ಬೆಂಗಳೂರು:ನಗರ ಹಾಗೂ ಬೆಂಗಳೂರು ಗ್ರಾಮಾಂತರ ಭಾಗದ ಶಾಲೆಗಳ 5ನೇ ತರಗತಿಯವರೆಗಿನ ಮಕ್ಕಳಿಗೆ ನಾಳೆಯಿಂದ (ಮಾ.10, ಮಂಗಳವಾರ) ರಜೆ ಘೋಷಣೆ ಮಾಡಲಾಗಿದೆ.
ರಾಜ್ಯ ಮುಖ್ಯ ಕಾರ್ಯದರ್ಶಿಗಳ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ನಿರ್ಧರಿಸಿದಂತೆ ಬಿಬಿಎಂಪಿ, ಬೆಂಗಳೂರು‌ ನಗರ ಜಿಲ್ಲೆ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಎಲ್ಲ ಪ್ರಾಥಮಿಕ ಶಾಲೆಗಳಿಗೆ ಮುಂದಿನ ಆದೇಶದವರೆಗೆ ರಜೆ ಘೋಷಿಸಲಾಗಿದೆ.
ಈ ಬಗ್ಗೆ ಶಿಕ್ಷಣ ಸಚಿವ ಸುರೇಶ್​ ಕುಮಾರ್​ ಅವರು ಟ್ವೀಟ್​ ಮಾಡಿದ್ದಾರೆ. ಅಲ್ಲದೆ ಟ್ವಿಟ್​ನಲ್ಲಿ ವಿಡಿಯೋ ಕೂಡ ಹಂಚಿಕೊಂಡಿದ್ದಾರೆ. ಅದರಲ್ಲಿ ಮಾರಕ ವೈರಸ್​ ಕೊರೊನಾದ ಬಗ್ಗೆ ರಾಜ್ಯದಲ್ಲಿ ಆತಂಕ ಪಡುವ ಅಗತ್ಯವಿಲ್ಲ. ಆದರೆ ಮುಂಜಾಗ್ರತಾ ಕ್ರಮವಾಗಿ ಮಕ್ಕಳಿಗೆ ಶಾಲೆ ರಜೆ ಘೋಷಣೆ ಮಾಡಲಾಗಿದೆ ಎಂದಿದ್ದಾರೆ.
ಬೆಂಗಳೂರು ನಗರ ಹಾಗೂ ಬೆಂಗಳೂರು ಗ್ರಾಮಾಂತರ ಹೊರತುಪಡಿಸಿ ಉಳಿದ ಕಡೆ ಪರೀಕ್ಷೆಗಳನ್ನು ತ್ವರಿತವಾಗಿ ಪೂರ್ಣಗೊಳಿಸಲು ಸೂಚಿಸಲಾಗಿದೆ. ಬೆಂಗಳೂರು ಮತ್ತು ಗ್ರಾಮಾಂತ ಭಾಗಗಳಲ್ಲಿ ಪರೀಕ್ಷೆ ಸಮಯವನ್ನು ಶೀಘ್ರ ತಿಳಿಸಲಾಗುವುದು.
ಭಾನುವಾರ ಬೆಂಗಳೂರು ಮತ್ತು ಗ್ರಾಮಾಂತರ ಭಾಗದ ನರ್ಸರಿ, ಎಲ್ ಕೆಜಿ, ಯುಕೆಜಿ ತರಗತಿಗಳಿಗೆ ಮುಂದಿನ ಆದೇಶದವರೆಗೆ ರಜೆ ಘೋಷಿಸಲಾಗಿತ್ತು. ಈಗ ಈ ಆದೇಶವನ್ನು 5ನೇ ತರಗತಿವರೆಗೆ ವಿಸ್ತರಿಸಲಾಗಿದೆ.
ರಾಜ್ಯದ ಮುಖ್ಯ ಕಾರ್ಯದರ್ಶಿಗಳ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ನಿರ್ಧರಿಸಿದಂತೆ ಬಿಬಿಎಂಪಿ, ಬೆಂಗಳೂರು‌ನಗರ ಜಿಲ್ಲೆ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಎಲ್ಲಾ ಪ್ರಾಥಮಿಕ ಶಾಲೆಗಳಿಗೆ ಮುಂದಿನ ಆದೇಶದವರೆಗೆ ರಜೆ ಘೋಷಿಸಲಾಗಿದೆ.
— S.Suresh Kumar (@nimmasuresh)March 9, 2020

ಮಾರಕ ವೈರಸ್​ ಕೊರೊನಾ ಭೀತಿ ಹಿನ್ನೆಲೆಯಲ್ಲಿ 1ರಿಂದ 9ನೇ ತರಗತಿ ಪರೀಕ್ಷೆಗಳನ್ನು ತ್ವರಿತವಾಗಿ ಪೂರ್ಣಗೊಳಿಸಲು ಶಾಲೆಗಳಿಗೆ ಸೂಚನೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:6 + thirteen =
Remember me
