ಬೆಂಗಳೂರು:ಚುನಾವಣೆಗು ಮುನ್ನವೇ ಕಾಂಗ್ರೆಸ್​, ರಾಜ್ಯದ ಜನರಿಗೆ ಐದು ಗ್ಯಾರಂಟಿಗಳನ್ನು ನೀಡಿತ್ತು. ಕಾಂಗ್ರೆಸ್​ನ ಭರ್ಜರಿ​ ಗೆಲುವಿನಲ್ಲಿ ಈ ಗ್ಯಾರಂಟಿಗಳು ಕೂಡ ಪ್ರಮುಖ ಪಾತ್ರವಹಿಸಿವೆ. ಇದೀಗ ಸರ್ಕಾರ ರಚನೆಗೆ ಮುಂದಾಗಿರುವ ಕಾಂಗ್ರೆಸ್ ಐದು ಗ್ಯಾರಂಟಿಗಳನ್ನು ಯಾವ ರೀತಿ ಈಡೇರಿಸುತ್ತದೆ ಎಂಬ ಕುತೂಹಲ ಎಲ್ಲರಲ್ಲೂ ಮನೆ ಮಾಡಿದೆ. ಇದರ ನಡುವೆಯೇ ಇನ್ನೊಂದು ಗ್ಯಾರಂಟಿಯನ್ನು ಕಾಂಗ್ರೆಸ್​ ಘೋಷಣೆ ಮಾಡಿದೆ.
ಆದರೆ, ಈ ಬಾರಿ ಕಾಂಗ್ರೆಸ್​ ಪಕ್ಷದಿಂದ ಗ್ಯಾರಂಟಿ ಘೋಷಣೆಯಾಗಿಲ್ಲ. ಬದಲಾಗಿ ಇಂದು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿರುವ ಪ್ರಿಯಾಂಕ ಖರ್ಗೆ ಅವರಿಂದ 6ನೇ ಗ್ಯಾರಂಟಿ ಘೋಷಣೆಯಾಗಿದೆ.
ಇದನ್ನೂ ಓದಿ:ಇನ್ನೂ ತೀರ್ಮಾನವಾಗದ ಸಚಿವ ಸಂಪುಟ: ಬೇಸರಗೊಂಡು ಸಿದ್ದು ಬಳಿ ಸುಳಿಯದ ಆಪ್ತರು!
ಇಂದು ನಿಯೋಜಿತ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್​ ಹಾಗೂ ಎಂಟು ಸಚಿವ ಪದಗ್ರಹಣ ಸಮಾರಂಭ ಕಂಠೀರವ ಸ್ಟೇಡಿಯಂನಲ್ಲಿ ನಡೆಯಲಿದೆ. ಪ್ರಿಯಾಂಕ ಖರ್ಗೆ ಅವರಿಗೂ ಸಚಿವ ಸ್ಥಾನ ದೊರೆತಿದೆ. ಹೀಗಾಗಿ ಪ್ರಮಾಣವಚನ ಸ್ವೀಕರಿಸಲು ಕಂಠೀರವ ಸ್ಟೇಡಿಯಂಗೆ ಆಗಮಿಸಿದ್ದು, ಅದಕ್ಕೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿ ಆರನೇ ಗ್ಯಾರಂಟಿ ಘೋಷಣೆ ಮಾಡಿದರು.
ಯಾವುದು ಆ ಗ್ಯಾರಂಟಿ ಎಂದು ನೋಡುವುದಾದರೆ, ಪಿಎಸ್​ಐ ಹಾಗೂ ಬಿಟ್​ಕಾಯಿನ್ ಹಗರಣಗಳಿಗೆ ತಾರ್ಕಿಕ ಅಂತ್ಯವನ್ನು ಕಾಂಗ್ರೆಸ್​ ನೀಡಲಿದೆಯಂತೆ. ಇದು ನನ್ನ ಆರನೇ ಭರವಸೆ ಎಂದು ಪ್ರಿಯಾಂಕ ಖರ್ಗೆ ಹೇಳಿದ್ದಾರೆ. ಬಿಜೆಪಿ ಸರ್ಕಾರದ ಹಗರಣಗಳ ಆರೋಪಿಗಳಿಗೆ ಶಿಕ್ಷೆ ನೀಡಿಸಲಾಗುವುದು. ಎರಡು ಪ್ರಕರಣಗಳನ್ನು ಲಾಜಿಕ್ ಎಂಡ್​ಗೆ ತೆಗೆದುಕೊಂಡು ಹೋಗಲಾಗುವುದು ಎಂದು ಪ್ರಿಯಾಂಕ ಖರ್ಗೆ ಭರವಸೆ ನೀಡಿದ್ದಾರೆ.
