ಬೆಂಗಳೂರು:ಯಶವಂತಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಸ್.ಟಿ. ಸೋಮಶೇಖರ್ ಅವರು ದೊಡ್ಡಬಿದರ ಕಲ್ಲು ವಾರ್ಡ್‌ನಲ್ಲಿ ಭರ್ಜರಿ ಪ್ರಚಾರ ನಡೆಸಿದರು. ಈ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಸೋಮಶೇಖರ್, ಕ್ಷೇತ್ರ ಮತ್ತು ರಾಜ್ಯದಲ್ಲಿ ಬಿಜೆಪಿ ಅಲೆ ಎದ್ದಿದೆ. ರಾಜ್ಯದಲ್ಲಿ ಮತ್ತೆ ಕಮಲ ಅರಳಲಿದ್ದು, ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೇರಲಿದೆ ಎಂದರು.
ಪ್ರತಿ ದಿನ ಜೆಡಿಎಸ್, ಕಾಂಗ್ರೆಸ್‌ನ ನೂರಾರು ಕಾರ್ಯ ಕರ್ತರು ಬಿಜೆಪಿಗೆ ಸೇರ್ಪಡೆಯಾಗುತ್ತಿದ್ದಾರೆ. ಕ್ಷೇತ್ರದಲ್ಲಿ ಕೈಗೊಂಡಿರುವ ಅಭಿವೃದ್ಧಿ ಕಾರ್ಯಗಳನ್ನು ಮೆಚ್ಚಿ ಹಾಗೂ ನನ್ನ ಮೇಲೆ ವಿಶ್ವಾಸವಿಟ್ಟು ಸೇರುತ್ತಿದ್ದಾರೆ ಎಂದು ಹೇಳಿದರು.
ಪಕ್ಷಕ್ಕೆ ನಿಷ್ಠಾವಂತ ಕಾರ್ಯಕರ್ತರ ಬೆಂಬಲವಿದೆ. ಅವರ ಪರಿಶ್ರಮದಿಂದ ಯಶವಂತಪುರದಲ್ಲಿ ಮತ್ತೆ ಬಿಜೆಪಿ ಬಾವುಟ ಹಾರಿಸಲಾಗುವುದು. ಈಗಾಗಲೆ ಕ್ಷೇತ್ರದ 493 ಬೂತ್‌ಗಳಿಗೆ ಭೇಟಿ ನೀಡಿದ್ದು, ಜನರ ಆಶೀರ್ವಾದ ದೊರಕಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಕಳೆದ 10 ವರ್ಷಗಳಿಂದಲೂ ನಿರಂತರವಾಗಿ ಜನಸೇವೆಯಲ್ಲಿ ತೊಡಗಿದ್ದೇನೆ. ಕರೊನಾ ಸಂಕಷ್ಟ ಸಂದರ್ಭದಲ್ಲಿ ಜನರ ಸಂಕಷ್ಟಗಳಿಗೆ ಸ್ಪಂದಿಸುವ ಕೆಲಸ ಮಾಡಲಾಗಿದೆ. ಕ್ಷೇತ್ರದ ಜನತೆಯ ಪ್ರೀತಿ, ಅನುಕಂಪ ನನ್ನ ಮೇಲಿದೆ. ಜೆಡಿಎಸ್‌ ಅಭ್ಯರ್ಥಿ ಮೇಲಲ್ಲ ಎಂದರು.
29ಕ್ಕೆ ಪ್ರಧಾನಿ ಮೋದಿ ಆಗಮಿಸಲಿದ್ದು, ನೈಸ್ ರೋಡ್ ಜಂಕ್ಷನ್ ಮೂಲಕ ಯಶವಂತಪುರ ಕ್ಷೇತ್ರಕ್ಕೆ ಭೇಟಿ ನೀಡಲಿದ್ದಾರೆ. ನೈಸ್ ರೋಡ್ ಜಂಕ್ಷನ್‌ನಿಂದ ಸುಂಕದಕಟ್ಟೆವರೆಗೆ ರೋಡ್ ಶೋ ಆಯೋಜಿಸಲಾಗುತ್ತಿದೆ ಎಂದು ತಿಳಿಸಿದರು.
ಮಾಯಸಂದ್ರ ಗ್ರಾಮದ 50ಕ್ಕೂ ಅಧಿಕ ಜೆಡಿಎಸ್‌ ಕಾರ್ಯಕರ್ತರು ಸೋಮಶೇಖರ್ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಗೊಂಡರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × 2 =
Remember me
