ಬೆಂಗಳೂರು:ಎಂಬಿ ಪಾಟೀಲ್, 5 ವರ್ಷವೂ ಸಿದ್ದರಾಮಯ್ಯರೇ ಮುಖ್ಯಮಂತ್ರಿಯಾಗಿ ಮುಂದುವರಿಯುತ್ತಾರೆ ಎಂದು ನೀಡಿದ್ದ ಹೇಳಿಕೆ ಸಾಕಷ್ಟು ಗೊಂದಲ ಸೃಷ್ಟಿಸಿದ್ದು ಮಾತ್ರ ಸುಳ್ಳಲ್ಲ. ಕಡೆಗೆ ಎಂಬಿ ಪಾಟೀಲ್ ಯೂಟರ್ನ್ ಹೊಡೆದು ಸ್ಪಷ್ಟನೆ ನೀಡಿದ್ದರು. ಇದೀಗ ಈ ವಿಚಾರಕ್ಕೆ ತೆರೆ ಎಳೆಯುವ ರೀತಿಯಲ್ಲಿ ಸಚಚಿವ ಪ್ರಿಯಾಂಕ್ ಖರ್ಗೆ ಹೇಳಿಕೆ ನೀಡಿದ್ದಾರೆ.
ತಮ್ಮ ಹೇಳಿಕೆಯಲ್ಲಿ ಪ್ರಿಯಾಂಕ ಖರ್ಗೆ, “ಈ ವಿಚಾರ ಮಲ್ಲಿಕಾರ್ಜುನ ಖರ್ಗೆ , ವೇಣುಗೋಪಾಲ್, ಸುರ್ಜೇವಾಲ, ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಅವರಿಗೆ ಮಾತ್ರ ಗೊತ್ತಿದೆ. ಇದು ಆಂತರಿಕವಾಗಿ ನಡೆದಿರುವ ಚರ್ಚೆ. ಅವರನ್ನ ಬಿಟ್ಟು ಈ ವಿಚಾರ ಬೇರೆಯವರಿಗೆ ಗೊತ್ತಿಲ್ಲ. ಶಾಸಕಾಂಗ ಪಕ್ಷದ ಸಭೆಯಲ್ಲೂ ಈ ವಿಚಾರ ಚರ್ಚೆ ಆಗಿಲ್ಲ.
ಈಗ ನಮ್ಮ ಮುಂದಿರುವುದು ಉತ್ತಮ ಆಡಳಿತ ನೀಡುವ ವಿಚಾರ. ಜನರ ಆಶೋತ್ತರಗಳನ್ನ ನೀಡುವ ವಿಚಾರ, ಆ ಬಗ್ಗೆ ನಮ್ಮ ಗಮನವಿದೆ. ಪವರ್ ಶೇರಿಂಗ್ ವಿಚಾರ ಹೈಕಮಾಂಡ್ ನೋಡಿಕೊಳ್ಳಲಿದೆ. ಈ ಬಗ್ಗೆ ಯಾರು ಗೊಂದಲ ಸೃಷ್ಟಿಸಬಾರದು. ಎಂಬಿ ಪಾಟೀಲ್ ಅವರಿಗೆ ಏನು ಮಾಹಿತಿ ಇದ್ಯೋ ನನಗೆ ಗೊತ್ತಿಲ್ಲ. ನನಗೆ ಗೊತ್ತಿರುವುದನ್ನ ಹೇಳಿದ್ದೇನೆ” ಎಂದು ಹೇಳಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twelve − 9 =
Remember me
