ಬಾಗಲಕೋಟೆ:ಮಾಜಿ ಸಿಎಂ ಸಿದ್ದರಾಮಯ್ಯ ಬಾದಾಮಿ ಕ್ಷೇತ್ರವನ್ನು ಅಭಿವೃದ್ಧಿ ಮಾಡಿಲ್ಲ. ಯಾವುದೇ ಅಭಿವೃದ್ಧಿ ಮಾಡದೆ ಕ್ಷೇತ್ರದ ಜನರಿಗೆ ಮೋಸ ಮಾಡಿದ್ದಾರೆ. ಕ್ಷೇತ್ರದಲ್ಲಿ ಇರದೆ ಓಡಿ ಹೋಗಿದ್ದಾರೆ ಬಡವರ ಕಷ್ಟಗಳನ್ನು ಅರ್ಥ ಮಾಡಿಕೊಂಡಿಲ್ಲ. ಅಂತೆಯೇ ಕಾಂಗ್ರೆಸ್ ತುಷ್ಟೀಕರಣ ನೀತಿ ಅನುಸರಿಸುತ್ತಿದೆ ಎಂದು ಪ್ರಧಾನಿ ಮೋದಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.
ಬಾದಾಮಿಯಲ್ಲಿ ಬಿಜೆಪಿ ಚುನಾವಣಾ ಬಹಿರಂಗ ಸಮಾವೇಶದಲ್ಲಿ ಪ್ರಧಾನಿ ಮೋದಿ ಮಾತನಾಡುತ್ತಾ, ಬಿಜೆಪಿಗೆ ಜನರ ಬೆಂಬಲ ನೋಡಿ ಕಾಂಗ್ರೆಸ್ ಭಯ ಆರಂಭವಾಗಿದೆ. ಹೀಗಾಗಿ ನಿರಂತರವಾಗಿ ಟೀಕಿಸುತ್ತಾ ಬರುತ್ತಿದ್ದಾರೆ. 85% ಕಾಂಗ್ರೆಸ್​ನ ಟ್ರ್ಯಾಕ್ ರೆಕಾರ್ಡ್. ರಾಜೀವ್ ಗಾಂಧಿಯವರೇ ಇದನ್ನು ಹೇಳಿದ್ದಾರೆ. ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ಕಾಂಗ್ರೆಸ್​ನ ಭ್ರಷ್ಟಾಚಾರವನ್ನು ಬಂದ್ ಮಾಡಿದ್ದೇವೆ ಎಂದು ಮೋದಿ ಕಾಂಗ್ರೆಸ್ ವಿರುದ್ಧ ಗುಡುಗಿದರು.
ಇದನ್ನೂ ಓದಿ:ಪ್ರಧಾನಿ ಮೆಗಾ ರೋಡ್ ಶೋ ಅಂತ್ಯ | ದಾರಿಯುದ್ದಕ್ಕೂ ಮೊಳಗಿದ ‘ಮೋದಿ…ಮೋದಿ…’ ಘೋಷಣೆ;
ದೆಹಲಿಯಿಂದ 1 ರೂ. ಬಿಡುಗಡೆ ಆದರೆ ಜನರಿಗೆ 15 ಪೈಸೆ ತಲುಪುತ್ತದೆ ಎಂಬುದನ್ನು ಸ್ವತಃ ಕಾಂಗ್ರೆಸ್​ನ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹೇಳುತ್ತಿದ್ದರು. ಆದರೆ ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಫಲಾನುಭವಿ ಖಾತೆಗೆ ನೇರವಾಗಿ ಹಣ ವರ್ಗಾವಣೆಯಾಗುತ್ತಿದೆ. ಇದರಿಂದ ಮಧ್ಯವರ್ತಿಗಳ ಕಳ್ಳಾಟ ನಿಂತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.
ಕಾಂಗ್ರೆಸ್ ಅವಧಿಯಲ್ಲಿ 1GB Data ಬೆಲೆ 300 ರೂಪಾಯಿ ಇತ್ತು. ಆದರೆ ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ 10 ರುಪಾಯಿಗೆ ಒಂದು GB ಡಾಟಾ ನೀಡುತ್ತಿದ್ದೇವೆ. ಪ್ರತಿಯೊಂದು ಕ್ಷೇತ್ರದಲ್ಲೂ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಪ್ರಗತಿ ಸಾಧಿಸಿದೆ. ಹೀಗಾಗಿ ಕಾಂಗ್ರೆಸ್​ನವರು ನನ್ನನ್ನು ಬೈಯ್ಯುತ್ತಾರೆ ಎಂದು ಪ್ರಧಾನ ಮೋದಿ ಹೇಳಿದರು.
ಇದನ್ನೂ ಓದಿ:ಪ್ರಧಾನಿ ಹಾಗೂ ಮಣಿಕಂಠ ರಾಠೋಡ್ ವಿರುದ್ಧ ದೂರು ನೀಡಿದ ಕಾಂಗ್ರೆಸ್ ನಿಯೋಗ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × five =
Remember me
