ಮೈಸೂರು:ನೂತನವಾಗಿ ನಿರ್ಮಾಣವಾಗಿರುವ ಮೈಸೂರು-ಬೆಂಗಳೂರು ದಶಪಥ ಹೆದ್ದಾರಿಯನ್ನು ಪ್ರಧಾನಿ ಮೋದಿ ಇಂದು ಲೋಕಾರ್ಪಣೆಗೊಳಿಸಲಿದ್ದಾರೆ. ಸುಮಾರು 118 ಕಿ.ಮೀ ಉದ್ದದ ಮೈ-ಬೆಂ ದಶಪಥ ಹೆದ್ದಾರಿಯನ್ನು ಒಟ್ಟು 8,479 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ ಮಾಡಲಾಗಿದೆ. ಇದೀಗ ಪ್ರಧಾನಿ ಮೋದಿ ವಾಯಪಡೆಯ ವಿಶೇಷ ವಿಮಾನದಲ್ಲಿ ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದಾರೆ.
15 ನಿಮಿಷ ಮುಂಚಿತವಾಗಿ ಆಗಮಿಸಿದ ಪ್ರಧಾನಿ ಮೋದಿ, ಹೆಲಿಕಾಪ್ಟರ್ ಮೂಲ ಮಂಡ್ಯಕ್ಕೆ ಪ್ರಯಾಣ ಬೆಳೆಸಲಿದ್ದಾರೆ. ಮಂಡ್ಯದ ಅಮರಾವತಿ ಹೋಟೇಲ್ ಬಳಿ ಹೆದ್ದಾರಿಯನ್ನು ಪ್ರಧಾನಿ ಮೋದಿ ಉದ್ಘಾಟಿಸಲಿದ್ದಾರೆ. ಮಂಡ್ಯಕ್ಕೆ ಬರುವ ಪ್ರಧಾನಿ ಮೋದಿ ಅವರನ್ನು ವಿವಿಧ ಕಲಾ ತಂಡಗಳು ಸ್ವಾಗತಿಸಲಿವೆ. ಮಧ್ಯಾಹ್ನ 11.40ಕ್ಕೆ ಹೆದ್ದಾರಿ ಲೋಕಾರ್ಪಣೆಗೊಳ್ಳಲಿದೆ. ಮಧ್ಯಾಹ್ನ 12.15 ರಿಂದ 1.15 ರವರೆಗೆ ವೇದಿಕೆ ಕಾರ್ಯಕ್ರಮ ಇರಲಿದೆ. ಮದ್ದೂರಿನ ಗೆಜ್ಜಲಗೆರೆ ಕಾಲನಿ ಬಳಿ ಅದ್ಧೂರಿ ವೇದಿಕೆ ನಿರ್ಮಾಣ ಮಾಡಲಾಗಿದೆ. ಅದಕ್ಕೂ ಮುನ್ನ ಮಂಡ್ಯ ನಗರದಲ್ಲಿ 1.8 ಕಿ.ಮೀ ರೋಡ್ ಶೋ ನಡೆಯಲಿದೆ.
ಇದನ್ನೂ ಓದಿ:ಟೆನಿಸ್​ ತಾರೆ ಸಾನಿಯಾ ಮಿರ್ಜಾ ನಿವೃತ್ತಿ: ಪತ್ರ ಬರೆದು ಪ್ರಧಾನಿ ಮೋದಿ ಶುಭ ಹಾರೈಕೆ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 + four =
Remember me