* ಎಂ. ಬಿ. ಪಾಟೀಲ್ (ಲಿಂಗಾಯತ)* ಡಾ. ಜಿ. ಪರಮೇಶ್ವರ್ (ದಲಿತ ಬಲ)* ಪ್ರಿಯಾಂಕ ಖರ್ಗೆ (ದಲಿತ ಬಲ)* ಕೆ.ಎಚ್. ಮುನಿಯಪ್ಪ (ದಲಿತ ಎಡ)* ಕೆ. ಜೆ. ಜಾರ್ಜ್ (ಕ್ರಿಶ್ಚಿಯನ್)* ಸತೀಶ್ ಜಾರಕಿಹೊಳಿ (ಪರಿಶಿಷ್ಠ ಪಂಗಡ) (ವಾಲ್ಮಿಕಿ)* ಜಮೀರ್ ಅಹ್ಮದ್ ಖಾನ್ (ಮುಸ್ಲಿಂ)* ರಾಮಲಿಂಗಾ ರೆಡ್ಡಿ (ರೆಡ್ಡಿ ಸಮುದಾಯ)
ಇದನ್ನೂ ಓದಿ:ಸಚಿವ ಸಂಪುಟದಲ್ಲಿ ಅವಕಾಶ ಸಿಕ್ಕಿದೆ… ನನಗೆ ಯಾವುದೇ ಅಸಮಾಧಾನ ಇಲ್ಲ: ಡಾ.ಜಿ.ಪರಮೇಶ್ವರ್
ಮೊದಲ ಸಚಿವ ಸಂಪುಟಕ್ಕೆ ಕೇವಲ ಎಂಟು ಮಂದಿಯನ್ನು ಮಾತ್ರ ಆಯ್ಕೆ ಮಾಡಲಾಗಿದೆ. ಒಟ್ಟು ಆರು ಸಮುದಾಯಕ್ಕೆ ಅವಕಾಶ ನೀಡಲಾಗಿದೆ. ಐದು ಸಮುದಾಯಕ್ಕೆ ತಲಾ ಒಂದೊಂದು ಸಚಿವ ಸ್ಥಾನ ಹಂಚಿಕೆ ಮಾಡಲಾಗಿದೆ. ದಲಿತ ಸಮುದಾಯಕ್ಕೆ ಮೂರು ಸ್ಥಾನ, ಅದರಲ್ಲಿ ದಲಿತ ಬಲ ಸಮುದಾಯಕ್ಕೆ ಎರಡು ಹಾಗೂ ದಲಿತ ಎಡ ಸಮುದಾಯಕ್ಕೆ ಒಂದು ಸಚಿವ ಸ್ಥಾನ ನೀಡಲಾಗಿದೆ.(ದಿಗ್ವಿಜಯ ನ್ಯೂಸ್​)
ಇನ್ನೂ ತೀರ್ಮಾನವಾಗದ ಸಚಿವ ಸಂಪುಟ: ಬೇಸರಗೊಂಡು ಸಿದ್ದು ಬಳಿ ಸುಳಿಯದ ಆಪ್ತರು!

ರಾಕೆಟ್​ ಬಳಸದೆಯೂ ಇನ್ನು ಅಂತರಿಕ್ಷದಲ್ಲಿ ಮದುವೆಯಾಗಬಹುದು! ಖರ್ಚೆಷ್ಟು ಗೊತ್ತಾ?

ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾಗಿರುವ ಪ್ರದೀಪ್​ ಈಶ್ವರ್​ಗೆ ಮಾತೃವಿಯೋಗ: ಸಾಕುತಾಯಿ ನಿಧನ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty − seventeen =
Remember me
