ಬೆಂಗಳೂರು:ಕರ್ನಾಟಕ ವಿಧಾನಸಭೆ ಚುನಾವಣೆಯನ್ನು ಪ್ರಜಾಪ್ರಭುತ್ವದ ಹಬ್ಬದಂತೆ ಆಚರಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕ ವಿಧಾನಸಭೆ 2023ರ ಅಂಗವಾಗಿ ಮಾಧ್ಯಮಗಳಲ್ಲಿ ಕಾರ್ಯನಿವರ್ಹಿಸುತ್ತಿರುವ ಮತ್ತು ಹವ್ಯಾಸಿ ಪತ್ರಿಕಾ ಛಾಯಾಗ್ರಹಕರಿಗಾಗಿ ಮತದಾನದ ವಿಷಯದ ಬಗ್ಗೆ, ರಾಜ್ಯ ಮಟ್ಟದ ಛಾಯಾಚಿತ್ರ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿತ್ತು.
ಕರ್ನಾಟಕ ವಿಧಾನಸಭೆ ಚುನಾವಣೆ 2023ರ ಮತದಾನ ಮೇ 10 ರಂದು ನಡೆದ ಮತದಾನದಲ್ಲಿ, ರಾಜ್ಯ ಮಟ್ಟದ ಛಾಯಾಚಿತ್ರ ಸ್ಪರ್ಧೆಯ ಮೂಲಕ ಚುನಾವಣಾ ಸಂಬಂಧಿತ ಅತ್ಯುತ್ತಮ ಹಾಗೂ ಸಂಗ್ರಹಯೋಗ್ಯ ಛಾಯಾಚಿತ್ರಗಳನ್ನು ಕೇಂದ್ರ ಚುನಾವಣಾ ಆಯೋಗ ಪ್ರಶಂಸಿವುದರ ಜತೆಗೆ ತನ್ನ ವರದಿ ಹಾಗೂ ಪುಸ್ತಕಗಳ ಮುಖವುಟಗಳಲ್ಲಿ ಬಳಸಿಕೊಂಡಿತ್ತು.
ಈ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ವಿಧಾನಸಭೆ ಚುನಾವಣೆ 2023 ನಿಮಿತ್ತ ನಡೆದ ರಾಜ್ಯ ಮಟ್ಟದ ಛಾಯಾಚಿತ್ರ ಸ್ಪರ್ಧೆಯ ವಿಜೇತರನ್ನು ಚುನಾವಣಾ ಆಯೋಗ ಗುರುವಾರ ಘೋಷಿಸಿದೆ. ಮೇ 10ರಂದು ನಡೆದ ಮತದಾನದ ವಿಷಯಗಳಿಗೆ ಸಂಬಂಧಿಸಿದಂತೆ ನಡೆದ ಸ್ಪರ್ಧೆಗೆ ಛಾಯಾಚಿತ್ರಗಳನ್ನು ಕಳುಹಿಸಲು ಕಳುಹಿಸಲು ಮೇ 20 ಕೊನೆಯ ದಿನವಾಗಿತ್ತು.
ರಾಜ್ಯದ ವಿವಿಧ ಮಾಧ್ಯಮಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಒಟ್ಟು 63 ಛಾಯಾಗ್ರಾಹಕರು/ಹವ್ಯಾಸಿ ಛಾಯಾಗ್ರಾಹಕರು ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ಸೂಕ್ತ ಶೀರ್ಷಿಕೆಯೊಂದಿಗೆ 5 ಚಿತ್ರಗಳನ್ನು ಕಳುಹಿಸುವಂತೆ ತಿಳಿಸಲಾಗಿತ್ತು. ಸ್ಪರ್ಧೆಯಲ್ಲಿ ಸಲ್ಲಿಕೆಯಾಗಿದ್ದ ಫೋಟೋಗಳನ್ನು ಕೂಲಂಕುಷವಾಗಿ ಪರಿಶೀಲಿಸಿ ಸಮಿತಿಯನ್ನು ಸಹ ಆಯೋಗದ ವತಿಯಿಂದ ರಚಿಸಲಾಗಿತ್ತು.
ಗುರುವಾರ ನಡೆದ ಆಯ್ಕೆ ಸಮಿತಿ ಸಭೆಯಲ್ಲಿ ಉತ್ತಮ ಛಾಯಾಚಿತ್ರಗಳನ್ನು ತೆಗೆದ ವಿಜೇತರನ್ನು ಘೋಷಿಸಲಾಗಿದ್ದು ಒಟ್ಟು 6 ಮಂದಿಗೆ ಬಹುಮಾನ ಲಭಿಸಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × 5 =
Remember me
