ಬೆಳಗಾವಿ:ಪ್ರಧಾನಿ ನರೇಂದ್ರ ಮೋದಿ, ನಗರದ ಹೃದಯಭಾಗದಲ್ಲಿರುವ ಚನ್ನಮ್ಮ ವೃತ್ತದಿಂದ ಯಡಿಯೂರಪ್ಪ ಮಾರ್ಗದಲ್ಲಿರುವ ಮಾಲಿನಿ ಸಿಟಿವರೆಗೆ 12 ಕಿ.ಮೀ ರೋಡ್​ ಷೋ ನಡೆಸಿದ್ದಾರೆ. ಸುಮಾರು 3 ಲಕ್ಷಕ್ಕೂ ಅಧಿಕ ಮಂದಿ ಪ್ರಧಾನಿ ರೋಡ್ ಷೋನಲ್ಲಿ ಭಾಗವಹಿಸಿದ್ದಾರೆ. ದಾರಿಯುದ್ದಕ್ಕೂ ಕಾರ್ಯಕರ್ತರು, ಅಭಿಮಾನಿಗಳು ಮೋದಿ… ಮೋದಿ ಎಂದು ಜೈಕಾರ ಕೂಗಿದ್ದಾರೆ. ರೋಡ್ ಷೋ ಮಾರ್ಗದಲ್ಲಿ 10 ಸ್ಥಳಗಳಲ್ಲಿ ಸಾರ್ವಜನಿಕರ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗಿತ್ತು.
ಶಿವಮೊಗ್ಗದಿಂದ ಪ್ರಧಾನಿ ಮೋದಿ ಬೆಳಗಾವಿಗೆ ಬರುತ್ತಿದ್ದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಎಡಿಜಿಪಿ ಅಲೋಕ್ ಕುಮಾರ್, ​ಬೆಳಗಾವಿ ಪ್ರಾದೇಶಿಕ ಆಯುಕ್ತ ಎಂ.ಜಿ.ಹಿರೇಮಠ, ಸಂಜಯ್ ಪಾಟೀಲ್ ಅವರು ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಬರಮಾಡಿಕೊಂಡರು.ಇದನ್ನೂ ಓದಿ:ಬೆಳಗಾವಿಯಲ್ಲಿ ಪ್ರಧಾನಿ ರೋಡ್ ಶೋ ಹಿನ್ನೆಲೆ; 10 ಕ್ವಿಂಟಾಲ್ ಹೂ ಸಿದ್ಧಗೊಳಿಸಿದ ಕಾರ್ಯಕರ್ತರು
ನರೇಂದ್ರ ಮೋದಿ ಕಣ್ಣತುಂಬಿಸಿಕೊಳ್ಳಲು ಸಾವಿರಾರು ಅಭಿಮಾನಿಗಳು ಆಗಮಿಸಿದ್ದರು. ಹಿರಿಯರು, ಕಿರಿಯರು, ಮಹಿಳೆಯರು, ಮಕ್ಕಳು ಸೇರಿದಂತೆ ಅಸಂಖ್ಯಾತ ಸಂಖ್ಯೆಯ ಜನರು ಸೇರಿದ್ದು, ರೋಡ್ ಷೋ ದಾರಿಯುದ್ದಕ್ಕೂ ಸಂಭ್ರಮದ ವಾತಾವರಣ ಮೂಡಿತ್ತು. ಬೆಳಗಾವಿಯಲ್ಲಿ ವೈಭವದ ರೋಡ್​ ಷೋ ನಡೆಸಿದ ಪ್ರಧಾನಿ ನರೇಂದ್ರ ಮೋದಿ, ನಗರದ ಮಾಲಿನಿ ಸಿಟಿಯಲ್ಲಿ ನಡೆಯುತ್ತಿರುವ ಬೃಹತ್ ಸಮಾವೇಶಕ್ಕೆ ಆಗಮಿಸಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:16 − eight =
Remember me
