ಬೆಂಗಳೂರು:ಆಯುರ್ವೆದ ವೈದ್ಯರಿಗೆ ಕೆಲ ಶಸ್ತ್ರಚಿಕಿತ್ಸೆಗಳನ್ನು ನಡೆಸಲು ಅವಕಾಶ ನೀಡಿರುವ ಕೇಂದ್ರ ಸರ್ಕಾರದ ಕ್ರಮ ಖಂಡಿಸಿ, ಭಾರತೀಯ ವೈದ್ಯಕೀಯ ಸಂಘದ (ಐಎಂಎ) ನೇತೃತ್ವದಲ್ಲಿ ಅಲೋಪತಿ ವೈದ್ಯರು ಡಿ.11ರಂದು ಬೆಳಿಗ್ಗೆ 6ರಿಂದ ಸಂಜೆ 6ರವರೆಗೆ ಹೊರರೋಗಿ ವಿಭಾಗ (ಒಪಿಡಿ)ದಲ್ಲಿ ಸೇವೆ ಸ್ಥಗಿತಗೊಳಿಸಿ ಮುಷ್ಕರ ನಡೆಸಲು ನಿರ್ಧರಿಸಿದ್ದಾರೆ. ಆದರೆ ತುರ್ತು ಚಿಕಿತ್ಸೆಗಳು ಹಾಗೂ ಕೋವಿಡ್ ಸೇವೆ ಲಭ್ಯ ಇರಲಿದೆ.
ಕೇಂದ್ರ ಸರ್ಕಾರ ಕಳೆದ ತಿಂಗಳು ಅಪೆಂಡಿಕ್ಸ್, ಪಿತ್ತಕೋಶ, ಹಾನಿಕಾರಕವಲ್ಲದ ಗೆಡ್ಡೆ ತೆಗೆಯುವುದು, ಹಲ್ಲಿನ ರೂಟ್​ಕ್ಯಾನಲ್ ಮುಂತಾದ ಸಾಮಾನ್ಯ ಶಸ್ತ್ರಚಿಕಿತ್ಸೆಗಳನ್ನು ನಡೆಸಲು ಆಯುರ್ವೆದ ವೈದ್ಯರಿಗೆ ಅನುಮತಿ ನೀಡಿದೆ. ಪ್ರಾಯೋಗಿಕವಾಗಿ ತರಬೇತಿ ಪಡೆದ ಸ್ನಾತಕೋತ್ತರ ಪದವೀಧರ ಆಯುರ್ವೆದ ವೈದ್ಯರು ಶಸ್ತ್ರಚಿಕಿತ್ಸೆ ನಡೆಸಬಹುದಾಗಿದ್ದು, ಇದರಿಂದ ರೋಗಿಗಳಿಗೆ ತೊಂದರೆ ಆಗಲಿದೆ ಎಂದು ಅಲೋಪತಿ ವೈದ್ಯರು ದೂರಿದ್ದಾರೆ. ಕೇಂದ್ರ ಸರ್ಕಾರ ತನ್ನ ನಿರ್ಧಾರವನ್ನು ಮರುಪರಿಶೀಲಿಸಬೇಕು ಎಂದು ಒತ್ತಾಯಿಸಿ ಐಎಎಂ ನೇತೃತ್ವದಲ್ಲಿ ಡಿ.8ರಂದು ವೈದ್ಯರು ಕಪ್ಪು ಪಟ್ಟಿ ಧರಿಸಿ ಸೇವೆ ಸಲ್ಲಿಸುವ ಮೂಲಕ ಪ್ರತಿಭಟನೆ ನಡೆಸಲಿದ್ದಾರೆ ಎಂದು ಐಎಂಎ ಕರ್ನಾಟಕ ಶಾಖೆಯ ಕಾರ್ಯದರ್ಶಿ ಡಾ.ಎಸ್.ಎಂ.ಪ್ರಸಾದ್ ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twelve − 4 =
Remember me
