ಚಿಕ್ಕಬಳ್ಳಾಪುರ:ಪೂಜೆಯ ವೇಳೆ ಕಾಲು ಜಾರಿ ಪ್ರಪಾತಕ್ಕೆ ಬಿದ್ದು ಪೂಜಾರಿಯೊಬ್ಬರು ಮೃತಪಟ್ಟಿದ್ದು, ನೆರೆದಿದ್ದ ಭಕ್ತರೆಲ್ಲ ನೋಡನೋಡುತ್ತಿದ್ದಂತೆ ಅವರ ದೇಹ ನೂರಾರು ಅಡಿ ಆಳಕ್ಕೆ ಉರುಳಿ ಬಿದ್ದಿದೆ. ಬೆಟ್ಟದ ಮೇಲಿನಿಂದ ಪೂಜಾರಿ ಕೆಳಕ್ಕೆ ಬೀಳುವ ದೃಶ್ಯ ಭಕ್ತರ ಕ್ಯಾಮರಾಗಳಲ್ಲಿ ಸೆರೆಯಾಗಿದ್ದು, ವೈರಲ್ ಆಗಿವೆ.
ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯ ಸಿಂಗನಮಲ ಗ್ರಾಮದ ಗಂಪಮಲ್ಲಯ್ಯಸ್ವಾಮಿ ಬೆಟ್ಟದಲ್ಲಿ ಈ ಅವಘಡ ನಡೆದಿದೆ. ಶ್ರಾವಣ ಮಾಸದಲ್ಲಿ ನಡೆಯುವ ವಿಶೇಷ ಪೂಜೆಯ ಸಂದರ್ಭದಲ್ಲಿ ಈ ದುರಂತ ನಡೆದುಹೋಗಿದೆ.
ಪೂಜೆಗೆ ತಯಾರಿಗೆ ಬಂದಿದ್ದ ಪೂಜಾರಿ, ಪೂಜೆ ಆರಂಭಿಸಿದ ಕೆಲವೇ ಕ್ಷಣಗಳಲ್ಲಿ ಇನ್ನಿಲ್ಲವಾಗಿದ್ದಾರೆ. ಆರತಿ ಎತ್ತುತ್ತ ದೇವರ ವಿಗ್ರಹದ ಪಕ್ಕಕ್ಕೆ ಬಂದು ನಿಂತು ಇನ್ನೇನು ಮತ್ತೆ ಮುಂದುವರಿಯಬೇಕು ಎಂಬಷ್ಟರಲ್ಲಿ ಕಾಲು ಜಾರಿ ಬಿದ್ದಿದ್ದಾರೆ. ಬೆಟ್ಟದ ಅಂಚಿನಲ್ಲೇ ತೆರೆದ ಪ್ರದೇಶದಲ್ಲಿರುವ ದೇವರ ಪೂಜೆಯ ಸಂದರ್ಭದಲ್ಲಿ ಹೀಗಾಗಿದೆ. ಅವಘಡದ ದೃಶ್ಯ ನೋಡಿದ ಭಕ್ತರು ಭಯಭೀತರಾಗಿದ್ದಾರೆ.
ಫ್ರೀ ಕೊಟ್ರೂ ಊಟ-ತಿಂಡಿ-ನೀರು ಏನೂ ಬೇಡ ಎಂದು ಹೇಳಿ ಸಿಕ್ಕಿಬಿದ್ದ ಸ್ಮಗ್ಲರ್; ಹೊಟ್ಟೆಯಲ್ಲಿತ್ತು 11 ಕೋಟಿ ರೂ. ಮೌಲ್ಯದ ಡ್ರಗ್ಸ್

ಟೇಬಲ್ ಮೇಲಿತ್ತು ಮೂರು ಟೀ ಕಪ್​; ದಂಪತಿಯನ್ನು ಪರಿಚಿತರೇ ಕೊಂದರಾ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:14 − six =
Remember me
