ಬೆಂಗಳೂರು:ವಿವಿಧ ನೀರಾವರಿ ನಿಗಮಗಳ ವ್ಯಾಪ್ತಿಯಲ್ಲಿ ತುರ್ತು ಕೈಗೆತ್ತಿಕೊಳ್ಳಬೇಕಾಗಿರುವ ಕಾಮಗಾರಿಗಳ ಪಟ್ಟಿ ತಯಾರಿಸಿ ಸಲ್ಲಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಕರ್ನಾಟಕ ನೀರಾವರಿ ನಿಗಮ, ವಿಶ್ವೇಶ್ವರಯ್ಯ ಜಲ ನಿಗಮ, ಕೃಷ್ಣಾ ಭಾಗ್ಯ ಜಲ ನಿಗಮ, ಕಾವೇರಿ ನೀರಾವರಿ ನಿಗಮಗಳ ನಿರ್ದೇಶಕ ಮಂಡಳಿ ಸಭೆಗಳ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ನಿಗಮಗಳು ಚುರುಕಿನಿಂದ ಕಾರ್ಯ ನಿರ್ವಹಿಸಬೇಕು. ಕಾಲಮಿತಿಯಲ್ಲಿ ಕಾಮಗಾರಿ ಪೂರ್ಣಗೊಳಿಸಬೇಕು. ತುರ್ತು ಆಗಬೇಕಾಗಿರುವ ಕೆಲಸ ಕಾರ್ಯಗಳಿಗೆ ಒತ್ತು ನೀಡಬೇಕು ಎಂದು ಸೂಚನೆ ನೀಡಿದ್ದಾರೆ.
ಕಾಲುವೆ, ಸೇತುವೆ, ರಸ್ತೆಗಳ ಸ್ಥಿತಿ-ಗತಿ ಮತ್ತು ತುರ್ತು ದುರಸ್ತಿ, ಅದಕ್ಕೆ ತಗಲುವ ಅಂದಾಜು ವೆಚ್ಚಗಳ ಆದ್ಯತಾ ಪಟ್ಟಿಯನ್ನು ಸಿದ್ಧಪಡಿಸಿ ಸಲ್ಲಿಸುವಂತೆ ತಿಳಿಸಿದ್ದಾರೆ ಎನ್ನಲಾಗಿದೆ.
ಶಾಸಕರು ನಿಗಮಗಳ ಅಡಿ ಬರುವ ಕಾಮಗಾರಿಗಳಿಗೆ ಸಲ್ಲಿಸಿರುವ ಮನವಿಗಳನ್ನು ಗಂಭೀರವಾಗಿ ಪರಿಗಣಿಸಬೇಕು. ಆ ಬೇಡಿಕೆ ಈಡೇರಿಸಲು ಹೆಚ್ಚಿನ ಒತ್ತು ನೀಡಬೇಕು ಎಂದು ತಾಕೀತು ಮಾಡಿದ್ದಾರೆ. ಕಳೆದ ಸರ್ಕಾರದ ಅವಧಿಯಲ್ಲಿ ಎಷ್ಟು ಯೋಜನೆಗಳಿಗೆ ಆದೇಶ ಮಾಡಲಾಗಿದೆ. ಎಷ್ಟು ಮೌಖಿಕ ಆದೇಶದ ಮೇಲೆ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ. ಅವುಗಳ ಸ್ಥಿತಿ-ಗತಿ ಏನಿದೆ. ಯಾವ ಕಾಮಗಾರಿಗಳು ಪ್ರಗತಿಯಲ್ಲಿವೆ ಎಂಬ ವಿವರವನ್ನೂ ಮುಂದಿನ ಸಭೆಗೆ ಮಂಡಿಸುವಂತೆ ನಿರ್ದೇಶನ ನೀಡಿದ್ದಾರೆ ಎನ್ನಲಾಗಿದೆ.
ಖಾಸಗಿ ಸಾರ್ವಜನಿಕ ಸಹಭಾಗಿತ್ವ(ಪಿಪಿಪಿ) ಅಡಿ ಕೃಷ್ಣರಾಜಸಾಗರ ಜಲಾಶಯದ ಬೃಂದಾವನ ಗಾರ್ಡನ್ ಅಭಿವೃದ್ಧಿಪಡಿಸುವ ಕುರಿತು ವಿಶೇಷವಾಗಿ ಚರ್ಚಿಸಲಾಯಿತು. ಈ ಯೋಜನೆ ಕುರಿತ ಅಧಿಕಾರಿಗಳು ಪ್ರಾತ್ಯಕ್ಷಿತೆಯನ್ನು ಪ್ರದರ್ಶಿಸಿದರು. ಯೋಜನೆಯ ರೂಪುರೇಷೆ ಬಗ್ಗೆ ವಿಸ್ತ್ಕೃತ ಚರ್ಚೆ ನಡೆಯಿತು.ಅಲ್ಲದೆ, ನಿಗಮಗಳ ಆಡಳಿತಾತ್ಮಕ ಅನುಮೋದನೆಗಳು, ತಾಂತ್ರಿಕ ಒಪ್ಪಿಗೆ, ಶಾಸನಬದ್ಧ ಕಾರ್ಯಕ್ರಮಗಳಿಗೆ ಸಭೆಯಲ್ಲಿ ಅನುಮೋದನೆ ನೀಡಲಾಯಿತು.ಡಿಸಿಎಂ ಡಿ.ಕೆ.ಶಿವಕುಮಾರ್ ಸೇರಿದಂತೆ ಜಲಸಂಪನ್ಮೂಲ ಇಲಾಖೆ ಅಧಿಕಾರಿಗಳು, ನಿಗಮಗಳ ಮುಖ್ಯಸ್ಥರು ಈ ಸಭೆಗಳಲ್ಲಿ ಉಪಸ್ಥಿತರಿದ್ದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:16 − fifteen =
Remember me
