ನವದೆಹಲಿ:ದೇಶದ ಬಡವರು, ಗ್ರಾಮೀಣ ಪ್ರದೇಶದ ಜನರು, ರೈತರನ್ನು ಅಭಿವೃದ್ಧಿಯತ್ತ ಕೊಂಡೊಯ್ಯುವ ಮೂಲಕ ಸಮಾಜದ ಪ್ರತಿ ವರ್ಗಕ್ಕೂ ಶಕ್ತಿ ತುಂಬುವ ಬಜೆಟ್‌ನ್ನು ನಿರ್ಮಲಾ ಸೀತಾರಾಮನ್ ಮಂಡಿಸಿದ್ದಾರೆಂದು ಪ್ರಧಾನಿ ನರೇಂದ್ರ ಮೋದಿ ವಿಶ್ಲೇಷಿಸಿದ್ದಾರೆ.
ಕಳೆದ 10 ವರ್ಷಗಳಲ್ಲಿ 25 ಕೋಟಿ ಬಡವರು ಬಡತನರೇಖೆಯಿಂದ ಹೊರ ಬಂದಿದ್ದಾರೆ. ಯುವಕರಿಗೆ ಉದ್ಯೋಗ ಸೃಷ್ಟಿ ಹಾಗೂ ಶಿಕ್ಷಣ ಮತ್ತು ಕೌಶಲ್ಯ ಕ್ಷೇತ್ರಕ್ಕೆ ಹೊಸ ಮಾರ್ಗ ಸೃಷ್ಟಿಸಲು ಆದ್ಯತೆ ನೀಡಲಾಗಿದೆ. ಮಧ್ಯಮವರ್ಗದ ಜನರಿಗೆ ಹೊಸ ಬಲವರ್ಧನೆಯನ್ನು ತಂದುಕೊಡುವುದರ ಜೊತೆಗೆ; ಬುಡಕಟ್ಟು ಜನಾಂಗ, ಹಿಂದುಳಿದ, ದಲಿತರ ಅಭಿವೃದ್ಧಿಗೆ ವಿವಿಧ ಕಾರ್ಯಕ್ರಮಗಳನ್ನು ಬಜೆಟ್‌ನಲ್ಲಿ ೋಷಿಸಲಾಗಿದೆ. ಮಹಿಳೆಯರ ಆರ್ಥಿಕ ಸ್ವಾವಲಂಬನೆ, ಚಿಕ್ಕ ವ್ಯಾಪಾರಿಗಳು, ಸಣ್ಣ ಉದ್ಯಮಗಳನ್ನು ನಡೆಸುವವರಿಗೆ ಹೊಸ ಅವಕಾಶಗಳನ್ನು ಒದಗಿಸಲಾಗಿದೆ. ಉತ್ಪಾದನೆ ಮತ್ತು ಮೂಲಭೂತ ಸೌಲಭ್ಯ ಕ್ಷೇತ್ರಗಳ ಬಲವರ್ಧನೆಗೆ ಆದ್ಯತೆ ನೀಡಲಾಗಿದೆ. ವಿಶೇಷವಾಗಿ ಉದ್ಯೋಗ ಮತ್ತು ಸ್ವಉದ್ಯೋಗ ಮಾಡುವವರಿಗೆ ಅಭೂತಪೂರ್ವ ಅವಕಾಶಗಳು ಸೃಷ್ಟಿಯಾಗಲಿವೆ. ಸಣ್ಣ ಉದ್ಯಮವನ್ನು ಮಧ್ಯಮ ಉದ್ಯಮದೊಂದಿಗೆ ಜೋಡಿಸಿರುವುದರಿಂದ ಭಾರತವು ಜಾಗತಿಕ ಉತ್ಪಾದನಾ ಕೇಂದ್ರವಾಗಿ ಮಾರ್ಪಾಡಾಗಲಿದೆ. 100 ಆಹಾರ ಗುಣಮಟ್ಟ ಪರೀಕ್ಷಾ ಕೇಂದ್ರಗಳ ಸ್ಥಾಪನೆ, ‘ಒಂದು ಜಿಲ್ಲೆ ಒಂದು ಉತ್ಪನ್ನ’ ಅಭಿಯಾನದ ಮೂಲಕ ಉತ್ಪಾದನಾ ಮಟ್ಟವನ್ನು ಹೆಚ್ಚಿಸಲಾಗಿದೆ.
