ಬೆಂಗಳೂರು: ಸಿಎಎ ವಿರೋಧಿಸಿ ನಡೆದ ಪ್ರತಿಭಟನಾ ಸಭೆಯಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ಆರೋಪದಲ್ಲಿ ಅಮೂಲ್ಯಾ ಲಿಯೋನಾ ವಿರುದ್ಧ ದಾಖಲಾಗಿರುವ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆಗೆ (ಎನ್‌ಐಎ) ವಹಿಸುವಂತೆ ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಕೆಯಾಗಿದೆ.
ಮಂಡ್ಯ ಮೂಲದ ವಕೀಲ ಎಚ್.ಎಲ್. ವಿಶಾಲ ರಘು ಅರ್ಜಿ ಸಲ್ಲಿಸಿದ್ದು, ಗೃಹ ಇಲಾಖೆ ಪ್ರಧಾನ ಕಾರ್ಯದರ್ಶಿ, ಡಿಜಿಪಿ, ನಗರ ಪೊಲೀಸ್ ಆಯುಕ್ತ, ಚಿಕ್ಕಪೇಟೆ ಎಸಿಪಿ, ಉಪ್ಪಾರಪೇಟೆ ಇನ್‌ಸ್ಪೆಕ್ಟರ್, ಎನ್‌ಐಎ ಹಾಗೂ ಅಮೂಲ್ಯಾ ಲಿಯೋನಾಳನ್ನು ಅರ್ಜಿಯಲ್ಲಿ ಪ್ರತಿವಾದಿ ಆಗಿಸಲಾಗಿದೆ.
ಇದನ್ನೂ ಓದಿ:ಸಿದ್ಧಗಂಗಾ ಮಠದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗೆ ಕರೊನಾ: ಇತರ 400 ವಿದ್ಯಾರ್ಥಿಗಳಿಗೆ ಆತಂಕ!
ಉಪ್ಪಾರಪೇಟೆ ಠಾಣೆ ಪೊಲೀಸರು ಮತ್ತು ತನಿಖಾಧಿಕಾರಿ ನಿಗದಿತ ಅವಧಿಯಲ್ಲಿ ತನಿಖಾ ವರದಿ ಮತ್ತು ದೋಷಾರೋಪ ಪಟ್ಟಿ ನ್ಯಾಯಾಲಯಕ್ಕೆ ಸಲ್ಲಿಸಿಲ್ಲ. ಇದರಿಂದಾಗಿಯೇ ಕಾನೂನು ಅವಕಾಶ ಬಳಸಿಕೊಂಡು ಅಮೂಲ್ಯಾ ಜಾಮೀನು ಪಡೆದಿದ್ದಾರೆ ಎಂದು ಅರ್ಜಿದಾರರು ಆರೋಪಿಸಿದ್ದಾರೆ.
ಕರ್ತವ್ಯಲೋಪ ಎಸಗಿರುವ ತನಿಖಾಧಿಕಾರಿಯನ್ನು ಅಮಾನತು ಮಾಡಲು ಹಾಗೂ ಅಮೂಲ್ಯಾ ಜಾಮೀನು ರದ್ದತಿಗೆ ಅರ್ಜಿ ಸಲ್ಲಿಸಲು ಸರ್ಕಾರಕ್ಕೆ ನಿರ್ದೇಶಿಸಬೇಕು, ಪ್ರಕರಣದ ತನಿಖೆಯನ್ನು ಎನ್‌ಐಎಗೆ ವಹಿಸಬೇಕು ಎಂದು ಕೋರಿದ್ದಾರೆ. ಇದೇ ಪ್ರಕರಣದಲ್ಲಿ ಪ್ರಾಸಿಕ್ಯೂಷನ್ ಪರ ವಾದ ಮಂಡಿಸಲು ವಕೀಲ ಐ.ಎಸ್. ಪ್ರಮೋದ್‌ಚಂದ್ರ ಅವರನ್ನು ವಿಶೇಷ ಅಭಿಯೋಜಕರನ್ನಾಗಿ ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ಕರೊನಾ ನಿಯಂತ್ರಣ: ಕೇಂದ್ರದ ಶ್ಲಾಘನೆಗೆ ಬಿಎಸ್‌ವೈ ಸಂತಸ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × 5 =
Remember me
