ಬೆಂಗಳೂರು, ಜನವರಿ 28 :ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅವರ ಹುಟ್ಟುಹಬ್ಬಕ್ಕೆ ಪ್ರಧಾನಿ ನರೇಂದ್ರ ಮೋದಿ ಹಾಗೂ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸೇರಿದಂತೆ ಅನೇಕ ಗಣ್ಯರು ಶುಭಾಶಯಗಳನ್ನು ಕೋರಿದ್ದಾರೆ.‌
ಪ್ರಧಾನಮಂತ್ರಿ ನರೇಂದ್ರ ಮೋದಿಯವರು ದೂರವಾಣಿ ಕರೆ ಮಾಡಿ ಶುಭ ಕೋರಿದ್ದಲ್ಲದೇ, ಕರ್ನಾಟಕದ ಸರ್ವಾಂಗೀಣ ಪ್ರಗತಿಗೆ ಅವಿರತ ಪ್ರಯತ್ನಿಸುತ್ತಿರುವ ಬೊಮ್ಮಾಯಿಯವರಿಗೆ ಜನರ ಸೇವೆ ಮಾಡಲು ಇನ್ನಷ್ಟು ಆರೋಗ್ಯವಂತ ಜೀವನ ದೊರೆಯಲಿ ಎಂದು ಹಾರೈಸಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು, ಉತ್ತರ ಪ್ರದೇಶ ಮುಖ್ಯಮಂತ್ರಿಯೋಗಿ ಆದಿತ್ಯನಾಥ್ ಅವರೂ ದೂರವಾಣಿ ಕರೆ ಮಾಡಿ ಮುಖ್ಯಮಂತ್ರಿಗಳಿಗೆ ಶುಭ ಕೋರಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರು ರಾಜ್ಯ ಪ್ರವಾಸದಲ್ಲಿದ್ದರಿಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿವರಿಗೆ ಹೂಗುಚ್ಚ ನೀಡಿ ಶುಭ ಕೋರಿದರು. ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ, ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸೇರಿದಂತೆ ಅನೇಕರು ಮುಖ್ಯಮಂತ್ರಿಗಳಿಗೆ ಶುಭಕೋರಿದ್ದಾರೆ.
ತಂದೆ ತಾಯಿಯ ಸಮಾಧಿಗೆ ಭೇಟಿ: ತಮ್ಮ 63 ಹುಟ್ಟು ಹಬ್ಬದ ಹಿನ್ನೆಲೆಯಲ್ಲಿ ಹುಬ್ಬಳ್ಳಿಯಲ್ಲಿ ತಮ್ಮ ತಂದೆ ತಾಯಿಯ ಸಮಾಧಿಗೆ ಭೇಟಿ ನೀಡಿ ಆಶೀರ್ವಾದ ಪಡೆದುಕೊಂಡರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ನಾನು ಹುಬ್ಬಳ್ಳಿಗೆ ಭೇಟಿ ನೀಡಿದಾಗ ತಂದೆ ತಾಯಿಯ ಸಮಾಧಿಗೆ ಭೇಟಿ ನೀಡಿ ಪ್ರೇರಣೆ ಪಡೆದುಕೊಳ್ಳುತ್ತೇನೆ. ನಮ್ಮ ತಂದೆ ಕಾಯಕ ಜೀವಿಯಾಗಿದ್ದರು, ತಾಯಿ ಆಧ್ಯಾತ್ಮದಲ್ಲಿ ಆಸಕ್ತಿ ಉಳ್ಳವರಾಗಿದ್ದರು, ಅವರಿಬ್ಬರೂ ನನಗೆ ಯಾವಾಗಲೂ ಪ್ರೇರಣೆಯಾಗಿದ್ದಾರೆ ಎಂದು ಹೇಳಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seventeen − sixteen =
Remember me