1 ಕೋಟಿ ಯುವಕರಿಗೆ ಇಂಟರ್ನ್‌ಶಿಪ್ ಮೂಲಕ ವೃತ್ತ್ತಿ ತರಬೇತಿಯೊಂದಿಗೆ ಉದ್ಯೋಗ ದೊರಕಿಸಿಕೊಡಲಾಗುವುದು. ಈ ಬಜೆಟ್ ಸ್ಟಾರ್ಟಪ್‌ಗಳಿಗೆ, ಹೊಸ ಆವಿಷ್ಕಾರ, ಇಕೋ ಸಿಸ್ಟಮ್ ಅಭಿವೃದ್ಧಿಗೆ ಒತ್ತು ನೀಡಿದೆ. ಬಾಹ್ಯಾಕಾಶ ಆರ್ಥಿಕ ಅಭಿವೃದ್ಧಿಗೆ 1 ಸಾವಿರ ಕೋಟಿ ಹಣ ಮೀಸಲಿಡಲಾಗಿದೆ. ಮುದ್ರಾ ಯೋಜನೆಯ ಸಾಲ 10 ಲಕ್ಷದಿಂದ 20 ಲಕ್ಷಕ್ಕೆ ಏರಿಕೆ. ಭಾರತವನ್ನು ವಿಶ್ವದ ಆಕರ್ಷಣೀಯ ಕೇಂದ್ರವನ್ನಾಗಿಸಲು ಪ್ರವಾಸೋದ್ಯಮ ಅಭಿವೃದ್ಧಿಗೆ ಒತ್ತು. ವೈಯಕ್ತಿಕ ತೆರಿಗೆ ಪದ್ಧತಿಯನ್ನು ಸರಳಗೊಳಿಸಿ ಆದಾಯ ತೆರಿಗೆ ಮಿತಿಯನ್ನು ಹೆಚ್ಚಿಸಲಾಗಿದೆ.
ಪ್ರಮುಖವಾಗಿ ರೈತರನ್ನು ಗಮನದಲ್ಲಿಟ್ಟುಕೊಂಡು ಈ ಬಜೆಟ್ ಸಿದ್ಧಪಡಿಸಲಾಗಿದ್ದು, ವಿಶ್ವದ ಅತಿದೊಡ್ಡ ‘ಅನ್ನ ಭಂಡಾರ್’ ಯೋಜನೆಯ ಮೂಲಕ ಹಣ್ಣು-ತರಕಾರಿ ಉತ್ಪಾದನೆಗೆ ಪ್ರೋತ್ಸಾಹ, ಕೃಷಿಕೇತ್ರದಲ್ಲಿ ಆತ್ಮ ನಿರ್ಭರ್ ಯೋಜನೆಯ ಅನುಷ್ಠಾನಕ್ಕೆ ಒತ್ತು ನೀಡಲಾಗಿದೆ. ಮುಂದಿನ 10 ವರ್ಷಗಳಲ್ಲಿ ಭಾರತವನ್ನು ಜಗತ್ತಿನ 3ನೇ ಅತಿದೊಡ್ಡ ಆರ್ಥಿಕ ರಾಷ್ಟ್ರವನ್ನಾಗಿಸಲು ಬಜೆಟ್ ಪೂರಕವಾಗಿದ್ದು, ವಿಕಸಿತ ಭಾರತದ ಪರಿಕಲ್ಪನೆಗೆ ಹೊಸ ದಿಕ್ಸೂಚಿಯಾಗಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:9 − one =
Remember me
