ಚಿಕ್ಕಮಗಳೂರು:ಬಸ್​ಗಾಗಿ ಕಾಯುತ್ತಿದ್ದ ವಿದ್ಯಾರ್ಥಿಗಳ ಮೇಲೆ ಖಾಸಗಿ ಬಸ್​ ನುಗ್ಗಿದ ಪರಿಣಾಮ ಓರ್ವ ಬಾಲಕಿ ಸಾವನ್ನಪ್ಪಿದ ಘಟನೆ ಚಿಕ್ಕಮಗಳೂರಿನ ತರೀಕೆರೆ ತಾಲೂಕಿನ ದುಗ್ಲಾಪುರ ಗೇಟ್ ಬಳಿ ಸಂಭವಿಸಿದೆ.
ಇದನ್ನೂ ಓದಿ:ಮಂಡ್ಯದಲ್ಲಿ ವಕೀಲರಿಂದ ಪ್ರತಿಭಟನೆ: ಕಾವೇರಿ ಹೋರಾಟಕ್ಕೆ ಬೆಂಬಲ
ಪ್ರತಿದಿನ ಬಸ್ಸಿಗೆಂದು ಕಾಯುವ ಶಾಲಾ ಮಕ್ಕಳ ಗುಂಪೊಂದು ಇಂದು ಕೂಡ ಬಸ್​ಗಾಗಿ ಕಾಯುತ್ತಿತ್ತು. ಈ ವೇಳೆ ವೇಗವಾಗಿ ಬಂದ ಖಾಸಗಿ ಬಸ್​, ಮಕ್ಕಳ ಮೇಲೆ ನುಗ್ಗಿದ ಪರಿಣಾಮ ತುಳಸಿ ಎಂಬ 15 ವರ್ಷದ ಬಾಲಕಿ ಅಪಘಾತದಲ್ಲಿ ಮೃತಪಟ್ಟಿದ್ದಾಳೆ. ಈ ವೇಳೆ ನಿವೇದಿತಾ (14) ಗಂಭೀರವಾಗಿ ಗಾಯಗೊಂಡಿದ್ದು, ಉಳಿದವರು ಅದೃಷ್ಟವಶಾತ್​ ಪಾರಾಗಿದ್ದಾರೆ.
ಈ ಘಟನೆಯಿಂದ ಆಕ್ರೋಶಗೊಂಡ ಗ್ರಾಮಸ್ಥರು, ಪ್ರತಿಯೊಂದು ಖಾಸಗಿ ಬಸ್​ ಚಾಲಕರಿಗೆ ಎಚ್ಚರಿಕೆ ನೀಡುತ್ತಿದ್ದಾರೆ. ರಸ್ತೆಯಲ್ಲಿ ಸಾಗುತ್ತಿರುವ ಬಸ್​ಗಳನ್ನು ಅಡ್ಡಗಟ್ಟಿ ನಿಧಾನವಾಗಿ ಚಲಿಸುವಂತೆ ಹೇಳಿದ್ದಾರೆ.
ಆಟವಾಡುತ್ತಿದ್ದ ವೇಳೆ ವಿದ್ಯುತ್ ಸ್ಪರ್ಶದಿಂದ ಬಾಲಕ ಮೃತ್ಯು!; ವಿದ್ಯುತ್ ಇಲಾಖೆಯನ್ನು ದೂರಿದ ಪೋಷಕರು

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:eleven + 4 =
Remember me
