ಬೆಂಗಳೂರು:ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ವಿರುದ್ಧ ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಿದ್ದ ನಿರ್ಧಾರವನ್ನು ಹಿಂಪಡೆಯಲು ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಿರುವುದಕ್ಕೆ ಬಿಜೆಪಿ ಟೀಕಿಸುತ್ತಿರುವುದರ ಕುರಿತು ಇದೀಗ ಸಚಿವ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯೆ ನೀಡಿದ್ದಾರೆ.
ಕರ್ನಾಟಕ ಸಚಿವ ಸಂಪುಟದ ನಿರ್ಧಾರದ ಕುರಿತು ಸಚಿವ ಪ್ರಿಯಾಂಕ್ ಖರ್ಗೆ ಅವರು, ‘‘ಅಂದಿನ ಬಿಜೆಪಿ ಸರ್ಕಾರ ಸಿಬಿಐಗೆ ಅನುಮತಿ ನೀಡಿರುವುದು ಕಾನೂನುಬಾಹಿರ, ಅವರದೇ ಮಾನದಂಡದಂತೆ ಅದು ಈಡೇರಿಲ್ಲ. ಅವರು ಸರ್ಕಾರವನ್ನು ಹೇಗೆ ದುರುಪಯೋಗಪಡಿಸಿಕೊಂಡಿದ್ದಾರೆ ಮತ್ತು ಕಾಂಗ್ರೆಸ್ ನಾಯಕರನ್ನು ಸಿಬಿಐ, ಐಟಿ ಮತ್ತು ಇಡಿ ಅಡಿಯಲ್ಲಿ ಬಂಧಿಸಿದರು, ಹೇಗೆ ಮಾರ್ಗಸೂಚಿಗಳನ್ನು ತಪ್ಪಾಗಿ ಗ್ರಹಿಸಿದರು ಎಂಬುದರ ಕುರಿತು ನಾನು ವಿವರವಾಗಿ ಮಾತನಾಡಿದ್ದೇನೆ. ಅವರ ಸರ್ಕಾರದ ಅಧಿಕಾರಿಗಳೇ ಎಫ್‌ಐಆರ್ ಇಲ್ಲ ಮತ್ತು ಸಿಬಿಐಗೆ ನೀಡಲು ಸಾಧ್ಯವಿಲ್ಲ ಎಂದು ಬರೆದಿದ್ದಾರೆ. ಹಾಗಾದರೆ, ಅಸ್ಪಷ್ಟತೆ ಎಲ್ಲಿದೆ? ಇದು ಸಂಪೂರ್ಣವಾಗಿ ರಾಜಕೀಯ ಪ್ರೇರಿತವಾಗಿದೆ” ಎಂದು ತಿಳಿಸಿದ್ದಾರೆ.
ಬಿಜೆಪಿಯವರು ಎಲ್ಲಾ ಕಡೆ ಸುಳ್ಳು ಸುದ್ದಿ ಕೊಡುತ್ತಿದ್ದಾರೆ. ಇದರಿಂದ ಜನರಲ್ಲಿಯೂ ಸಾಕಷ್ಟು ಗೊಂದಲಗಳಿವೆ. ಎಲ್ಲೋ ಒಂದು ಕಡೆ ಕಾಂಗ್ರೆಸ್ ಅಧಿಕಾರಕ್ಕೆ ಬಂದುಬಿಡುತ್ತೆ ಅಂತ ಇವರು ಈ ಸಂಚನ್ನು ಮಾಡಿದ್ದಾರೆ. ಡಿಕೆಶಿ, ಸಿದ್ದರಾಮಯ್ಯ, ಕಾಂಗ್ರೆಸ್​ ಕಟ್ಟಿಹಾಲಿಕ್ಕೆ ಹೀಗೆ ಮಾಡುತ್ತಿದ್ದಾರೆ ಎಂದು ಖರ್ಗೆ ತಿಳಿಸಿದ್ದಾರೆ.
#WATCH| Bengaluru: On the Karnataka Cabinet's decision to withdraw the consent given to CBI to investigate the disproportionate assets case against Deputy CM DK Shivakumar, Karnataka Minister Priyank Kharge says, "The then BJP's government…sanctioning to CBI itself was…pic.twitter.com/vlmcMy3vjr
— ANI (@ANI)November 24, 2023

ಡಿಕೆಶಿ ವಿರುದ್ಧದ ಸಿಬಿಐ ತನಿಖೆಗೆ ನೀಡಿದ್ದ ಅನುಮತಿ ವಾಪಸ್ ವಿವಾದ: ಸರ್ಕಾರದ ನಡೆಗೆ ಟೀಕೆಗಳ ಸುರಿಮಳೆಗೈದ ಕಮಲ ಪಾಳಯ


ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nine + fourteen =
Remember me
