ಬೆಂಗಳೂರು:ದಕ್ಷಿಣ ಕನ್ನಡ ಜಿಲ್ಲೆಯ ಕೆವಿಜಿ ಪಾಲಿಟೆಕ್ನಿಕ್ ಕಾಲೇಜಿನ ಪ್ರಾಂಶುಪಾಲರಾಗಿದ್ದ ಎ.ಎಸ್. ರಾಮಕೃಷ್ಣ ಅವರ ಕೊಲೆ ಪ್ರಕರಣದಲ್ಲಿ ತಪ್ಪಿತಸ್ಥರಾಗಿರುವ ಮೃತರ ಸಹೋದರ ಡಾ.ರೇಣುಕಾ ಪ್ರಸಾದ್ ಸೇರಿ 6 ಮಂದಿಗೆ ಜೀವಾವಧಿ ಶಿಕ್ಷೆ ವಿಧಿಸಿ ಹೈಕೋರ್ಟ್ ಗುರುವಾರ ಆದೇಶಿಸಿದೆ.
ಪ್ರಕರಣದಲ್ಲಿ ರೇಣುಕಾ ಪ್ರಸಾದ್ ಸೇರಿ ಏಳು ಮಂದಿ ಆರೋಪಿಗಳನ್ನು ಖುಲಾಸೆಗೊಳಿಸಿ ಪುತ್ತೂರಿನ ೫ನೇ ಹೆಚ್ಚುವರಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಹೊರಡಿಸಿದ್ದ ಆದೇಶ ರದ್ದು ಕೋರಿ ರಾಜ್ಯ ಸರ್ಕಾರ (ಪುತ್ತೂರು ಉಪ ವಿಭಾಗದ ಸಹಾಯಕ ಪೊಲೀಸ್ ವರಿಷ್ಠಾಧಿಕಾರಿ) ಸಲ್ಲಿಸಿದ್ದ ಕ್ರಿಮಿನಲ್ ಮೇಲ್ಮನವಿಯನ್ನು ಭಾಗಶಃ ಪುರಸ್ಕರಿಸಿದ ನ್ಯಾಯಮೂರ್ತಿ ಶ್ರೀನಿವಾಸ್ ಹರೀಶ್ ಕುಮಾರ್ ಅವರ ನೇತೃತ್ವದ ವಿಭಾಗೀಯ ಪೀಠ ಈ ಆದೇಶ ಮಾಡಿದೆ.
ಪ್ರಕರಣದ ಒಟ್ಟು ಏಳು ಮಂದಿ ಆರೋಪಿಗಳ ಪೈಕಿ ಡಾ.ರೇಣುಕಾ ಪ್ರಸಾದ್, ಮನೋಜ್ ರೈ, ಎಚ್.ಆರ್, ನಾಗೇಶ್, ವಾಮನ ಪೂಜಾರಿ, ಶರಣ್ ಪೂಜಾರಿ ಮತ್ತು ಶಂಕರ ಅವರನ್ನು ಮೃತ ಎ.ಎಸ್. ರಾಮಕೃಷ್ಣ ಅವರ ಹತ್ಯೆ ಮತ್ತು ಕೊಲೆಗೆ ಒಳಸಂಚು ರೂಪಿಸಿದ ಪ್ರಕರಣದಲ್ಲಿ ದೋಷಿಗಳೆಂದು ತೀರ್ಮಾನಿಸಿ ೨೦೨೩ರ ಸೆ.೨೭ರಂದು ಹೈಕೋರ್ಟ್ ಆದೇಶಿಸಿತ್ತು. ಗುರುವಾರ ಶಿಕ್ಷೆ ವಿಧಿಸುವ ಕುರಿತು ದೋಷಿಗಳ ವಾದ ಆಲಿಸಿದ ಹೈಕೋರ್ಟ್, ಕೊಲೆ ಮತ್ತು ಅಪರಾಧಿಕ ಒಳಸಂಚು ಅಪರಾಧಕ್ಕೆ ಎಲ್ಲಾ ಆರು ಮಂದಿ ದೋಷಿಗಳಿಗೆ ಜೀವಾವಧಿ ಶಿಕ್ಷೆ ಮತ್ತು ತಲಾ ೨೦ ಸಾವಿರ ರೂ. ದಂಡ ವಿಧಿಸಿ ಆದೇಶಿಸಿತು.
ಅಲ್ಲದೆ, ಕೊಲೆ ಮತ್ತು ಒಳಸಂಚಿಗೆ ರೇಣುಕಾ ಪ್ರಸಾದ್ ಅವರೇ ಮುಖ್ಯ ಕಾರಣವಾಗಿದ್ದಾರೆ. ಹೀಗಾಗಿ, ಅವರು ಮೃತ ರಾಮಕೃಷ್ಣ ಅವರ ಪತ್ನಿಗೆ ೧೦ ಲಕ್ಷ ರೂ. ಪರಿಹಾರ ಪಾವತಿಸಬೇಕು ಎಂದು ನಿರ್ದೇಶಿಸಿರುವ ನ್ಯಾಯಪೀಠ, ತಲೆ ಮರೆಸಿಕೊಂಡಿರುವ ಐದನೇ ಆರೋಪಿ ಶರಣ್ ಪೂಜಾರಿ ಬಂಧನಕ್ಕೆ ವಾರೆಂಟ್ ಹೊರಡಿಸುವಂತೆ ಪುತ್ತೂರು ಸೆಷನ್ಸ್ ಕೋರ್ಟ್‌ಗೆ ಸೂಚಿಸಿದೆ.
ಚಿಕಿತ್ಸೆಗೆ ಸೂಚನೆ:ಇದೇ ವೇಳೆ ರೇಣುಕಾ ಪ್ರಸಾದ್ ಪರ ವಕೀಲರು, ತಮ್ಮ ಕಕ್ಷಿದಾರರಿಗೆ ಸದ್ಯ ೬೩ ವರ್ಷವಾಗಿದ್ದು, ಪ್ರಕರಣದಲ್ಲಿ ದೋಷಿಯಾಗಿ ನ್ಯಾಯಾಲಯ ತೀರ್ಮಾನಿಸಿದ ನಂತರ ಅವರು ಮಾನಸಿಕವಾಗಿ ಅಸ್ವಸ್ಥರಾಗಿದ್ದಾರೆ. ಅಧಿಕ ರಕ್ತದೊತ್ತಡ, ನಿದ್ರೆಯ ಅಸ್ವಸ್ಥತೆ ಸೇರಿ ಇನ್ನಿತರ ಅನಾರೋಗ್ಯ ಸಮಸ್ಯೆ ಎದುರಿಸುತ್ತಿದ್ದಾರೆ. ಅವರಿಗೆ ಜೈಲಿನಲ್ಲಿ ಸೂಕ್ತ ಚಿಕಿತ್ಸೆ ಕಲ್ಪಿಸಲು ಆದೇಶಿಸಬೇಕೆಂದು ಕೋರಿದರು. ಈ ಮನವಿ ಪರಿಗಣಿಸಿದ ಹೈಕೋರ್ಟ್, ರೇಣುಕಾ ಪ್ರಸಾದ್‌ಗೆ ಸೂಕ್ತ ಚಿಕಿತ್ಸೆ ಕಲ್ಪಿಸುವಂತೆ ಮಂಗಳೂರು ಜೈಲು ಅಧೀಕ್ಷಕರಿಗೆ ನಿರ್ದೇಶಿಸಿತು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen − 14 =
Remember me
