ಬೆಳಗಾವಿ:ಪ್ರಧಾನಿ ನರೇಂದ್ರ ಮೋದಿ ಬೆಳಗಾವಿಯಲ್ಲಿ 10 ಕಿ.ಮೀ ಭರ್ಜರಿ ರೋಡ್​ ಶೋನಲ್ಲಿ ಭಾಗವಹಿಸುತ್ತಿದ್ದಾರೆ. ರೋಡ್​ ಶೋ ವೇಳೆ ಸಾದಿಯುದ್ದಕ್ಕೂ ಲಕ್ಷಾಂತರ ಸಂಖ್ಯೆಯಲ್ಲಿ ಬಿಜೆಪಿ ಕಾರ್ಯಕರ್ತರು ಸೇರಲಿದ್ದಾರೆ. ಇದೀಗ ಪ್ರಧಾನಿಯನ್ನು ಸ್ವಾಗತಿಸಲು ಕಾರ್ಯಕರ್ತರು ಭರ್ಜರಿ ಸಿದ್ಧತೆ ಮಾಡಿಕೊಂಡಿದ್ದಾರೆ. 10 ಕ್ವಿಂಟಾಲ್ ಹೂವನ್ನು ಸಿದ್ದಗೊಳಿಸಿದ್ದಾರೆ.
ಶಾಸಕ ಅಭಯ ಪಾಟೀಲ್ ನೇತೃತ್ವದಲ್ಲಿ ನಿನ್ನೆ ರಾತ್ರಿಯಿಂದ ಸಿದ್ದತೆ ಕಾರ್ಯ ನಡೆಯುತ್ತಿದ್ದು, ಕೇಂದ್ರ ಸಚಿವೆ ಶೋಭಾ ಕರಾಂದ್ಲಾಜೆ ಕೈಜೋಡಿಸಿದ್ದಾರೆ.
ಕುಂದಾನಗರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮನ ಹಿನ್ನೆಲೆ 2 ಲಕ್ಷಕ್ಕೂ ಅಧಿಕ ಕಾರ್ಯಕರ್ತರು ಸೇರುವ ನಿರೀಕ್ಷೆ ಇದೆ. ಹೀಗಾಗಿ ಲಕ್ಷಾಂತರ ಮಂದಿಗೆ ಊಟದ ವ್ಯವಸ್ಥೆ ಮಾಡಲಾಗಿದ್ದು, ಬಗೆಬಗೆಯ ಖಾದ್ಯಗಳು ತಯಾರಾಗುತ್ತಿವೆ. ನಾಲ್ಕು ಕಡೆ ಊಟ ಹಾಗೂ ಉಪಹಾರದ ವ್ಯವಸ್ಥೆಯಿದ್ದು, ಬೆಳಗಿನ ಉಪಹಾರಕ್ಕೆ ಉಪ್ಪಿಟ್ಟು, ಮಧ್ಯಾಹ್ನದ ಊಟಕ್ಕೆ ಹಾಲು ಹುಗ್ಗಿ, ಬದನೆಕಾಯಿ ಪಲ್ಯ ಹಾಗೂ ಅನ್ನ ಸಾಂಬರ್ ವ್ಯವಸ್ಥೆ ಮಾಡಲಾಗಿದೆ. ನಾಲ್ಕೂ ಪ್ರದೇಶಗಳಲ್ಲಿ ಬೃಹತ್ ಪಾರ್ಕಿಂಗ್ ಹಾಗೂ ಊಟದ ವ್ಯವಸ್ಥೆ ಇದ್ದು, ಪ್ರತಿಯೊಂದು ಸ್ಥಳದಲ್ಲಿ 35 ಸಾವಿರ ಜನರಿಗೆ ಊಟದ ವ್ಯವಸ್ಥೆ ಕಲ್ಪಿಸಲಾಗಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 + two =
Remember me
