ಬೆಂಗಳೂರು:ಚಿಕ್ಕಜಾಲದ ಎಂವಿ ಸೋಲರ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಉದ್ಯೋಗಿ ಇನ್ಕ್ರಿಮೆಂಟ್ ಆಗಿಲ್ಲವೆಂದು ಕಂಪನಿಯೊಳಗೆ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಶಾಂತಕುಮಾರ್ ಆತ್ಮಹತ್ಯೆ ಮಾಡಿಕೊಂಡ ಉದ್ಯೋಗಿ. ಮಂಗಳವಾರ ರಾತ್ರಿ 9:30ರಲ್ಲಿ ಕಂಪನಿಯಲ್ಲಿ ಯಾರು ಇಲ್ಲದ ವೇಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಇದನ್ನೂ ಓದಿರಿ:ಉಗ್ರರೊಂದಿಗೆ ತೀರ್ಥಹಳ್ಳಿಯ ಯುವಕರಿಬ್ಬರ ಸಂಪರ್ಕ? ಎನ್​ಐಎ ಅಧಿಕಾರಿಗಳು ಭೇಟಿ
ಸಾಯುವ ಮುನ್ನ ಡೆತ್ ನೋಟ್ ಬರೆದಿರುವ ಮೃತ ಶಾಂತಕುಮಾರ್, ಆರ್ಥಿಕ ಸಮಸ್ಯೆ ಹಾಗೂ ಇನ್ಕ್ರಿಮೆಂಟ್ ಆಗದ ಹಿನ್ನಲೆ ನೊಂದು ನೇಣಿಗೆ ಶರಣಾಗಿರುವುದಾಗಿ ಉಲ್ಲೇಖಿಸಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ.
ಹಲವು ವರ್ಷದಿಂದ ಇದೇ ಕಂಪನಿಯಲ್ಲಿ ಕೆಲಸಕ್ಕಿದ್ದ ಶಾಂತಕುಮಾರ್‌ ಮೂಲತಃ ಹಿರಿಯೂರಿನವನಾದ್ದಾರೆ. ಐಟಿಐ ಮುಗಿಸಿ ಕೆಲಸಕ್ಕೆ ಸೇರಿದ್ದ ಇವರು ಆರ್ಥಿಕವಾಗಿ ಸಮಸ್ಯೆ ಹೊಂದಿದ್ದರು.
ಘಟನೆ ಸಂಬಂಧ ಚಿಕ್ಕಜಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಮಗೆ ತೊಂದರೆ ಕೊಡುವವರನ್ನು ನಾನು ಬಿಡೋದಿಲ್ಲ: ನಟ ಯಶ್​

ನಾನು 20 ವರ್ಷ ಕಾಂಗ್ರೆಸ್​ನಲ್ಲೇ ಇದ್ದೆ, ಜಾರಕಿಹೊಳಿ ಸಿಡಿ ಮಾಡಿದ್ದೇ ಕಾಂಗ್ರೆಸ್​: ಸಚಿವರ ಸ್ಫೋಟಕ ಹೇಳಿಕೆ

ದೇವಸ್ಥಾನದ ಬಾವಿಗೆ‌ ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ: ತೆಕ್ಕಟ್ಟೆ ಬೆನ್ನಲ್ಲೇ ಅದೇ ರೀತಿಯ ಮತ್ತೊಂದು ದುರಂತ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × one =
Remember me
