ಕಲಬುರಗಿ:ಮುಂದಿನ ಕೆಲವೇ ತಿಂಗಳುಗಳಲ್ಲಿ ಲೋಕಸಭೆ ಚುನಾವಣೆ ನಡೆಯಲಿದ್ದು, ಮಹತ್ವದ ಬೆಳವಣಿಗೆ ಒಂದರಲ್ಲಿ ಕಾಂಗ್ರೆಸ್​ ತೊರೆದು ಮಾಜಿ ಸಿಎಂ ಜಗದೀಶ್​ ಶೆಟ್ಟರ್​ ಬಿಜೆಪಿ ಸೇರ್ಪಡೆಯಾಗುವ ಘರ್​ವಾಪ್ಸಿ ಮಾಡಿದ್ದಾರೆ. ಇನ್ನು ಈ ಕುರಿತು ಪ್ರತಿಕ್ರಿಯಿಸಿರುವ ಸಚಿವ ಪ್ರಿಯಾಂಕ ಖರ್ಗೆ ಕೇಂದ್ರ ಸರ್ಕಾರ ಜಗದೀಶ್ ಶೆಟ್ಟರ್ ಅವರಿಗೆ ಐಟಿ, ಇಡಿ ಭಯ ತೋರಿಸಿದ್ದರಿಂದ ಅವರು ದಿಢೀರ್ ಆಗಿ ಬಿಜೆಪಿ ಸೇರ್ಪಡೆಯಾಗಿರಬಹುದು ಎಂದಿದ್ದಾರೆ.
ಕಲಬುರಗಿಯಲ್ಲಿ ಈ ಕುರಿತು ಮಾತನಾಡಿದ ಪ್ರಿಯಾಂಕ ಖರ್ಗೆ, ವಿರೋಧ ಪಕ್ಷದ ನಾಯಕರನ್ನು ಹೆಣೆಯಲ್ಲು ಕೇಂದ್ರ ಸರ್ಕಾರ ತನಿಖಾ ಸಂಸ್ಥೆಗಳನ್ನು ದುರುಪಯೋಗ ಪಡಿಸಿಕೊಳ್ಳುತ್ತಿದೆ. ಶೆಟ್ಟರ್ ಅವರನ್ನು ಸೆಳೆಯಲು ಇದೇ ತಂತ್ರ ಅನುಸರಿಸಿರಬಹುದು. ಶೆಟ್ಟರ್​ ಅವರನ್ನು ಕಾಂಗ್ರೆಸ್​ ಪಕ್ಷದಲ್ಲಿ ಗೌರವಯುತವಾಗಿ ನಡೆಸಿಕೊಳ್ಳಲಾಗಿತ್ತು ಈ ಬಗ್ಗೆ ಅವರೇ ಹೇಳಿಕೆ ನೀಡಿದ್ದಾರೆ.
ಬಿಜೆಪಿ ಸರ್ಕಾರಿ ಸಂಸ್ಥೆಗಳೆ ಸ್ಟಾರ್​ ಕ್ಯಾಂಪೇನರ್​ಗಳಾಗಿ ಕೆಲಸ ಮಾಡುತ್ತಿವೆ. ಇವುಗಳನ್ನು ಹೊರತುಪಡಿಸಿದರೆ ಬಿಜೆಪಿಗೆ ಬೇರೆ ಯಾರ ಗತಿಯೂ ಇಲ್ಲ. ತಾಕತ್ತಿದ್ದರೆ ವಿರೋಧ ಪಕ್ಷಗಳ ನಾಯಕರ ಮೇಲೆ ಇಡಿ, ಐಟಿಗಳನ್ನು ಛೂ ಬಿಡದೇ ಚುನಾವಣೆ ಎದುರಿಸಲಿ ನೋಡೋಣ. ಎಂಥ ಭ್ರಷ್ಟ ವ್ಯಕ್ತಿಯೇ ಇರಲಿ, ಆತ ಬಿಜೆಪಿ ವಾಷಿಂಗ್‌ ಮಷಿನ್‌ನಲ್ಲಿ ಹಾದು ಹೋದರೆ ಶುಭ್ರನಾಗುತ್ತಾನೆ ಎಂದು ಲೇವಡಿಯಾಡಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:9 + 8 =
Remember me
