ಬೆಂಗಳೂರು:ಸರ್ಕಾರದ ನಿಯಮಗಳನ್ನು ನಿರ್ಲಕ್ಷಿಸಿ ಚಿಕಿತ್ಸೆ ನೆಪದಲ್ಲಿ ಕರೊನಾ ಸೋಂಕಿತರಿಂದ ಹೆಚ್ಚಿನ ಹಣ ಪಡೆದಿದ್ದ ಖಾಸಗಿ ಆಸ್ಪತ್ರೆಗಳಿಗೆ ಹಿರಿಯ ಐಪಿಎಸ್ ಅಧಿಕಾರಿ ರೂಪಾ ಡಿ. ಮೌದ್ಗಿಲ್ ಹಾಗೂ ಹಿರಿಯ ಐಎಎಸ್ ಅಧಿಕಾರಿ ಹರ್ಷಗುಪ್ತ ನೇತೃತ್ವದ ತಂಡ ಎಚ್ಚರಿಕೆ ನೀಡಿದ ಬೆನ್ನಲ್ಲೇ, ರಾಜರಾಜೇಶ್ವರಿನಗರದ ಪ್ರತಿಷ್ಠಿತ ಖಾಸಗಿ ಆಸ್ಪತ್ರೆ 22 ರೋಗಿಗಳಿಂದ ವಸೂಲಿ ಮಾಡಿದ್ದ 24 ಲಕ್ಷ ರೂ.ಗಳನ್ನು ರೋಗಿಗಳಿಗೆ ವಾಪಸ್ ನೀಡಿದೆ.
ಖಾಸಗಿ ಆಸ್ಪತ್ರೆಗಳು ಕರೊನಾ ಸೋಂಕಿತರಿಂದ ಹಣ ವಸೂಲಿ ಮಾಡುತ್ತಿರುವ ಬಗ್ಗೆ ಹಲವು ದೂರು ಬಂದಿದ್ದವು. ಸೋಂಕು ಸಂಪೂರ್ಣ ವಾಸಿಯಾಗಲು ಚಿಕಿತ್ಸೆಗೆ 4-5 ಲಕ್ಷ ರೂ. ವೆಚ್ಚವಾಗಲಿದೆ ಎಂದು ರೋಗಿಗಳಿಗೆ ಆಸ್ಪತ್ರೆ ಸಿಬ್ಬಂದಿ ಹೇಳಿದ್ದರು. ಚಿಕಿತ್ಸೆಗೆ ದಾಖಲಿಸಿಕೊಳ್ಳಲು ಮುಂಗಡವಾಗಿ 1 ರಿಂದ 2 ಲಕ್ಷ ರೂ. ಪಡೆಯುತ್ತಿದ್ದರು. ಈ ಕುರಿತು ಸಿಕ್ಕ ಮಾಹಿತಿ ಆಧರಿಸಿ ಜು. 23ರ ರಾತ್ರಿ ರೂಪಾ ಹಾಗೂ ಹರ್ಷಗುಪ್ತಾ ಮೂರು ಖಾಸಗಿ ಆಸ್ಪತ್ರೆಗಳಿಗೆ ಭೇಟಿ ನೀಡಿ ಪರಿಶೀಲಿಸಿದಾಗ ಸೋಂಕಿತರಿಂದ ಹೆಚ್ಚಿನ ಹಣ ವಸೂಲಿ ಮಾಡಿರುವುದು ದಾಖಲೆ ಸಮೇತ ಪತ್ತೆಯಾಗಿತ್ತು. ಆಸ್ಪತ್ರೆ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ ಕಾನೂನು ಕ್ರಮ ಜರುಗಿಸುವುದಾಗಿ ಎಚ್ಚರಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಸೋಂಕಿತರ ಖಾತೆಗೆ ಆಸ್ಪತ್ರೆ 24 ಲಕ್ಷ ರೂ. ಜಮಾ ಮಾಡಿದೆ. ಇನ್ನು ಕೆಲವರಿಗೆ ಶೀಘ್ರದಲ್ಲಿ ಹಣ ಮರಳಿಸಲಿದೆ.
ಜನರಿಂದ ಶ್ಲಾಘನೆ
ಕರೊನಾ ಸೋಂಕಿತರಿಂದ ಹಣ ಸುಲಿಗೆ ಮಾಡಿದ್ದ ಪ್ರತಿಷ್ಠಿತ ಖಾಸಗಿ ಆಸ್ಪತ್ರೆಗೆ ಬಿಸಿ ಮುಟ್ಟಿಸಿದ ಐಪಿಎಸ್ ಅಧಿಕಾರಿ ಡಿ.ರೂಪಾ ಅವರ ಕರ್ತವ್ಯಕ್ಕೆ ಟ್ವಿಟರ್​ನಲ್ಲಿ ನೆಟ್ಟಿಗರಿಂದ ಶ್ಲಾಘನೆ ವ್ಯಕ್ತವಾಗಿದೆ.
ಲ್ಯಾಂಬೋರ್ಗಿನಿ ಕಾರು ರಹಸ್ಯ ಬಯಲು: 5 ವರ್ಷದ ಬಳಿಕ ವಶ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × 3 =
Remember me
