

ಬೆಂಗಳೂರು:ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ 310 ಪ್ರಾಂಶುಪಾಲರಿಗೆ ಶೀಘ್ರವೇ ನೇಮಕಾತಿ ಆದೇಶ ನೀಡಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್ ಹೇಳಿದರು.ಶಿಕ್ಷಕರ ದಿನಾಚರಣೆಯಲ್ಲಿ ಭಾಗವಹಿಸಿ ಮಾತನಾಡಿ,ಪ್ರಾಂಶುಪಾಲರ ನೇಮಕಾತಿಗೆ ಈಗಾಗಲೇ ನೇರ ಪರೀಕ್ಷೆ ನಡೆದಿದ್ದು, ಫಲಿತಾಂಶವೂ ಪ್ರಕಟವಾಗಿದೆ. ದಾಖಲೆಗಳ ಪರಿಶೀಲನಾ ಕಾರ್ಯ ನಡೆಯುತ್ತಿದೆ. ಡಿಸೆಂಬರ್ ಒಳಗೆ ಎಲ್ಲ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಲಾಗುವುದು ಎಂದರು.ರಾಜ್ಯದ ಅನುದಾನಿತ ಪ್ರಥಮದರ್ಜೆ ಕಾಲೇಜುಗಳಲ್ಲಿ 2020ಕ್ಕೂ ಹಿಂದೆ ಖಾಲಿಯಾಗಿದ್ದ ಸಹಯಕ ಪ್ರಾಧ್ಯಾಪಕರ ಹುದ್ದೆಗಳ ಭರ್ತಿಗೆ ಅನುಮತಿ ನೀಡಲಾಗುವುದು ಎಂದರು.1242 ಸಹಾಯಕ ಪ್ರಾಧ್ಯಾಪಕರ ನೇಮಕಾತಿಯ ಅಂತಿಮ ಅಧಿಸೂಚನೆ ಹೊರಡಿಸಲಾಗಿದ್ದು, ಶೀಘ್ರವೇ ಸ್ಥಳ ನಿಯುಕ್ತಿ ಆದೇಶ ನೀಡಲಾಗುವುದು ಎಂದರು.
40 ದಿನದಲ್ಲಿ 40 ಸಾವಿರ ಮಕ್ಕಳುಪ್ರಾಥಮಿಕ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಾತನಾಡಿ, ಸರ್ಕಾರಿ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ಶಿಕ್ಷಣ ಆರಂಭಿಸಿದ 40 ದಿನಗಳಲ್ಲಿ 40 ಸಾವಿರ ಮಕ್ಕಳು ಪ್ರವೇಶ ಪಡೆದಿದ್ದಾರೆ. ಸರ್ಕಾರದ ಈ ನಿರ್ಧಾರ ಸರ್ಕಾರಿ ಶಾಲೆಗಳ ಬಲರ್ಧನೆಗೆ ಸಹಕಾರಿ ಆಗಲಿದೆ ಎಂದು ತಿಳಿಸಿದರು.
ಎಲ್ಲ ಮಕ್ಕಳಿಗೂ ಪೌಷ್ಟಿಕ ಆಹಾರಅಜೀಮ್ ಪ್ರೇಮ್ಜಿ ಫೌಂಡೇಷನ್ ಎಲ್ಲ ಶಾಲೆಗಳಿಗೂ ಮೊಟ್ಟೆ ಪೂರೈಸಲು 1,500 ಕೋಟಿ ರೂ. ನೀಡಿದೆ. ಸರ್ಕಾರಿ ಶಾಲೆಯ ಎಲ್ಲ ಮಕ್ಕಳಿಗೂ ಪೌಷ್ಟಿಕ ಆಹಾರ ನೀಡಲಾಗುತ್ತಿದೆ. 1,008 ಶಾಲೆಗಳಲ್ಲಿ ಎಲ್ಕೆಜಿ, ಯುಕೆಜಿ ಪ್ರಾರಂಭಿಸಿದ್ದು, ಸುಮಾರು 40 ಸಾವಿರಕ್ಕೂ ಹೆಚ್ಚು ಮಕ್ಕಳು ಕಲಿಯುತ್ತಿದ್ದಾರೆ. ಅತಿಥಿ ಶಿಕ್ಷಕರ ಮೂಲಕ ತರಗತಿಗಳನ್ನು ನಡೆಸಲಾಗುತ್ತಿದೆ. ಶಿಕ್ಷಕರ ವರ್ಗಾವಣೆಯನ್ನು ಸಹ ಸರ್ಕಾರ ಯಶಸ್ವಿಯಾಗಿ ನಡೆಸಿದೆ. ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೂ ವಿಶೇಷ ತರಗತಿಗಳನ್ನು ನಡೆಸಲಾಗುತ್ತಿದೆ ಎಂದು ಮಧು ಬಂಗಾರಪ್ಪ ತಿಳಿಸಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eighteen − 16 =
Remember me
