ಹೊಸೂರು:ಕೃಷ್ಣಗಿರಿ ಜಿಲ್ಲೆ ಎರ್ರಹಳ್ಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು ಬೆಳಗ್ಗೆ ಖಾಸಗಿ ಬಸ್ ಹಾಗೂ ಟ್ರ್ಯಾಕ್ಟರ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಟ್ರ್ಯಾಕ್ಟರ್‌ನಲ್ಲಿ ಪ್ರಯಾಣಿಸುತ್ತಿದ್ದ ಹಸುಗೂಸು ಸೇರಿ ಒಂದೇ ಕುಟುಂಬದ 5 ಮಂದಿ ದಾರುಣವಾಗಿ ಮೃತಪಟ್ಟಿದ್ದಾರೆ.
ಮುನಿಸ್ವಾಮಿ (50), ವರ್ಷಿಣಿ (3 ತಿಂಗಳು) ಮುತ್ತು (20) ಮಲ್ಲಿ (65) ವಸಂತಿ (45) ಮೃತ ದುರ್ದೈವಿಗಳು. ಘಟನೆಯಲ್ಲಿ 7 ಮಂದಿ ತೀವ್ರ ಗಾಯಗೊಂಡಿದ್ದು, ಕೃಷ್ಣಗಿರಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ, ಪ್ರಕರಣಕ್ಕೆ ಸಂಬಂಧಿಸಿದಂತೆ ಬಸ್ ಚಾಲಕ ಕರಪುಸ್ವಾಮಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಇದನ್ನೂ ಓದಿ:ಸಿದ್ದರಾಮಯ್ಯ ಕಾರ್ ಎದುರು ಮೋದಿ..ಮೋದಿ, ಜೈ ಶ್ರೀರಾಮ್ ಘೋಷಣೆ ಕೂಗಿದ ಯುವಕರು!
ಧರ್ಮಪುರಿ ಜಿಲ್ಲೆ ಸೋಲೂರು ಗ್ರಾಮದ ಒಂದೇ ಕುಟುಂಬದ 12 ಮಂದಿ ಕೂಲಿ ಕಾರ್ಮಿಕರು ಆಂಧ್ರಪ್ರದೇಶದ ಕೊತ್ತುಕೋಟೆಯಲ್ಲಿ ಕೃಷಿ ಕೆಲಸಕ್ಕಾಗಿ ಟ್ರ್ಯಾಕ್ಟರ್‌ನಲ್ಲಿ ಪ್ರಯಾಣಿಸುತ್ತಿದ್ದರು. ಶಿವಕಾಶಿಯಿಂದ ಬೆಂಗಳೂರು ಕಡೆಗೆ ಸಾಗುತ್ತಿದ್ದ ಖಾಸಗಿ ಬಸ್ ಹಿಂಬದಿಯಿಂದ ಡಿಕ್ಕಿಯೊಡೆದ ಪರಿಣಾಮ ಟ್ರ್ಯಾಕ್ಟರ್ ಮಗುಚಿ ಬಿದ್ದು ದುರ್ಘಟನೆ ಸಂಭವಿಸಿದೆ, ಟ್ರ್ಯಾಕ್ಟರ್ ಅಡಿ ಸಿಲುಕಿದ ಕೂಲಿಕಾರ್ಮಿಕರು ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಸ್ಥಳೀಯರು ಗಾಯಾಳುಗಳನ್ನು ರಕ್ಷಣೆ ಮಾಡಿ ಸ್ಥಳೀಯ ಆಸ್ಪತ್ರೆಗೆ ರವಾನಿಸಿದ್ದಾರೆ, ಇದರಲ್ಲಿ ಕೆಲವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಹಾವೇರಿ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೃಷ್ಣಗಿರಿ ಜಿಲ್ಲಾಧಿಕಾರಿ ದೀಪಕ್ ಜಾಕ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ತಮಿಳುನಾಡು ಸರ್ಕಾರ ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ.ಪರಿಹಾರ ಘೋಷಿಸಿದೆ.
ಸಿಎಂ ಯೋಗಿ ವಿರುದ್ಧ ಪದೇ ಪದೇ ಅರ್ಜಿ ಸಲ್ಲಿಸಿದ ವ್ಯಕ್ತಿಗೆ 1 ಲಕ್ಷ ರೂ. ದಂಡ ವಿಧಿಸಿದ ಹೈಕೋರ್ಟ್; ಏನಿದು ಪ್ರಕರಣ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twelve − 11 =
Remember me
