ಬೆಂಗಳೂರು:ಹತ್ರಾಸ್​ನಲ್ಲಿ ಗ್ಯಾಂಗ್​ರೇಪ್​ಗೆ ಒಳಗಾಗಿ ಮೃತಪಟ್ಟ ದಲಿತ ಯುವತಿಯ ಮನೆಗೆ ಭೇಟಿ ಕೊಡಲು ಹೋದ ಕಾಂಗ್ರೆಸ್​ ನಾಯಕರಾದ ರಾಹುಲ್​ ಗಾಂಧಿ, ಪ್ರಿಯಾಂಕಾ ಗಾಂಧಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಕ್ಕೆ ದೇಶಾದ್ಯಂತ ಕಾಂಗ್ರೆಸ್​ ಮುಖಂಡರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಇದೀಗ ಜೆಡಿಎಸ್​ ವರಿಷ್ಠ, ಮಾಜಿ ಪ್ರಧಾನಿ ಎಚ್​.ಡಿ.ದೇವೇಗೌಡರು ಪ್ರಿಯಾಂಕಾ ಮತ್ತು ರಾಹುಲ್​ ಬಿಡುಗಡೆಗೆ ಆಗ್ರಹಿಸಿದ್ದಾರೆ.
ಟ್ವೀಟ್ ಮಾಡಿರುವ ದೇವೇಗೌಡರು, ರಾಹುಲ್​ ಗಾಂಧಿ, ಪ್ರಿಯಾಂಕಾ ಗಾಂಧಿ ಮತ್ತು ಇತರ ಕಾಂಗ್ರೆಸ್​ ನಾಯಕರನ್ನು ಉತ್ತರ ಪ್ರದೇಶ ಸರ್ಕಾರ ಅತ್ಯಂತ ಕಾಳಜಿ ಮತ್ತು ಎಚ್ಚರಿಕೆಯಿಂದ ನಡೆಸಿಕೊಳ್ಳಬೇಕು. ಅವರು ನ್ಯಾಯಕ್ಕಾಗಿ ಹೋರಾಡುತ್ತಿದ್ದಾರೆ. ಪ್ರಜಾಪ್ರಭುತ್ವದ ರಾಷ್ಟ್ರದಲ್ಲಿ ಪ್ರತಿಭಟನೆ ಮಾಡುವ ಹಕ್ಕು ಎಲ್ಲರಿಗೂ ಇದೆ. ಕೂಡಲೇ ಅವರನ್ನು ಬಿಡುಗಡೆ ಮಾಡಿ ಎಂದು ಒತ್ತಾಯಿಸಿದ್ದಾರೆ.ಇದನ್ನೂ ಓದಿ:ಮತ್ತೆ ಕಾಂಗ್ರೆಸ್​ ಜತೆ ಮೈತ್ರಿ? -ಎಚ್​. ಡಿ.ಕುಮಾರಸ್ವಾಮಿ ಏನು ಹೇಳಿದ್ದಾರೆ ನೋಡಿ…!
ಕಾಂಗ್ರೆಸ್ ನಾಯಕರಾದ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್​ ಮತ್ತಿತರರು ಯೋಗಿ ಸರ್ಕಾರದ ವಿರುದ್ಧ ಕಿಡಿಕಾರುತ್ತಿದ್ದಾರೆ. ನ್ಯಾಯಕ್ಕಾಗಿ ಹೋರಾಟ ಮಾಡುತ್ತಿರುವವರ ಮೇಲೆ ಲಾಠಿ ಚಾರ್ಜ್​ ಮಾಡಿ, ಬಂಧಿಸಿದ್ದು ಅಕ್ಷಮ್ಯ ಅಪರಾಧ ಎಂದು ಹೇಳಿದ್ದಾರೆ.
ಉತ್ತರ ಪ್ರದೇಶದಲ್ಲಿ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿಯೇ ಸುರಕ್ಷಿತರಲ್ಲ: ಸಿದ್ದರಾಮಯ್ಯ ಆತಂಕ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × two =
Remember me
