ಬೆಂಗಳೂರು:ಶಕ್ತಿ ಯೋಜನೆ, ರ್‍ಯಾಪಿಡೋ ಬೈಕ್​ ಟ್ಯಾಕ್ಸಿ ನಿಷೇಧ ಸೇರಿದಂತೆ 30ಕ್ಕೂ ಹೆಚ್ಚು ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಖಾಸಗಿ ಸಾರಿಗೆ ಒಕ್ಕೂಟ ಕರೆ ನೀಡಿದ್ದ ಮುಷ್ಕರವನ್ನು ಹಿಂಪಡೆದುಕೊಂಡಿವೆ. ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಖಾಸಗಿ ಸಾರಿಗೆ ಸಂಘಗಳ ಒಕ್ಕೂಟ ಸೋಮವಾರ (ಸೆಪ್ಟೆಂಬರ್​ 11) ಬಂದ್​ಗೆ ಕರೆ ನೀಡಿದ್ದವು.
ನಗರದ ಸ್ವಾತಂತ್ರ್ಯ ಉದ್ಯಾನವನಕ್ಕೆ ಭೇಟಿ ನೀಡಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಪ್ರತಿಭಟನಾ ನಿರತರ ಅಹವಾಲುಗಳನ್ನು ಆಲಿಸಿದ್ದಾರೆ. ಆರ್ಥಿಕ ಇಲಾಖೆಗೆ ಸಂಬಂಧಿಸಿದ ಬೇಡಿಕೆಗಳನ್ನು ಹೊರತುಪಡಿಸಿ ಉಳಿದವುಗಳನ್ನು ಈಡೇರಿಸುವುದಾಗಿ ಭರವಸೆ ನೀಡಿದ ಬಳಿಕ ಮುಷ್ಕರವನ್ನು ಹಿಂಪಡೆಯಲಾಗಿದೆ.
ಇದನ್ನೂ ಓದಿ:ದಂಪತಿಗಳ ನಡುವೆ ಕಲಹ; ಬಿಡಿಸಲು ಹೋದವನ ಹತ್ಯೆ
ಬಳಿಕ ಮಾತನಾಡಿದ ಸಚಿವ ರಾಮಲಿಂಗಾರೆಡ್ಡಿ ನಾನು ನಿಮ್ಮ ಜೊತೆ ಇದ್ದೇನೆ. ನನ್ನನ್ನು ಸಹ ನಿಮ್ಮ ಜೊತೆ ಸೇರಿಸಿಕೊಳ್ಳಿ. ಶಕ್ತಿ ಯೋಜನೆಯನ್ನು ಖಾಸಗಿ ಸಾರಿಗೆಗಳಿಗೆ ವಿಸ್ತರಿಸಬೇಕು ಅಥವಾ ರಸ್ತೆ ತೆರಿಗೆ ರದ್ದು ಮಾಡಬೇಕೆಂಬ ಬೇಡಿಕೆ ಈಡೇರಿಸುವುದು ನನ್ನ ವ್ಯಾಪ್ತಿಯಲ್ಲಿ ಕಷ್ಟವಾಗುತ್ತದೆ. ಈ ಮೂರನ್ನು ಹೊರತುಪಡಿಸಿ ಉಲಿದ 27 ಬೇಡಿಕೆಗಳನ್ನು ಈಡೇರಿಸಲಾಗುವುದು ಎಂದು ತಿಳಿಸಿದ್ದಾರೆ.
ಖಾಸಗಿ ಸಾರಿಗೆ ಸಂಘಗಳ ಒಕ್ಕೂಟದ ಅಧ್ಯಕ್ಷ ನಟರಾಜ್ ಶರ್ಮಾ​ ಮಾತನಾಡಿ ಆರ್ಥಿಕ ಇಲಾಖೆಗೆ ಸಂಬಂಧಿಸಿದ ಮೂರು ಬೇಡಿಕೆಗಳನ್ನು ಹೊರತುಪಡಿಸಿ ಉಳಿದ 27 ಬೇಡಿಕೆಗಳನ್ನು ಈಡೇರಿಸಲು ಮಂಗಳವಾರ ಸಂಜೆಯೊಳಗೆ ಕ್ರಮಕೈಗೊಳ್ಳಬೇಕು ಎಂಬ ಷರತ್ತಿನ ಮೇಲೆ ಮುಷ್ಕರವನ್ನು ಹಿಂಪಡೆಯಲಾಗಿದೆ. ಒಂದು ವೇಳೆ ಬೇಡಿಕೆ ಈಡೇರಿಸದಿದ್ದಲ್ಲಿ ಮುಷ್ಕರವನ್ನು ಆರಂಭಿಸಲಾಗುವುದು ಎಂದು ಒಕ್ಕೂಟದ ಅಧ್ಯಕ್ಷ ನಟರಾಜ್ ಶರ್ಮಾ ತಿಳಿಸಿದ್ದಾರೆ.
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:4 × one =
Remember me
