ಬೆಂಗಳೂರು:ಪರಪ್ಪನ ಅಗ್ರಹಾರ ಜೈಲಿನಲ್ಲಿ ವಿಚಾರಣಾಧೀನ ಖೈದಿ ಆಗಿರುವ ಅವರಿಗೆ 6106 ಖೈದಿ ನಂಬರ್​ ಕೊಡಲಾಗಿದೆ.   ಫ್ಯಾನ್ಸ್ ಪಾಲಿಗೆ ಇದು ಲಕ್ಕಿ ನಂಬರ್​ ಎಂಬ ಭಾವನೆ ಕೆಲವರಿಗೆ ಮೂಡಿದೆ.
ಸ್ನೇಹಿತೆ ಪವಿತ್ರಾ ಗೌಡಗೆ ಅಶ್ಲೀಲವಾಗಿ ಮೆಸೇಜ್​ ಕಳಿಸಿದ್ದ ಎಂಬ ಕಾರಣಕ್ಕೆ ರೇಣುಕಾ ಸ್ವಾಮಿ ಎಂಬಾತನನ್ನು ಕೊಲೆ ಮಾಡಿದ ಆರೋಪದಲ್ಲಿ ದರ್ಶನ್​ ಜೈಲು ಸೇರಿದ್ದಾರೆ. ಅವರಿಗೆ 6106 ಖೈದಿ ನಂಬರ್​ ನೀಡಲಾಗಿದೆ. ಈ ನಂಬರ್​ ಮೇಲೆ ಕೆಲವು ಅಭಿಮಾನಿಗಳಿಗೆ ಆಕರ್ಷಣೆ ಹೆಚ್ಚಿದೆ. ಇದೇ ನಂಬರ್​ನಲ್ಲಿ ಹೊಸ ವಾಹನಗಳ ನೋಂದಣಿ ಮಾಡಿಸಿಕೊಳ್ಳಲು ಕೆಲವು ಫ್ಯಾನ್ಸ್​ ಮುಂದಾಗಿದ್ದಾರೆ ಎನ್ನಲಾಗಿದೆ.
ಪರಪ್ಪನ ಅಗ್ರಹಾರದಲ್ಲಿ ಇರುವ ದರ್ಶನ್​ ಅವರನ್ನು ನೋಡಲೇಬೇಕು ಎಂದು ಕೆಲವು ಅಭಿಮಾನಿಗಳು ಹಠ ಹಿಡಿದಿದ್ದಾರೆ. ದೂರದ ಊರುಗಳಿಂದ ಬಂದಿರುವ ಫ್ಯಾನ್ಸ್​ ಈಗಾಗಲೇ ಜೈಲಿನ ಮುಂದೆ ನಿಂತು ಕಾಯುತ್ತಿದ್ದಾರೆ. ‘ಅವರನ್ನು ನೋಡಿಕೊಂಡೇ ನಾವು ಊರಿಗೆ ಹೋಗೋದು’ ಎಂದು ಕೆಲವರು ಕಣ್ಣೀರು ಹಾಕುತ್ತಿದ್ದಾರೆ. ಸದ್ಯಕ್ಕೆ ದರ್ಶನ್​, ಪವಿತ್ರಾ ಹಾಗೂ ಅವರ ಸಹಚರರು ಜೈಲಿನಲ್ಲಿ ಕಂಬಿ ಎಣಿಸುತ್ತಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:thirteen − 3 =
Remember me
