ಬೆಂಗಳೂರು:ಕನಿಷ್ಠ ಮೂಲಸೌಕರ್ಯಗಳ ಕೊರತೆ ಎದುರಿಸುತ್ತಿರುವ ಕೊಳೆಗೇರಿ ನಿವಾಸಿಗಳಲ್ಲಿ ಅಗತ್ಯವಿರುವ ಸೌಲಭ್ಯ ಕಲ್ಪಿಸಿಕೊಟ್ಟು ನೆಮ್ಮದಿಯಿಂದ ಜೀವನ ಸಾಗಿಸುವಂತೆ ಮಾಡಿಕೊಡುವುದೇ ನನ್ನ ಮೊದಲ ಆದ್ಯತೆಯಾಗಿದೆ ಎಂದು ಗಾಂಧಿನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಪ್ತಗಿರಿಗೌಡ ವಾಗ್ದಾನ ಮಾಡಿದ್ದಾರೆ.
ಕ್ಷೇತ್ರದ ಸುಭಾಷ್​ನಗರ, ಪಾಪಣ್ಣ ಬ್ಲಾಕ್ ಹಾಗೂ ಕೆಲವು ಕೊಳೆಗೇರಿ ಪ್ರದೇಶಗಳಿಗೆ ಭೇಟಿ ನೀಡಿ ಬಿರುಸಿನ ಪ್ರಚಾರ ನಡೆಸಿದರು. ಬಿಬಿಎಂಪಿ ಮಾಜಿ ಸದಸ್ಯ ಗೋವಿಂದರಾಜು ಅವರ ಪುತ್ರ ಶ್ರೀನಿವಾಸ್, ವಾರ್ಡ್ ಅಧ್ಯಕ್ಷ ಮದನ್, ಬಿಜೆಪಿ ಮುಖಂಡರಾದ ಕುಮರೇಶ್, ಆನಂದ್, ಸುರೇಶ್ ಮತ್ತಿತರರು ಸಾಥ್ ನೀಡಿದರು. ಮೊದಲು ಆಂಜನೇಯ ದೇವಸ್ಥಾನಕ್ಕೆ ತೆರಳಿ ಆಶೀರ್ವಾದ ಪಡೆದರು. ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್ ಪ್ರತಿಮೆಗೂ ಮಾಲಾರ್ಪಣೆ ಮಾಡಿದರು.
ಇದನ್ನೂ ಓದಿ:ಮಂಡ್ಯದಲ್ಲಿಂದು ಯೋಗಿ ಆದಿತ್ಯನಾಥ್ ಅಬ್ಬರ: ಒಕ್ಕಲಿಗ ಸಮುದಾಯದ ಮನಗೆಲ್ಲಲು ಬಿಜೆಪಿಯಿಂದ ಯೋಗಿ ಅಸ್ತ್ರ!
ನೆರೆದಿದ್ದ ಜನಸ್ತೋಮವನ್ನುದ್ದೇಶಿಸಿ ಮಾತನಾಡಿದ ಸಪ್ತಗಿರಿಗೌಡ, ಅನೇಕ ಕೊಳೆಗೇರಿ ಪ್ರದೇಶಗಳಲ್ಲಿ ಕುಡಿಯುವ ನೀರು, ಶಾಲೆಗಳು, ಆಸ್ಪತ್ರೆಗಳು, ಚರಂಡಿ, ಬೀದಿದೀಪ ಸೇರಿ ಹಲವು ರೀತಿಯ
ಮೂಲಸೌಕರ್ಯಗಳ ಕೊರತೆ ಇರುವುದು ಗಮನಕ್ಕೆ ಬಂದಿದೆ. ಬೆಂಗಳೂರನ್ನು ಕೊಳೆಗೇರಿಮುಕ್ತ ಮಾಡಬೇಕೆಂಬುದು ನಮ್ಮ ಬಿಜೆಪಿ ಸರ್ಕಾರದ ದೃಢಸಂಕಲ್ಪವಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ವಸತಿ ಸಚಿವ ವಿ. ಸೋಮಣ್ಣ ನಗರದ ಅಭಿವೃದ್ಧಿಗೆ ಸಾಕಷ್ಟು ಅನುದಾನ ನೀಡಿದ್ದರೂ ಈ ಭಾಗವು ಅಭಿವೃದ್ಧಿಯಿಂದ ವಂಚಿತವಾಗಿದೆ ಎಂದು ದೂರಿದರು.
ಮತದಾರರಿಗೆ ಹತ್ತಿರವಾಗುತ್ತಿರುವ ಸಪ್ತಗಿರಿಗೌಡ: ಗಾಂಧಿನಗರ ಕ್ಷೇತ್ರದಲ್ಲಿ ಮಿಂಚಿನ ಸಂಚಾರ, ಜನರಿಂದ ಜಯಘೋಷ

ಸಮಸಮಾಜ ನಿರ್ಮಾಣಕ್ಕೆ ಬಸವಣ್ಣ ಕಾರಣ: ಗಾಂಧಿನಗರ ಬಿಜೆಪಿ ಅಭ್ಯರ್ಥಿ ಸಪ್ತಗಿರಿಗೌಡ ಅಭಿಮತ

ಸಪ್ತಗಿರಿಗೌಡ ಪರ ಮೋಹನ್ ಭರ್ಜರಿ ಪ್ರಚಾರ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × two =
Remember me
