ಬೆಂಗಳೂರು:ವಿಧಾನಸಭೆ ಚುನಾವಣೆ ಕಣದಲ್ಲಿ ಪ್ರಧಾನಿ ನರೇಂದ್ರ ಮೋದಿ ರಾಜ್ಯ ರಾಜಧಾನಿಯಲ್ಲಿ ಭರ್ಜರಿ ಶೋ ನಡೆಸಿದ್ದಾರೆ. ಮಾಗಡಿ ರಸ್ತೆಯ ನೈಸ್ ರಸ್ತೆ ಜಂಕ್ಷನ್​ನಿಂದ ಸುಮನಹಳ್ಳಿಯವರೆಗೆ ಸುಮಾರು 5 ಕಿ.ಮೀ ದೂರದವರೆಗೆ ರೋಡ್​ ಶೋನಲ್ಲಿ ಪ್ರಧಾನಿ ಭಾಗವಹಿಸಿದ್ದಾರೆ. ಮಾಜಿ ಸಿಎಂ ಸದಾನಂದ ಗೌಡ, ಚಲವಾದಿ ನಾರಾಯಣ ಸ್ವಾಮಿ ಸಾಥ್ ನೀಡಿದರು.
ಪ್ರಧಾನಿ ಮೋದಿ ಜನರತ್ತ ಕೈಬೀಸುತ್ತಾ ರೋಡ್ ಶೋನಲ್ಲಿ ಸಾಗಿದರೆ, ದಾರಿಯುದ್ಧಕ್ಕೂ ಸೇರಿದ್ದ ಅಭಿಮಾನಿಗಳು, ಬಿಜೆಪಿ ಕಾರ್ಯಕರ್ತರು ಮೋದಿ…ಮೋದಿ… ಮೋದಿ… ಎಂದು ಘೋಷಣೆ ಕೂಗಿದ್ದಾರೆ. ಕಾರ್ಯಕರ್ತರು ಬಿಜೆಪಿ ಬಾವುಟ ಹಿಡಿದು, ಕೇಸರಿ ಶಾಲು ಹಾಕಿಕೊಂಡು ಮಿಂಚಿದ್ದಾರೆ. ವಿವಿಧೆಡೆಯಿಂದ ಬಂದ ಕಲಾ ತಂಡಗಳು ರೋಡ್​ ಶೋಗೆ ಸಾಥ್ ನೀಡಿದೆ. ಸಾಂಸ್ಕೃತಿಕ ಕಲಾತಂಡಗಳು ಆಗಮಿಸಿ ಡೊಳ್ಳು ಕುಣಿತ, ವೀರಗಾಸೆ ನೃತ್ಯ ಪ್ರದರ್ಶನ ಮಾಡಿವೆ.
ಪ್ರಧಾನಿ ಮೋದಿ ರೋಡ್ ಶೋ ಸಾವಿರಾರು ಸಂಖ್ಯೆಯಲ್ಲಿ ಜನರು ಸೇರಿದ್ದರು. ನೆಚ್ಚಿನ ಪ್ರಧಾನಿಯನ್ನು ಕಣ್ತುಂಬಿಕೊಳ್ಳಲೆಂದೇ ಮಕ್ಕಳು ಹಾಗೂ ವೃದ್ಧರು ಬಂದಿದ್ದರು. ರಸ್ತೆಯ ಇಕ್ಕೆಲಗಳಲ್ಲೂ ಕಾರ್ಯಕರ್ತರು, ಯುವಕ-ಯುವತಿಯರು ಘೋಷಣೆ ಕೂಗುತ್ತಾ, ರೋಡ್ ಶೋ ರಂಗು ಹೆಚ್ಚಿಸಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eleven − 10 =
Remember me
