ಬೆಂಗಳೂರು:ಬ್ರಿಟನ್‌ ಪ್ರಧಾನಿ ರಿಷಿ ಸುನಕ್‌ ಅವರ ತಾಯಿ ಉಷಾ ಸುನಕ್‌ ಅವರು ನಗರದಲ್ಲಿಂದು  ಶ್ರೀ ಕೃಷ್ಣ ಜನ್ಮಾಷ್ಟಮಿ ಸಂಭ್ರಮಾಚಾರಣೆಯಲ್ಲಿ ಪಾಲ್ಗೊಂಡಿದ್ದಾರೆ.

ಶ್ರೀ ಕೃಷ್ಣ ಜನ್ಮಾಷ್ಟಮಿ ಹಿನ್ನೆಲೆಯಲ್ಲಿ ಕಳೆದ ಒಂದು ವಾರದಿಂದ ಚಿಕ್ಕಪೇಟೆ ಶಾಸಕ ಡಾ. ಉದಯ್‌ ಬಿ ಗರುಡಾಚಾರ್‌ ಅವರ ಜಯನಗರದ ನಿವಾಸದಲ್ಲಿ ಕೃಷ್ಣನ ವಿವಿಧ ಮೂರ್ತಿಗಳನ್ನು ಪ್ರತಿಷ್ಠಾಪಿಸಿದ್ದು, ಉಷಾ ಸುನಕ್ ಅವರು ಕೃಷ್ಣನ ವೈಶಿಷ್ಟ್ಯಗಳನ್ನು ಕಣ್ತುಂಬಿಕೊಂಡರು. ಈ ಸಂದರ್ಭದಲ್ಲಿ ಉಷಾ ಸುನಕ್‌ ಸಾಂಪ್ರದಾಯಿಕವಾಗಿ ಕೃಷ್ಣನಿಗೆ ಪೂಜೆ ನೆರವೇರಿಸಿದರು.

ಈ ಸಂದರ್ಭದಲ್ಲಿ ಇನ್ಫೋಸಿಸ್ ಪ್ರತಿಷ್ಠಾನದ ಅಧ್ಯಕ್ಷರಾದ ಡಾ. ಸುಧಾ ಮೂರ್ತಿ, ಡಾ. ಉದಯ್‌ ಗರುಡಾಚಾರ್, ಮೇದಿನಿ ಉದಯ್‌ ಗರುಡಾಚಾರ್‌, ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪ್ರಮುಖರಾದ ವಿ. ಮಂಜುನಾಥ್‌, ವಿವಿಧ ನಿವಾಸಿಗಳ ಕಲ್ಯಾಣ ಸಂಘದ ಸದಸ್ಯರು ಭಾಗವಹಿಸಿದ್ದರು.

ದೆಹಲಿಯಲ್ಲಿ ನಡೆಯುತ್ತಿರುವ G-20 ಶೃಂಗ ಸಭೆ ಹಿನ್ನೆಲೆಯಲ್ಲಿ ಬ್ರಿಟನ್‌ ಪ್ರಧಾನಿ ರಿಷಿ ಸುನಕ್‌ ಅವರು ಕುಟುಂಬ ಸಮೇತ ಭಾರತಕ್ಕೆ ಭೇಟಿ ನೀಡಿದ್ದಾರೆ. ದೆಹಲಿಗೆ ಆಗಮಿಸಿದ ಉಷಾ ಸುನಕ್‌ ಅವರು ಬೆಂಗಳೂರಿನ ತಮ್ಮ ಬೀಗರ ಮನೆಗೆ ಆಗಮಿಸಿದ್ದಾರೆ.

ವಿದ್ಯಾಭ್ಯಾಸ, ಪರಿಶ್ರಮದಿಂದ ಎಲ್ಲವೂ ಸಾಧ್ಯ; ವೈರಲ್ ಆಯ್ತು ನಾಗರಿಕ ಸೇವಕನ ಮನೆಯ ಫೋಟೋ..

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:20 − fourteen =
Remember me
