ರಾಮನಗರ:ದಕ್ಷಿಣಕನ್ನಡ ಜಿಲ್ಲೆಯಲ್ಲಿ ದೈವನರ್ತಕರೊಬ್ಬರು ದೈವಾರಾಧನೆಯ ನೃತ್ಯದ ವೇಳೆ ಕುಸಿದು ಬಿದ್ದು ಸಾವಿಗೀಡಾದ ಪ್ರಕರಣ ನಡೆದು ಮೂರು ದಿನ ಕಳೆಯುವಷ್ಟರಲ್ಲಿ ಅಂಥದ್ದೇ ಇನ್ನೊಂದು ಘಟನೆ ನಡೆದಿದೆ. ಈ ಮೂಲಕ ರಾಜ್ಯದಲ್ಲಿ ಹೃದಯಾಘಾತಕ್ಕೀಡಾಗಿ ಕುಸಿದು ಬಿದ್ದು ಸಾಯುತ್ತಿರುವ ಪ್ರಕರಣಗಳು ಮುಂದುವರಿದಿವೆ.
ರಾಮನಗರ ಜಿಲ್ಲೆ ಕನಕಪುರ ತಾಲೂಕಿನ ಮರಳವಾಡಿ ಹೋಬಳಿಯ ಮಾವತ್ತೂರು ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮಾವತ್ತೂರಮ್ಮನ ಅರ್ಚಕ ನಾಗರಾಜು (45) ಸಾವಿಗೀಡಾದ ವ್ಯಕ್ತಿ. ಇವರು ಕುಸಿದು ಬಿದ್ದು ಸಾವಿಗೀಡಾದ್ದರಿಂದ ಈ ಜಾತ್ರೆ ಅರ್ಧಕ್ಕೇ ನಿಂತುಹೋಗಿದೆ.
ಇದನ್ನೂ ಓದಿ:ದೈವನರ್ತನ ಮಾಡುತ್ತಿದ್ದಾಗಲೇ ಕುಸಿದು ಬಿದ್ದು ಪ್ರಾಣ ಬಿಟ್ಟ ದೈವ ನರ್ತಕ!
ಅರ್ಚಕ ನಾಗರಾಜು ಜಾತ್ರೆಯಲ್ಲಿ ಕೊಂಡ ಹಾಯಲು ಕಳಶ ಹೊತ್ತು ತೆರಳುತಿದ್ದ ಸಂದರ್ಭದಲ್ಲಿ ಈ ಅವಘಡ ಸಂಭವಿಸಿದೆ. ಇದ್ದಕ್ಕಿದ್ದಂತೆ ಕುಸಿದು ಬಿದ್ದು ಇವರು ಸಾವಿಗೀಡಾಗಿದ್ದು, ಊರವರು ಮತ್ತು ಭಕ್ತರಲ್ಲಿ ದಿಗ್ಭ್ರಮೆ ಮೂಡಿಸಿದೆ.
ಇದನ್ನೂ ಓದಿ:ಎದೆನೋವೆಂದು ಮುಂಜಾನೆ ಎಚ್ಚರಗೊಂಡ ಬಾಲಕಿ ಸಾವು: ವೈದ್ಯರು ಹೇಳಿದ್ದನ್ನು ಕೇಳಿ ಪಾಲಕರ ಆಕ್ರಂದನ
ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಎಡಮಂಗಲ ಗ್ರಾಮದ ಇಡ್ಯಡ್ಕದಲ್ಲಿ ಮಾ.30ರ ರಾತ್ರಿ 2 ಗಂಟೆ ಸುಮಾರಿಗೆ ಗ್ರಾಮಕ್ಕೆ ಸಂಬಂಧಿಸಿದ ನೇಮೊತ್ಸವದಲ್ಲಿ ಕಾಂತು ಅಜಿಲ ಮೂಲಂಗೀರಿ (55) ದೈವನರ್ತನದ ವೇಳೆಯೇ ಕುಸಿದು ಬಿದ್ದು ಸಾವಿಗೀಡಾಗಿದ್ದರು.
ಶಾಲಾ ಮಕ್ಕಳಿಗೆ ಎಷ್ಟು ದಿನ ರಜೆ?: ಇಲ್ಲಿದೆ ವೇಳಾಪಟ್ಟಿಯ ಪೂರ್ತಿ ವಿವರ

4 ವರ್ಷ ಕಳೆದರೂ ಕಳವಾದ ಚಿನ್ನದ ಸರ ಪತ್ತೆ ಮಾಡಲಾಗದೆ ಹೊಸ ಸರ ಕೊಡಿಸಿದ ಪೊಲೀಸರು!; ಆಗಿದ್ದೇನು?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:18 − seven =
Remember me
