ಬೆಂಗಳೂರು:ಕರ್ನಾಟಕ ಸರ್ಕಾರದ ಮಾಹಿತಿ ತಂತ್ರಜ್ಞಾನ ಹಾಗೂ ಜೈವಿಕ ತಂತ್ರಜ್ಞಾನ ಇಲಾಖೆಯು ಜೈವಿಕ ತಂತ್ರಜ್ಞಾನ ನೀತಿಯನ್ನು ಅಳವಡಿಸಿಕೊಂಡಿದ್ದು, ಈಗ ಮುಂದುವರೆದ ತಂತ್ರಜ್ಞಾನವಾಗಿ ಅಭಿವೃದ್ಧಿಗೊಂಡಿರುವ ಕೃತಕ ಬುದ್ಧಿಮತ್ತೆ (ಆರ್ಟಿಫಿಷಿಯಲ್ ಇಂಟಲಿಜೆನ್ಸ್) ಮೂಲಕ ಜೈವಿಕ ತಂತ್ರಜ್ಞಾನ ಕ್ಷೇತ್ರದಲ್ಲಿ ಮತ್ತಷ್ಟು ಅಭಿವೃದ್ಧಿ ಸಾಧಿಸುವಲ್ಲಿ ಸರ್ಕಾರ ಬದ್ಧವಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಮಾಹಿತಿ ತಂತ್ರಜ್ಞಾನ ಹಾಗೂ ಜೈವಿಕ ತಂತ್ರಜ್ಞಾನ ಇಲಾಖೆಯ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.
ಇದನ್ನೂ ಓದಿ:VIDEO| ಬಸ್​ಗೆ ಬೆಂಕಿ: ಪ್ರಾಣಾಪಾಯದಿಂದ ಪಾರಾದ ಸುಮಾರು 45 ಪ್ರಯಾಣಿಕರು
ನಗರದ ರಾಡಿಸನ್ ಬ್ಲೂ ಏಟ್ರಿಯಾ ಹೋಟೆಲಿನಲ್ಲಿ ಏಟ್ರಿಯಾ ವಿಶ್ವವಿದ್ಯಾಲಯದ ಉತ್ಕೃಷ್ಟತೆಯ ಕೇಂದ್ರ ಮತ್ತು ಸ್ವಿಸ್ನೆಕ್ಸ್ ಸಂಸ್ಥೆಯ ಸಹಯೋಗದಲ್ಲಿ ನಡೆದ ಜೀವವೈವಿಧ್ಯ ರಕ್ಷಣೆಯಲ್ಲಿ ಕ್ರಾಂತಿಕಾರಕ ಬದಲಾವಣೆಗಳನ್ನು ತರುವ ನಿರೀಕ್ಷೆ ಇರುವ ಡಿಜಿಟಲ್ ತಂತ್ರಜ್ಞಾನದ ಮೂಲಕ ಜೀವ ವೈವಿಧ್ಯ ಸಂರಕ್ಷಣೆಗಾಗಿ ರೂಪಿಸಲಾಗಿರುವ ಜಾಗತಿಕ ಮುಕ್ತ ವೇದಿಕೆಯ ಮೊದಲ ಅಂತಾರಾಷ್ಟ್ರೀಯ ಸಮ್ಮೇಳನದಲ್ಲಿ ಭಾಗವಹಿಸಿ ಮಾತನಾಡಿದರು.
ಜೈವಿಕ ಬದಾಲಾವಣೆಗಳನ್ನು ಪರಿಣಾಮಕಾರಿಯಾಗಿ ಕಾರ್ಯಗತಗೊಳಿಸುವ ಸಾಧ್ಯತೆಗಳ ಬಗ್ಗೆ ಸೆಂಟರ್ ಆಫ್ ಎಕ್ಸಲೆನ್ಸ್ ನೆರವನ್ನೂ ಪಡೆಯಲಾಗುವುದು. ಈ ನಿಟ್ಟಿನಲ್ಲಿ ಸಾರ್ವಜನಿಕರಲ್ಲಿ ಅರಿವು ಮೂಡಿಸ ಬೇಕಾದ ಅವಶ್ಯಕತೆಯಿದೆ. ವಿಶ್ವದಲ್ಲಿ ಇಂದಿನ ಪರಿಸರ ಅವನತಿಯನ್ನು ಎದುರಿಸಲು ಶಿಕ್ಷಣ, ಉದ್ಯಮ ಮತ್ತು ಸಂರಕ್ಷಣೆಯ ಮಧ್ಯಸ್ಥಗಾರರನ್ನು ಏಕೀಕೃತವಾಗಿ ಒಳಪಡಿಸುವ ನಿರ್ಣಾಯಕ ಅಗತ್ಯವಿದೆ. ಸುಸ್ಥಿರ ಬೆಳವಣಿಗೆ ಮತ್ತು ವನ್ಯಜೀವಿ ಸಂರಕ್ಷಣೆಗಾಗಿ ತಂತ್ರಜ್ಞಾನ-ಚಾಲಿತ ಪರಿಹಾರಗಳನ್ನು ರೂಪಿಸುವಲ್ಲಿ ದೇಶದ ಐಟಿ ರಾಜಧಾನಿಯಾದ ಬೆಂಗಳೂರು ಮತ್ತು ಕರ್ನಾಟಕ ಮುಂದಾಳತ್ವ ವಹಿಸಬೇಕಾದ ಅವಶ್ಯಕತೆಯಿದೆ ಎಂದು ಹೇಳಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:16 + nine =
Remember me
