ಬೆಂಗಳೂರು: ರಾಮೋತ್ಸವದ ಹವಾ, ಲೋಕ ಸಮರದ ರಣೋತ್ಸಾಹದಲ್ಲಿರುವ ರಾಜ್ಯ ಕೇಸರಿಪಡೆಗೆ ಪ್ರಧಾನಿ ನರೇಂದ್ರ ಮೋದಿಯವರ ಸಂಭಾವ್ಯ ಭೇಟಿ ಮತ್ತಷ್ಟು ಹುರುಪು ತುಂಬುವ ನಿರೀಕ್ಷೆಯಿದೆ. ಮೋದಿಯವರು ಇದೇ 19 ರಂದು ಬೆಂಗಳೂರಿಗೆ ಆಗಮಿಸುವ ನಿರೀಕ್ಷೆಯಿದೆ.
ಬಿಜೆಪಿ ರಾಜ್ಯ ಪ್ರಧಾನಿ ಕಾರ್ಯದರ್ಶಿ ಪಿ.ರಾಜೀವ್‌ ಸುದ್ದಿಗಾರರಿಗೆ ಮಂಗಳವಾರ ತಿಳಿಸಿದ ಪ್ರಕಾರ ಬೋಯಿಂಗ್ ಇಂಡಿಯಾ ಇಂಜಿನಿಯರಿಂಗ್ ಅಂಡ್ ಟೆಕ್ನಾಲಜಿ ಸೆಂಟರ್ ( ಬಿಐಇಟಿಸಿ)ಗೆ 19ರಂದು ಭೇಟಿ ನೀಡುವ ಸಾಧ್ಯತೆಗಳಿದ್ದು, ಪ್ರಧಾನಿ ಕಚೇರಿಯಿಂದ ಮಾಹಿತಿ ಲಭಿಸಿದೆ.
ಇದೇ ಕಾರಣಕ್ಕೆ 19ರಂದು ನಡೆಯಲಿದ್ದ ಪಕ್ಷದ ರಾಜ್ಯ ವಿಶೇಷ ಕಾರ್ಯಕಾರಿಣಿ ಸಭೆ ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಮೋದಿ ಭೇಟಿ  ವೇಳೆ ರೋಡ್ ಶೋ ಗೂ ಚಿಂತನೆ ನಡೆದಿದೆ. ಈ ಬಗ್ಗೆ ಪಕ್ಷದ ಸಭೆಯಲ್ಲಿ ಚರ್ಚಿಸಿ, ಪ್ರಧಾನಿ ಭೇಟಿ ಅಧಿಕೃತವಾದ ನಂತರ ಮುಂದಿನ ಹೆಜ್ಜೆಯಿಡುತ್ತೇವೆ. ಇದೇ ವೇಳೆ ವಿಶೇಷ ಕಾರ್ಯಕಾರಿಣಿ ಸಭೆ ದಿನಾಂಕ ಅಂತಿಮಗೊಳಿಸಲಾಗುವುದು ಎಂದು ಪಿ.ರಾಜೀವ್ ಸ್ಪಷ್ಟಪಡಿಸಿದರು.
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸಮೀಪ 43 ಎಕರೆ ವಿಶಾಲ ಪ್ರದೇಶದಲ್ಲಿ ಅಂತರಿಕ್ಷಯಾನ ತಂತ್ರಜ್ಞಾನ ಸಂಶೋಧನೆ ಮತ್ತು ಅಭಿವೃದ್ಧಿ ಕ್ಯಾಂಪಸ್ ತಲೆ ಎತ್ತಿದೆ. ಬೋಯಿಂಗ್ ಸಹಭಾಗಿತ್ವದ ಏರೋಸ್ಪೇಸ್ ಇಂಜಿನಿಯರಿಂಗ್ ಮತ್ತು ಟೆಕ್ನಾಲಜಿ ಕೇಂದ್ರ 2018ರಲ್ಲಿ ಕಾರ್ಯಾರಂಭಿಸಿದೆ.
ಭಾರತದಲ್ಲಿ ಅಂತರಿಕ್ಷಯಾನ ವಾಣಿಜ್ಯಿಕ ಮತ್ತು ರಕ್ಷಣಾ ಕ್ಷೇತ್ರವು ವಿಪುಲ ಅವಕಾಶಗಳನ್ನು ಸೃಷ್ಟಿಸಿದ್ದು, ಕಳೆದ ವರ್ಷವಷ್ಟೇ 1600 ಕೋಟಿ ರೂ ಬಂಡವಾಳವನ್ನು ಹೂಡಿಕೆ ಬಿಐಇಟಿಸಿ ಸಾಮರ್ಥ್ಯ ವಿಸ್ತರಿಸಿದ್ದು, ಅಂದಾಜು ಐದು ಸಾವಿರ ಉದ್ಯೋಗ ಅವಕಾಶಗಳು ಸೃಷ್ಟಿಯಾಗಿವೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 − 6 =
Remember me
