ಬೆಳಗಾವಿ:ಪ್ರಧಾನಿ ನರೇಂದ್ರ ಮೋದಿ ಅವರ ಐದನೇ ಆವೃತ್ತಿಯ ಪರೀಕ್ಷಾ ಪೇ ಚರ್ಚಾ ಸಂವಾದ ಕಾರ್ಯಕ್ರಮಕ್ಕೆ ಬೆಳಗಾವಿ ಜಿಲ್ಲೆಯ ಇಬ್ಬರು ವಿದ್ಯಾರ್ಥಿಗಳು ಆಯ್ಕೆಯಾಗಿದ್ದು, ಪಿಎಂ ಮೋದಿ ಅವರ ಜೊತೆ ಮಾತನಾಡಲಿದ್ದಾರೆ.
ಈ ಬಗ್ಗೆ ಬೆಳಗಾವಿ ಜಿಲ್ಲಾಧಿಕಾರಿ ಎಂ. ಜಿ. ಹಿರೇಮಠ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು. 10 ನೇ ತರಗತಿ ವಿದ್ಯಾರ್ಥಿ ಶ್ರೇಯಸ್ ಮಾರ್ಗಿನಗೊಪ್ಪ ಹಾಗೂ ಕುಮಾರಿ ಜಾನ್ವಿ ದ್ವಿವೇದಿ ಸಂವಾದ ಕಾರ್ಯಕ್ರಮದಲ್ಲಿ ಭಾಗಿಯಾಗಲಿರುವ ವಿದ್ಯಾರ್ಥಿಗಳು.
ಏಪ್ರಿಲ್ 1 ರಂದು ನಡೆಯುವ ಪರೀಕ್ಷಾ ಪೇ ಚರ್ಚಾದ 5 ನೇ ಆವೃತ್ತಿಯ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು, ಶಿಕ್ಷಕರು, ಮತ್ತು ಪೋಷಕರ ಜತೆ ಪ್ರಧಾನಿ ನರೇಂದ್ರ ಮೋದಿ ಜಗತ್ತಿನಾದ್ಯಂತ ಆನ್ ಲೈನ್ ನಲ್ಲಿ ಸಂವಾದ ನಡೆಸಲಿದ್ದಾರೆ.
ಪರೀಕ್ಷಾ ಒತ್ತಡಕ್ಕೆ ಸಂಬಂಧಿಸಿದ ಮತ್ತು ಆ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಎದುರಿಸುವ ಪ್ರಶ್ನೆಗಳಿಗೆ ತಮ್ಮ ವಿಶಿಷ್ಟ ರೀತಿಯಲ್ಲಿ, ನೇರ ಪ್ರಸಾರ ಮೂಲಕ ಪಿಎಂ ಉತ್ತರಿಸಲಿದ್ದಾರೆ ಎಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಮಾಹಿತಿ ನೀಡಿದ್ದಾರೆ.
ಮಂಗಳೂರಿನ ಕುಖ್ಯಾತ ಕ್ರಿಮಿನಲ್ಸ್​​ ಪಿಂಕಿ ನವಾಜ್, ಶರಣ್​ ಮೇಲೆ ಗೂಂಡಾ ಕಾಯ್ದೆ; ಹೈಕೋರ್ಟ್ ಸಮ್ಮತಿ!

ಮದುವೆ ಮನೆಯಲ್ಲಿ ಗುಂಡಿನ ಮಳೆಗೈದ ಮಾಜಿ ಸೈನಿಕ; ಸಂಬಂಧಿಕರು ಶಾಕ್, ದಾಖಲಾಯ್ತು ಕೇಸ್!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × 3 =
Remember me
