ಬೆಳಗಾವಿ:ಚಿತ್ರದುರ್ಗ ಮೂಲದ ರೇಣುಕಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್​ ಒಂದಿಲ್ಲೊಂದು ಕಾರಣಕ್ಕೆ ಸುದ್ದಿಯಾಗುತ್ತಿದ್ದಾರೆ. ಕಳೆದ ವಾರ ಅವರು ಜೈಲಿನಲ್ಲಿ ರಾಜಾತಿಥ್ಯ ಪಡೆಯುತ್ತಿರುವ ಫೋಟೋ ಹಾಗೂ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದ್ದವು. ಇದರ ಬೆನ್ನಲ್ಲೇ ಅವರನ್ನು ಬಳ್ಳಾರಿ ಸೆಂಟ್ರಲ್​ ಜೈಲಿಗೆ ಸ್ಥಳಾಂತರಿಸಲಾಗಿತ್ತು ಮತ್ತು ಜೈಲಿನಲ್ಲಿ ಕಟ್ಟುನಿಟ್ಟಾದ ಕ್ರಮಗಳನ್ನು ಜಾರಿ ಮಾಡಲಾಗಿತ್ತು.
ಜೈಲಿನಲ್ಲಿ ಕಟ್ಟುನಿಟ್ಟಾದ ನಿಯಮಗಳನ್ನು ಜಾರಿಗೆ ತರುತ್ತಿದ್ದಂತೆ ಖೈದಿಗಳಿಗೆ ಕಿರಿಕಿರಿಯನ್ನುಂಟು ಮಾಡಿದ್ದು, ಇದೀಗ ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿ ಖೈದಿಗಳು ವಿಶೇಷ ಬೇಡಿಕೆಯನ್ನು ಈಡೇರಿಸುವಂತೆ ಪ್ರತಿಭಟನೆ ಮಾಡಿದ್ದು, ಬೀಡಿ, ಸಿಗರೇಟ್ ತಂಬಾಕು ಕೊಡುವವರಗೆ ನಾವು ತಿಂಡಿ, ಊಟ ಮಾಡುವುದಿಲ್ಲ ಎಂದು ಪಟ್ಟು ಹಿಡದಿರುವುದಾಗಿ ವರದಿಯಾಗಿದೆ.
ಇದನ್ನೂ ಓದಿ:ಭ್ರಷ್ಟ, ದುಷ್ಟ ಕಾಂಗ್ರೆಸ್ ಸರ್ಕಾರದ ದಬ್ಬಾಳಿಕೆಗೆ ಬಿಜೆಪಿ ಬಗ್ಗದು: ಬಿ.ವೈ.ವಿಜಯೇಂದ್ರ
ಪರಪ್ಪನ ಅಗ್ರಹಾರದಲ್ಲಿ ಕೊಲೆ ಆರೋಪಿ ನಟ ದರ್ಶನ್​ಗೆ ರಾಜಾತಿಥ್ಯ ದೊರೆಯುತ್ತಿರುವ ಫೋಟೋ ಹೊರ ಬರುತ್ತಿದ್ದಂತೆ ರಾಜ್ಯ ಸರ್ಕಾರ ಎಚ್ಚತ್ತಿದ್ದು, ಕೂಡಲೇ ಏಳು ಮಂದಿ ಅಧಿಕಾರಿಗಳನ್ನು ಅಮಾನತು ಮಾಡಿ ಆರೋಪಿಗಳನ್ನು ನ್ಯಾಯಾಲಯದ ಅನುಮತಿ ಪಡೆದು ಬಳ್ಳಾರಿ, ಬೆಳಗಾವಿ, ಧಾರವಾಡ, ವಿಜಯಪುರ, ಶಿವಮೊಗ್ಗ ಹಾಗೂ ಮೈಸೂರು ಕಾರಾಗೃಹಗಳಿಗೆ ಸ್ಥಳಾಂತರಿಸಿತ್ತು. ಇದೀಗ ಹಿಂಡಲಗಾ ಜೈಲಿನಲ್ಲಿ ಖೈದಿಗಳು ಬೀಡಿ, ಸಿಗರೇಟ್, ತಂಬಾಕು ಉತ್ಪನ್ನಗಳಿಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ.
ಬೀಡಿ, ಸಿಗರೇಟ್, ತಂಬಾಕು ಉತ್ಪನ್ನಗಳಿಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿರುವ ಖೈದಿಗಳೂ ಬೆಳಗಿನ ಉಪಹಾರ ಮಾಡದೆ ಪ್ರತಿಭಟನೆ ನಡೆಸುತ್ತಿದ್ದಾರೆ. ಒಂದು ವೇಳೆ ಪ್ರತಿಭಟನೆಗೆ ಮಣಿಯದಿದ್ದರೆ ಮಧ್ಯಾಹ್ನದ ಊಟವನ್ನು ಮಾಡುವುದಿಲ್ಲ ಎಂದು ಖೈದಿಗಳು ಪಟ್ಟು ಹಿಡಿದಿದ್ದು, ಇದು ಜೈಲಧಿಕಾರಿಗಳಿಗೆ ತಲೆನೋವಾಗಿ ಪರಿಣಮಿಸಿದೆ.
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:4 × one =
Remember me
