ಬೆಂಗಳೂರು :ಬಿಜೆಪಿ ಪರವಾಗಿ ‘ಹಾಸನ ಪ್ರೀತಂ ಜೆ. ಗೌಡ ಎಂಎಲ್‌ಎ’ ವಾಟ್ಸ್‌ಆ್ಯಪ್ ಗ್ರೂಪ್‌ನಲ್ಲಿ ಪ್ರಚಾರ ಕೈಗೊಂಡ ಆರೋಪದ ಹಿನ್ನೆಲೆಯಲ್ಲಿ ಹಾಸನದ ಶಾಲಾಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪ ನಿರ್ದೇಶಕರ ಕಚೇರಿಯ ಪ್ರಥಮ ದರ್ಜೆಯ ಸಹಾಯಕ ನೌಕರ ಬಿ.ಎಚ್ ಮಂಜುನಾಥ್ ಅವರನ್ನು ಹುದ್ದೆಯಿಂದ ಅಮಾನುತುಗೊಳಿಸಿ ಜಿಲ್ಲಾ ಚುನಾವಣಾ ಅಧಿಕಾರಿ ಹೊರಡಿಸಿದ್ದ ಆದೇಶಕ್ಕೆ ಹೈಕೋರ್ಟ್ ತಡೆ ನೀಡಿದೆ. ಅಲ್ಲದೆ ಪ್ರಕರಣ ಸಂಬಂಧ ಪ್ರತಿವಾದಿಗಳಿಗೆ ನೋಟಿಸ್ ಜಾರಿಗೊಳಿಸಿದೆ.
ಅಮಾನತು ಆದೇಶವನ್ನು ರದ್ದುಗೊಳಿಸುವಂತೆ ಕೋರಿ ಬಿ.ಎಚ್.ಮಂಜುನಾಥ್ ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಎಸ್.ಸುನೀಲ್ ದತ್ತ ಯಾದವ್ ಹಾಗೂ ನ್ಯಾಯಮೂರ್ತಿ ವೆಂಕಟೇಶ್ ನಾಯ್ಕ. ಟಿ ಅವರ ವಿಭಾಗೀಯ ಪೀಠ ವಿಚಾರಣೆ ನಡೆಸಿತು.
ಈ ವೇಳೆ ಅರ್ಜಿದಾರರ ಪರ ವಕೀಲ ಎಂ.ಕೆ.ಪ್ರಥ್ವೀಶ್, ಅರ್ಜಿದಾರರು ಯಾವುದೇ ರಾಜಕೀಯ ಪಕ್ಷದ ಪರವಾಗಿ ಕೆಲಸ ಮಾಡಿಲ್ಲ. ಜತೆಗೆ ಯಾವುದೇ ರಾಜಕೀಯ ಪಕ್ಷದ ಪ್ರಚಾರದಲ್ಲೂ ಭಾಗಿಯಾಗಿಲ್ಲ. ಅವರು ರವಾನೆ ಮಾಡಿದ್ದಾರೆ ಎನ್ನಲಾದ ಸಂದೇಶವನ್ನು ಅವರ ಸಂಬಂಧಿ ಮುಖೇಶ ಗೌಡ ಅವರು ಪಾವರ್ಡ್ ಮಾಡಿದ್ದು, ಈ ಸಂದೇಶವನ್ನು ಅರ್ಜಿದಾರರು ಸೃಷ್ಟಿಸಿಲ್ಲ ಎಂದು ವಾದ ಮಂಡಿಸಿದರು.
ಅಲ್ಲದೆ, 35 ವರ್ಷದ ಸೇವಾ ಅವಧಿಯಲ್ಲಿ ಅರ್ಜಿದಾರರು ಯಾವುದೇ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಿಲ್ಲ. ಹಾಗಾಗಿ ಅವರ ಮೇಲೆ ದಾಖಲಾದ ದೂರಿನಲ್ಲಿ ಸಂತಾಂಶವಿರುವುದಿಲ್ಲ, ಇದನ್ನು ಪರಿಗಣಿಸಿ ಜಿಲ್ಲಾ ಚುನಾವಣಾ ಅಧಿಕಾರಿ ಹೊರಡಿಸಿದ್ದ ಆದೇಶವನ್ನು ರದ್ದುಗೊಳಿಸುವಂತೆ ನ್ಯಾಯಪೀಠದ ಮುಂದೆ ಮನವಿ ಮಾಡಿದರು.
ಕೆಲಕಾಲ ಅರ್ಜಿದಾರರ ವಾದ ಆಲಿಸಿದ ಹಾಗೂ ಈ ಸಂಬಂಧ ಸಲ್ಲಿಕೆಯಾದ ದಾಖಲೆಗಳನ್ನು ಪರಿಶೀಲಿಸಿದ ನ್ಯಾಯಪೀಠ, ಸದರಿ ಕ್ಷೇತ್ರದ ಮತದಾನ ಪ್ರಕ್ರೀಯೆ ಪೂರ್ಣಗೊಂಡಿದ್ದು ಹಾಗಾಗಿ ಅರ್ಜಿದಾರನ್ನು ಅಮಾನತ್ತಿನಲ್ಲಿ ಇರಿಸುವುದು ಸೂಕ್ತವಲ್ಲ ಎಂದು ತಿಳಿಸಿ ಜಿಲ್ಲಾ ಚುನಾವಣಾ ಅಧಿಕಾರಿ ಹೊರಡಿಸಿರುವ ಆದೇಶಕ್ಕೆ ತಡೆ ನೀಡಿದೆ, ಅಲ್ಲದೆ ಪ್ರಕರಣ ಸಂಬಂಧ ಪ್ರತಿವಾದಿಗಳಿಗೆ ನೋಟಿಸ್ ಜಾರಿಗೊಳಿಸಿ ವಿಚಾರಣೆಯನ್ನು ಮುಂದೂಡಿದೆ.
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:three + three =
Remember me
