ಬೆಂಗಳೂರು:ಬಿಜೆಪಿ ಇನ್ನೂ ವಿಪಕ್ಷ ನಾಯಕನನ್ನು ಆಯ್ಕೆ ಮಾಡದೇ ಇದ್ದು ಈ ವಿಚಾರವನ್ನು ಸಚಿವ ಪ್ರಿಯಾಂಕ್ ಖರ್ಗೆ ಟ್ವೀಟ್​ ಮಾಡಿ ಟೀಕಿಸಿದ್ದಾರೆ.
ಈ ಕುರಿತಾಗಿ ಈ ಹಿಂದೆಯೂ ಮುಖ್ಯಮಂತ್ರಿ ಸೇರಿದಂತೆ ಕಾಂಗ್ರೆಸ್ ನಾಯಕರು ವಿಪಕ್ಷ ನಾಯಕ ಆಯ್ಕೆ ಆಗದ ಬಗ್ಗೆ ಟೀಕಿಸಿದ್ದರು. ಈ ಕುರಿತಾಗಿ ಬಿಜೆಪಿ ವಲಯದಲ್ಲೂ ಹತಾಶೆ ವ್ಯಕ್ತವಾಗಿದೆ. ಈ ನಡುವೆ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಶೋಭಾ ಕರಂದ್ಲಾಜೆ ಹೆಸರೂ ಮುನ್ನೆಲೆಗೆ ಬಂದಿದೆ. ಅದಲ್ಲದೇ ಸುಮಾರು ಒಂದವರೆ ಗಂಟೆಗಳ ಕಾಲ ಪ್ರಧಾನಿ ಜತೆ ಚರ್ಚೆ ಶೋಭಾ ಕರಂದ್ಲಾಹೆ ಚರ್ಚೆ ನಡೆಸಿದ್ದೂ ಹಲವು ಕುತೂಹಲಗಳಿಗೆ ಕಾರಣವಾಗಿದೆ.
ಟ್ವೀಟ್​ನಲ್ಲಿ ಪ್ರಿಯಾಂಕ್ ಖರ್ಗೆ, “ವಿರೋಧ ಪಕ್ಷದ ನಾಯಕನಿಲ್ಲದೆ ರಾಜ್ಯಪಾಲರ ಭಾಷಣ ಆಯಿತು. ಬಜೆಟ್ ಮಂಡನೆಯಾಯ್ತು, ಸದನ ಶುರುವಾಗಿ ಒಂದು ವಾರಕ್ಕೂ ಹೆಚ್ಚು ದಿನಗಳಾದವು” ಎಂದು ವ್ಯಂಗ್ಯವಾಡಿದ್ದಾರೆ.
ಅದಲ್ಲದೇ, “ಕರ್ನಾಟಕದ ವಿಧಾನಸಭೆಯ ಭವ್ಯ ಪರಂಪರೆಗೆ ಮೊದಲ ಬಾರಿ ಇಂತಹದ್ದೊಂದು ಕಪ್ಪು ಚುಕ್ಕೆ ಅಂಟಿದೆ. ಆಡಳಿತ ಪಕ್ಷವಾಗಿ ಮಾತ್ರವಲ್ಲ, ವಿರೋಧ ಪಕ್ಷವಾಗಿಯೂ ಜವಾಬ್ದಾರಿಯುತವಾಗಿ ನಡೆದುಕೊಳ್ಳುವಲ್ಲಿ ಬಿಜೆಪಿ ಸೋತಿದೆ” ಎಂದು ಗಂಭೀರವಾಗಿ ಟೀಕಿಸಿದ್ದಾರೆ.
ಇದೆಲ್ಲದರ ಜತೆಗೆ ಪ್ರಿಯಾಂಕ್​ ಖರ್ಗೆ, “ವಿಪಕ್ಷ ನಾಯಕನನ್ನು ನೇಮಿಸದೆ ಪ್ರಜಾಪ್ರಭುತ್ವ ವ್ಯವಸ್ಥೆಗೆ, ಕರ್ನಾಟಕದ ಜನತೆಗೆ, ಸದನದ ಪಾವಿತ್ರ್ಯತೆಗೆ ಅವಮಾನಕರವಾಗಿ ನಡೆದುಕೊಂಡು ರಾಜಕೀಯ ವ್ಯವಸ್ಥೆಯ ಮೇಲೆ ಜನರಲ್ಲಿ ಬಿಜೆಪಿ ಅಪನಂಬಿಕೆ ಮೂಡಿಸುತ್ತಿದೆ” ಎಂದು ಬರೆದುಕೊಂಡಿದ್ದಾರೆ.
ವಿರೋಧ ಪಕ್ಷದ ನಾಯಕನಿಲ್ಲದೆ ರಾಜ್ಯಪಾಲರ ಭಾಷಣ ಆಯಿತು. ಬಜೆಟ್ ಮಂಡನೆಯಾಯ್ತು, ಸದನ ಶುರುವಾಗಿ ಒಂದು ವಾರಕ್ಕೂ ಹೆಚ್ಚು ದಿನಗಳಾದವು.ಕರ್ನಾಟಕದ ವಿಧಾನಸಭೆಯ ಭವ್ಯ ಪರಂಪರೆಗೆ ಮೊದಲ ಬಾರಿ ಇಂತಹದ್ದೊಂದು ಕಪ್ಪು ಚುಕ್ಕೆ ಅಂಟಿದೆ.ಆಡಳಿತ ಪಕ್ಷವಾಗಿ ಮಾತ್ರವಲ್ಲ, ವಿರೋಧ ಪಕ್ಷವಾಗಿಯೂ ಜವಾಬ್ದಾರಿಯುತವಾಗಿ ನಡೆದುಕೊಳ್ಳುವಲ್ಲಿ ಬಿಜೆಪಿ ಸೋತಿದೆ.…— Priyank Kharge / ಪ್ರಿಯಾಂಕ್ ಖರ್ಗೆ (@PriyankKharge)July 10, 2023
ವಿರೋಧ ಪಕ್ಷದ ನಾಯಕನಿಲ್ಲದೆ ರಾಜ್ಯಪಾಲರ ಭಾಷಣ ಆಯಿತು. ಬಜೆಟ್ ಮಂಡನೆಯಾಯ್ತು, ಸದನ ಶುರುವಾಗಿ ಒಂದು ವಾರಕ್ಕೂ ಹೆಚ್ಚು ದಿನಗಳಾದವು.ಕರ್ನಾಟಕದ ವಿಧಾನಸಭೆಯ ಭವ್ಯ ಪರಂಪರೆಗೆ ಮೊದಲ ಬಾರಿ ಇಂತಹದ್ದೊಂದು ಕಪ್ಪು ಚುಕ್ಕೆ ಅಂಟಿದೆ.ಆಡಳಿತ ಪಕ್ಷವಾಗಿ ಮಾತ್ರವಲ್ಲ, ವಿರೋಧ ಪಕ್ಷವಾಗಿಯೂ ಜವಾಬ್ದಾರಿಯುತವಾಗಿ ನಡೆದುಕೊಳ್ಳುವಲ್ಲಿ ಬಿಜೆಪಿ ಸೋತಿದೆ.…
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eighteen − ten =
Remember me
