ಬೆಂಗಳೂರು:ಪಿಎಸ್​​ಐ ನೇಮಕಾತಿ ಮರುಪರೀಕ್ಷೆ ನಡೆಸಲು ಇದೀಗ ಹೈಕೋರ್ಟ್​​ ತೀರ್ಪು ನೀಡಿದ್ದು, ಈ ಬಗ್ಗೆ ಪಂಚಾಯತ್​ ಮತ್ತು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್​ ಖರ್ಗೆ ಈ ರೀತಿ ಟ್ವೀಟ್​ ಮಾಡಿದ್ದಾರೆ.
ಇದನ್ನೂ ಓದಿ:ಅಬ್ಬಬ್ಬಾ 7 ಕೋಟಿ ರೂಪಾಯಿ! ಮೀನುಗಾರನ ಜೀವನವನ್ನೇ ಬದಲಿಸಿತು ಅಪರೂಪದ ಮೀನು
“ಕರ್ನಾಟಕದ ಉಚ್ಚ ನ್ಯಾಯಾಲಯವು ಪಿಎಸ್​ಐ ನೇಮಕಾತಿ ಪರೀಕ್ಷಾ ಅಕ್ರಮ ಪ್ರಕರಣದಲ್ಲಿ ನೀಡಿರುವ ತೀರ್ಪು ಅತ್ಯಂತ ಸ್ವಾಗತಾರ್ಹ. ಹಿಂದೆ ನಡೆದಿರುವ 545 ಪಿಎಸ್ಐ ನೇಮಕಾತಿ ಪರೀಕ್ಷೆಯನ್ನು ಸಂಪೂರ್ಣ ರದ್ದುಗೊಳಿಸಲು ಆದೇಶಿಸಿ ಸ್ವತಂತ್ರ ಸಂಸ್ಥೆಯಿಂದ ಮತ್ತೆ ಮರುಪರೀಕ್ಷೆ ನಡೆಸಬೇಕು ಎಂದು ಆದೇಶಿಸಿರುವುದು ಹಿಂದಿನ ಬಿಜೆಪಿ ಸರ್ಕಾರದ ದುಷ್ಟ ಆಡಳಿತಕ್ಕೆ ಉಚ್ಚ ನ್ಯಾಯಾಲಯದ ಸಾಕ್ಷಿ ಮುದ್ರೆಯಾಗಿದ್ದು, ಪರೀಕ್ಷೆಯಲ್ಲಿ ಅಕ್ರಮ ನಡೆದೇ ಇಲ್ಲಾ ಎಂದು ಹಲವಾರು ಬಾರಿ ಸದನಕ್ಕೆ ವಾದಿಸಿದ್ದ ಹಿಂದಿನ ಬಿಜೆಪಿ ಸರ್ಕಾರದ ಆಡಳಿತ ವೈಫಲ್ಯಕ್ಕೆ ಹಾಗೂ ಪ್ರಕರಣವನ್ನು ಹಳ್ಳ ಹಿಡಿಸಲು ತನಿಖೆ ಮೇಲೆ ಪ್ರಭಾವ ಬೀರಿದ ಮತ್ತು ಆರೋಪಿಗಳನ್ನು ರಕ್ಷಿಸಲು ಪ್ರಯತ್ನಿಸಿದ್ದ ಅಂದಿನ ಬಿಜೆಪಿ ಸಚಿವರಿಗೆ ಛೀಮಾರಿಗೆ ಹಾಕಿದಂತೆ” ಎಂದರು.
ಕರ್ನಾಟಕದ ಉಚ್ಚ ನ್ಯಾಯಾಲಯವು PSI ನೇಮಕಾತಿ ಪರೀಕ್ಷಾ ಅಕ್ರಮ ಪ್ರಕರಣದಲ್ಲಿ ನೀಡಿರುವ ತೀರ್ಪು ಅತ್ಯಂತ ಸ್ವಾಗತಾರ್ಹ.
ಹಿಂದೆ ನಡೆದಿರುವ 545 ಪಿಎಸ್ಐ ನೇಮಕಾತಿ ಪರೀಕ್ಷೆಯನ್ನು ಸಂಪೂರ್ಣ ರದ್ದುಗೊಳಿಸಲು ಆದೇಶಿಸಿ ಸ್ವತಂತ್ರ ಸಂಸ್ಥೆಯಿಂದ ಮತ್ತೆ ಮರುಪರೀಕ್ಷೆ ನಡೆಸಬೇಕು ಎಂದು ಆದೇಶಿಸಿರುವುದು ಹಿಂದಿನ ಬಿಜೆಪಿ ಸರ್ಕಾರದ ದುಷ್ಟ ಆಡಳಿತಕ್ಕೆ…
— Priyank Kharge / ಪ್ರಿಯಾಂಕ್ ಖರ್ಗೆ (@PriyankKharge)November 10, 2023

“ಆಗಿರುವ ಅಕ್ರಮದ ಸಂಪೂರ್ಣ ಚಿತ್ರಣವನ್ನು ನ್ಯಾಯಾಲಯಕ್ಕೆ ಸಮರ್ಥವಾಗಿ ಮನವರಿಕೆ ಮಾಡಿಸಿ 56,000ಕ್ಕೂ ಹೆಚ್ಚು ಆಕಾಂಕ್ಷಿಗಳ ಪರವಾಗಿ ತೀರ್ಪು ಬರುವಂತೆ ಮಾಡಿರುವ ನಮ್ಮ ಸರ್ಕಾರದ ವಕೀಲರ ತಂಡಕ್ಕೂ ಈ ಸಂದರ್ಭದಲ್ಲಿ ಅಭಿನಂದನೆ ಸಲ್ಲಿಸುತ್ತೇನೆ. ಈ ಗೆಲುವು ಬಿಜೆಪಿಯ ಭ್ರಷ್ಟ ಆಡಳಿತದ ವಿರುದ್ಧ ಸಿಡಿದೆದ್ದು ಸಂಘಟಿತರಾಗಿ, ಪ್ರಕರಣವನ್ನು ಮುನ್ನಲೆಗೆ ತರಲು ಹೋರಾಡಿದ ಎಲ್ಲಾ ನ್ಯಾಯಯುತ ಪಿಎಸ್ಐ ಉದ್ಯೋಗ ಆಕಾಂಕ್ಷಿಗಳ ಗೆಲುವಾಗಿದೆ” ಎಂದು ಟ್ವೀಟ್​ ಮಾಡಿ ತಿಳಿಸಿದ್ದಾರೆ.
‘ಗರಡಿ’ ರಿಲೀಸ್​; ಮಲ್ಟಿಪ್ಲೆಕ್ಸ್​ಗಳಿಗೆ ಖಡಕ್​ ಎಚ್ಚರಿಕೆ ಕೊಟ್ಟ ಬಿ.ಸಿ. ಪಾಟೀಲ್

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eighteen + eight =
Remember me
