ಕಲಬುರಗಿ:ಲೋಕಸಭೆ ಚುನಾವಣಾ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ರಾಜಕೀಯ ಪಕ್ಷಗಳ ನಾಯಕರು ಮತದಾರರನ್ನು ತಮ್ಮತ್ತ ಸೆಳೆಯಲು ಕಸರತ್ತಿನಲ್ಲಿ ನಿರತರಾಗಿದ್ದು, ಆರೋಪ-ಪ್ರತ್ಯಾರೋಪಗಳಲ್ಲಿ ನಿರತರಾಗಿದ್ದಾರೆ. ಇತ್ತ ಬಿಜೆಪಿಯ ಮನುವಾದಿಗಳು ನನ್ನ ಹೆಣದ ಮೇಲೆ ಚುನಾವಣೆ ಮಾಡಲು ಹೊರಟ್ಟಿದ್ದಾರೆ ಎಂದು ಸಚಿವ ಪ್ರಿಯಾಂಕ್​ ಖರ್ಗೆ ಆರೋಪಿಸಿದ್ದಾರೆ.
ಕಲಬುರಗಿಯಲ್ಲಿ ಈ ಕುರಿತು ಸುದ್ದಿಗೋಷ್ಠಿಯನ್ನು ಉದ್ಧೇಶಿಸಿ ಮಾತನಾಡಿದ ಸಚಿವ ಖರ್ಗೆ, ಗಲಭೆ ಸೃಷ್ಟಿ ಮಾಡಿ ಬಿಜೆಪಿಯವರು ಚುನಾವಣೆ ಮಾಡಬೇಕು ಅಂತಿದ್ದಾರೆ. ನನ್ನ ಹೆಣ ಬೀಳಿಸಿಯಾದ್ರೂ ಚುನಾವಣೆ ಗೆಲ್ಲುವ ಪ್ಲಾನ್ ಮಾಡುತ್ತಿದ್ದಾರೆ. ತಮ್ಮ ಕಚೇರಿಗೆ 10 ದಿನಗಳ ಹಿಂದೆ ಜೀವ ಬೆದರಿಕೆ ಪತ್ರ ಬಂದಿದ್ದು, ಅದರಲ್ಲಿ ತನ್ನನ್ನು ಎನ್​ಕೌಂಟರ್​ ಮಾಡವುದಾಗಿ ಬೆದರಿಕೆ ಹಾಕಲಾಗಿದೆ ಎಂದು ಹೇಳಿದ್ದಾರೆ.
ಬಿಜೆಪಿಯವರು ಈ ಚುನಾವಣೆಯಲ್ಲಿ ಗೊಂದಲ ಸೃಷ್ಟಿ ಮಾಡುತ್ತಿದ್ದಾರೆ. . ಗೊಂದಲ ಸೃಷ್ಟಿಸಿ ಕಾನೂನು ಸುವ್ಯವಸ್ಥೆ ಹಾಳು ಮಾಡುತ್ತಿದ್ದೀರಿ. ಗಲಭೆ ಸೃಷ್ಟಿ ಮಾಡಿ ಚುನಾವಣೆ ಮಾಡಬೇಕು ಅಂತಿದ್ದಾರೆ. ನನ್ನ ಹೆಣ ಬೀಳಿಸಿಯಾದರೂ ಚುನಾವಣೆ ಗೆಲ್ಲಬೇಕು ಎಂದು ಪ್ಲಾನ್ ಮಾಡಿಕೊಂಡಿದ್ದಾರೆ. ಇದಲ್ಲದೆ ನನಗೆ ಮತ್ತೊಂದು ಜೀವ ಬೆದರಿಕೆ ಪತ್ರ ಬಂದಿದೆ. ಅದರಲ್ಲಿ ನನ್ನನ್ನು ಎನ್ಕೌಂಟರ್ ಮಾಡುವುದು ಸತ್ಯ ಎಂದು ಬೆದರಿಕೆ ಹಾಕಲಾಗಿದೆ. ಅಲ್ಲದೇ, ಈ ಬೆದರಿಕೆ ಪತ್ರ ಫಿನ್​ಲ್ಯಾಂಡ್​ನಿಂದ ಬಂದಿದೆ ಎಂದು ಹೇಳಿದ್ದಾರೆ.
ಇದನ್ನೂ ಓದಿ:ಟಿಕೆಟ್​ ದರದಲ್ಲೂ ದಾಖಲೆ ಸೃಷ್ಟಿಸಿದ ಆರ್​ಸಿಬಿ; ಬೆಲೆ ಕೇಳಿ ದಂಗಾದ ಫ್ಯಾನ್ಸ್​
ಬಿಜೆಪಿಯವರಿಗೆ ನಮ್ಮನ್ನ ರಾಜಕೀಯವಾಗಿ ಎದುರಿಸಲು ಆಗುತ್ತಿಲ್ಲ. ಹೀಗಾಗೇ ವೈಯಕ್ತಿಕವಾಗಿ ಟಾರ್ಗೇಟ್ ಮಾಡುತ್ತಿದ್ದಾರೆ. ಇದಕ್ಕೆಲ್ಲಾ ನಾನೂ ಹೆದರುವುದಿಲ್ಲ. ನಾನು ಬಳೆ ತೊಟ್ಟುಕೊಂಡಿಲ್ಲ, ಆಖಾಡದಲ್ಲಿ ರೆಡಿಯಿದ್ದೇನೆ ಎಂದು ಸಂಸದ ಉಮೇಶ್ ಜಾದವ್ ಅವರೇ ಹೇಳುತ್ತಾರೆ. ಇದಕ್ಕೆ ನಮ್ಮ ಸಂಸದರು ಉತ್ತರ ನೀಡಬೇಕು. ನೇರವಾಗಿ ಮನುವಾದಿಗಳೇ ಬೆದರಿಕೆ ಹಾಕುತ್ತಿದ್ದಾರೆ.
ಬೆದರಿಕೆ ಸಂಬಂಧ ಮಾರ್ಚ್ 13 ರಂದು ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲಿಸಿದ್ದೇನೆ. ವಿಕಾಸೌಧದಲ್ಲಿರುವ ನನ್ನ ಕಚೇರಿಗೆ ಕಲಬುರಗಿಯಿಂದಲೇ ಪತ್ರ ಬಂದಿದೆ. ಹೆದರಿಸುವುದು ಅಥವಾ ಬೆದರಿಸಲು ಬಂದರೆ ನಾವು ಹೆದರುವುದಿಲ್ಲ ಎಂದು ಸಚಿವ ಪ್ರಿಯಾಂಕ್​ ಖರ್ಗೆ ಹೇಳಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:14 + eighteen =
Remember me
