ಬಾಗಲಕೋಟೆ:ರಾಜ್ಯದಲ್ಲಿ ವಿಧಾನಸಭಾ ಚುನಾವಣೆಯ ಸಮಯ ಹತ್ತಿರವಾಗುತ್ತಿದ್ದಂತೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಬಾರಿ ಯಾವ ಕ್ಷೇತ್ರದಲ್ಲಿ ಚುನಾವಣೆಗೆ ಸ್ಪರ್ಧಿಸಲಿದ್ದಾರೆ ಎಂಬ ವಿಚಾರ ದಿನದಿಂದ ದಿನಕ್ಕೆ ಕುತೂಹಲ ಕೆರಳಿಸುತ್ತಿದ್ದೆ. ಈ ಬಗ್ಗೆ ಸಿದ್ದರಾಮಯ್ಯ ಕೂಡಾ ತಾವು ಸ್ಪರ್ಧಿಸುತ್ತಿರುವ ಕ್ಷೇತ್ರ ಯಾವುದೆಂದು ಇನ್ನೂ ಹೇಳಿಲ್ಲ. ಬಾದಾಮಿಯಲ್ಲಿ ಸ್ಪರ್ಧಿಸುತ್ತಿರಾ ಎಂಬ ಪ್ರಶ್ನೆ ಎದುರಾದಾಗೆಲ್ಲಾ, ಇನ್ನೂ ಅಂತಿಮವಾಗಿಲ್ಲ. ಹಲವು ಕ್ಷೇತ್ರಗಳಿಂದ ಆಹ್ವಾನ ಬಂದಿದೆ ಎಂಬ ಉತ್ತರವನ್ನೇ ನೀಡುತ್ತಾ ಬಂದಿದ್ದಾರೆ.
ಇತ್ತ ಬಾದಾಮಿ ಕ್ಷೇತ್ರದಲ್ಲೇ ಸಿದ್ದರಾಮಯ್ಯ ಸ್ಪರ್ಧಿಸಬೇಕು ಎಂದು ತಾಲೂಕಿನ ಜನರು ಒತ್ತಾಯ ಮಾಡುತ್ತಾ ಬಂದಿದ್ದಾರೆ. ಇದೀಗ ಸಿದ್ದರಾಮಯ್ಯ ಮಾತನಾಡುತ್ತಾ, ಬಾದಾಮಿಯಿಂದಲೇ ಮುಂದಿನ ಚುನಾವಣೆಗೆ ಸ್ಪರ್ಧೆ ಮಾಡುವುದಾಗಿ ಘೋಷಿಸಿ ಎಂದು ಬೆಂಬಲಿಗರ ಒತ್ತಾಯ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.
ಕೋಲಾರ, ಬಾದಾಮಿ, ವರುಣಾ ಮೂರು ಕ್ಷೇತ್ರದಿಂದಲೂ ಸ್ಪರ್ಧೆ ಮಾಡುವಂತೆ ಒತ್ತಡ ಇದೆ. ಯಾವ ಕ್ಷೇತ್ರದಿಂದ ಸ್ಪರ್ಧಿಸಬೇಕು ಎಂಬ ವಿಚಾರದ ಬಗ್ಗೆ ನಮಗೆ ಬಿಡಿ ಎಂದು ಹೈಕಮಾಂಡ್​ನವರು ಹೇಳಿದ್ದಾರೆ. ಅದರಂತೆ ಹೈಕಮಾಂಡ್​ಗೆ ಬಿಟ್ಟುಕೊಟ್ಟಿದ್ದು, ಅವರು ಹೇಳಿದ ಕ್ಷೇತ್ರದಲ್ಲೇ ಸ್ಪರ್ಧೆ ಮಾಡುತ್ತೇನೆ ಎಂದಿದ್ದಾರೆ.
ಅಂತಿಮವಾಗಿ ಹೈಕಮಾಂಡ್ ಬಾದಾಮಿ ಅಂದರೆ ಬಾದಾಮಿಯಲ್ಲಿ ಸ್ಪರ್ಧೆ, ಕೋಲಾರ ಅಥವಾ ವರುಣಾ ಅಂದರೆ ಅಲ್ಲೇ ಸ್ಪರ್ಧೆ ಎಂದು ಹೇಳಿದರು. ಈ ವೇಳೆ ಬೆಂಬಲಿಗರು, ಸಿದ್ದರಾಮಯ್ಯ ಅಂದರೆ ಹೈಕಮಾಂಡ್, ಹೈಕಮಾಂಡ್ ಅಂದರೆ ಸಿದ್ದರಾಮಯ್ಯ ಎಂದು ಘೋಷಣೆ ಕೂಗಿದರು. ಈ ವೇಳೆ ಸಿದ್ದರಾಮಯ್ಯ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ, ರಾಹುಲ್ ಗಾಂಧಿ ನಮ್ಮ ಪಕ್ಷದ ಹೈಕಮಾಂಡ್. ನಾನು ರಾಜ್ಯಮಟ್ಟದಲ್ಲಿ ಮಾತ್ರ ಎಂದ ಸಿದ್ದು ಎಂದು ಹೇಳಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen − 14 =
Remember me
