಕೊಡಿಸಲಾಗುವುದು ಎಂದು ಭವರಸೆ ನೀಡಿದರು.
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಶಿವಾನಂದ ತಗಡೂರು ಮಾತನಾಡಿ, ಮಹಾರಾಷ್ಟ್ರ ಪತ್ರಿಕೋದ್ಯಮಕ್ಕೆ ಕನ್ನಡಿಗರು ನೀಡಿರುವ ಕೊಡುಗೆ ಅಪಾರ. ಕನ್ನಡಿಗರ ಧ್ವನಿಯಾಗಿ ಇಲ್ಲಿನ ಪತ್ರಕರ್ತರು ಗಟ್ಟಿಯಾಗಿ ನಿಂತು ಮಾಡಿರುವ ಸೇವೆಯೂ ಅನನ್ಯ ಎಂದರು. ಕೆಯುಡಬ್ಲೂೃಜೆ ಸಂಘಟಿಸುವ ರಾಜ್ಯ ಪತ್ರಕರ್ತರ ಸಮ್ಮೇಳನಕ್ಕೆ ಮುಂಬೈ ಪತ್ರಕರ್ತರನ್ನೂ ಆಹ್ವಾನಿಸಲಾಗುವುದು ಎಂದರು.
ಮುಂಬೈ ಬಂಟ್ಸ್ ಸಂಘದ ಅಧ್ಯಕ್ಷರಾದ ಚಂದ್ರಹಾಸ ಶೆಟ್ಟಿ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಡಾ.ಸುನಿತಾ ಎಂ ಶೆಟ್ಟಿ, ಜಯ ಶ್ರೀಕೃಷ್ಣ ಪರಿಸರ ಸಮಿತಿ ಅಧ್ಯಕ್ಷ ಎಲ್.ವಿ.ಅಮೀನ್ ಹಾಜರಿದ್ದರು. ಕಪಸಮ ಅಧ್ಯಕ್ಷರಾದ ರೋನ್ಸ್ ಬಂಟ್ವಾಳ್ ಅಧ್ಯಕ್ಷತೆ ವಹಿಸಿದ್ದರು.
ಹಿರಿಯ ಪತ್ರಕರ್ತರಾದ ಸನತ್ ಕುಮಾರ್ ಬೆಳಗಲಿ, ಲಾರೆನ್ಸ್ ಸೀಲೋ ಅವರಿಗೆ ರಾಷ್ಟ್ರೀಯ ಮಾಧ್ಯಮ ಶ್ರೀ ಪ್ರಶಸ್ತಿ ಪ್ರದಾನ ಮಾಡಲಾಯಿತು. ಇದೇ ಸಂದರ್ಭದಲ್ಲಿ ರೋಹಿಣಿ ಸಾಲ್ಯಾನ್ ಅವರ ದಿವ್ಯಾಂಗನೆ ಕವನ ಸಂಕಲನ ಬಿಡುಗಡೆಗೊಳಿಸಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × three =
Remember me
